ಚಲಿಸುತ್ತಿದ್ದ ಮಿನಿ ಟೆಂಪೋ ಚಕ್ರ ಸ್ಫೋಟ, ವಾಹನ ಜಖಂ

Friday, October 9th, 2020
Tyre Blast

ಕಾಪು : ಹಳೆ ಸಾಮಗ್ರಿಗಳನ್ನು ತುಂಬಿಕೊಂಡು ಚಲಿಸುತ್ತಿದ್ದ ಮಿನಿ ಟೆಂಪೋ ಒಂದು ಚಕ್ರ ಸ್ಫೋಟಗೊಂಡು ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ನಾರಾಯಣ ಗುರು ಸಂಘದ ಸಮೀಪ ಗುರುವಾರ ನಡೆದಿದೆ. ಉಡುಪಿ ಕಡೆಯಿಂದ ಉಚ್ಚಿಲಕ್ಕೆ  ಚಲಿಸುತ್ತಿದ್ದ ಮಿನಿ ಟೆಂಪೊದ ಹಿಂಭಾಗದ ಚಕ್ರ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಅಪಘಾತದಲ್ಲಿ ಚಾಲಕ ಹಾಗೂ ಸಹ ಪ್ರಯಾಣಿಕ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ವಾಹನ ಜಖಂಗೊಂಡಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿದ್ದು, ತನಿಖೆ ಮಾಡಬೇಕಾಗಿದೆ : ಐವನ್

Friday, October 9th, 2020
Ivan

ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಅಂದಾಜು ವೆಚ್ಚವು ಈ ಯೋಜನೆಯ ಈ ಹಿಂದಿನ ಅಂದಾಜು ವೆಚ್ಚಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ  ಈ ಅಕ್ರಮಗಳ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಥವಾ ಲೋಕಾಯುಕ್ತ ತನಿಖೆ ನಡೆಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಅಕ್ಟೋಬರ್ 8 ರ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಸ್ಮಾರ್ಟ್ ಸಿಟಿ ಯೋಜನೆಯ ಅಂದಾಜು ವೆಚ್ಚ ಮತ್ತು ಡಿಪಿಆರ್ ಬಗ್ಗೆ ಸಾರ್ವಜನಿಕರಿಗೆ ಅನುಮಾನವಿದೆ. ಸ್ಮಾರ್ಟ್ ಸಿಟಿ […]

ಮಾನಸಿಕವಾಗಿ ನೊಂದ ಹದಿಮೂರರ ಬಾಲಕಿ ಆತ್ಮಹತ್ಯೆಗೆ ಶರಣು

Thursday, October 8th, 2020
pooja

ಮೂಡುಬಿದಿರೆ : ಸಹೋದರಿ ಬುದ್ದಿ ಮಾತು ಹೇಳಿದ ಕಾರಣ  ಮಾನಸಿಕವಾಗಿ ನೊಂದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ. ಕರುಣಾಕರ ಹಾಗೂ ಸುಶೀಲಾ ದಂಪತಿಯ ಪುತ್ರಿ ಪೂಜಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪೂಜಾ ಮಧ್ಯಾಹ್ನ ತನ್ನ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರೊಂದಿಗೆ ಜಗಳವಾಡಿ ಹೊಡೆದು ತೊಂದರೆ ನೀಡುತ್ತಿದ್ದಳು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಸಹೋದರಿ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದಾಗಿ ಖಿನ್ನತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ […]

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಅರ್ಚಕ ನೇಣಿಗೆ ಶರಣು

Thursday, October 8th, 2020
sarpa samskaara

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕೆಲಸ ನಿರ್ವಹಿಸುತ್ತಿದ್ದ ಅರ್ಚಕರೊಬ್ಬರು ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಗುರುವಾರ ಸಂಜೆ ವರದಿಯಾಗಿದೆ. ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ (55) ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಕ್ರಿಯಾಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು […]

ಸುಳ್ಯ : ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಗುಂಡಿಟ್ಟು ಕೊಲೆ ಮಾಡಿದ ಅಪರಿಚಿತರು

Thursday, October 8th, 2020
sampath

ಮಂಗಳೂರು: ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಂಪತ್‌ ಕುಮಾರ್‌ (35) ಎಂದು ಗುರುತಿಸಲಾಗಿದೆ. ಬೆಳಗ್ಗೆ 6  ಗಂಟೆ ಸುಮಾರಿಗೆ ಸಂಪತ್‌ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ  ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು  ತಿಳಿಸಿದ್ದಾರೆ.  ಸುಳ್ಯ ತಾಲೂಕಿನ ಶಾಂತಿನಗರದಲ್ಲಿ […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 447, ಸಾವು 7 ಮಂದಿ, ಉಡುಪಿ – 207

Wednesday, October 7th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ 447 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ, 7 ಮಂದಿ ಸಾವನ್ನಪ್ಪಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 207 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ ಜಿಲ್ಲೆಯಲ್ಲಿ 588ಕ್ಕೆ ತಲುಪಿದೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, ಬುಧವಾರ ಒಂದೇ ದಿನ 1,214 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾದವರ ಸಂಖ್ಯೆ 20 ಸಾವಿರಕ್ಕೇರಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ […]

ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ – ದಿವಾಕರ್ ಪಾಂಡೇಶ್ವರ್ 

Wednesday, October 7th, 2020
Paura-Karmika-Dinacharane

ಮಂಗಳೂರು : ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್ ಹೇಳಿದರು. ಬುಧವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರವನ್ನು ಪ್ರತಿನಿತ್ಯ ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರ. ಕೋವಿಡ್-19 ಸಂಕಷ್ಟದ ಸಮಯದಲ್ಲಿ ತಮ್ಮ ದೈನಂದಿನ ಕೆಲಸದಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪೌರಕಾರ್ಮಿಕರಿಗೆ ಅಭಿನಂದನೆಗಳು. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪಾಲಿಕೆ ಪ್ರಾಮಾಣಿಕ ಪ್ರಯತ್ನ […]

ಆಟೊ ರಿಕ್ಷಾ ಡಿಕ್ಕಿ : ಚಾಲಕ ಸಾವು, ಮೂವರಿಗೆ ಗಂಭೀರ ಗಾಯ

Wednesday, October 7th, 2020
AutoRikshaw

ಮಂಗಳೂರು  : ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ. ರಿಕ್ಷಾ ಚಾಲಕ ವಳಚ್ಚಿಲ್ ಪದವು ನಿವಾಸಿ ಸಲೀಂ ಮೃತಪಟ್ಟವರು. ಘಟನೆಯಲ್ಲಿ ಶಿಹಾಬ್ ಮತ್ತು ನಿಝಾಮುದ್ದೀನ್ ಎಂಬವರು ಗಾಯಗೊಂಡಿದ್ದಾರೆ. ಈ ಪೈಕಿ ಶಿಹಾಬ್‌ಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮಲ್ಪೆಯಿಂದ ಆಟೊ ರಿಕ್ಷಾದಲ್ಲಿ ಮೀನು ಹೇರಿಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಿಕರ್ನಕಟ್ಟೆ ತಲುಪಿದಾಗ ಆಟೊ ರಿಕ್ಷಾ ಚಾಲಕನ […]

ಪ್ರೊ.ಅಮೃತ ಸೋಮೇಶ್ವರ ಅವರಿಗೆ 2020ರ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ

Wednesday, October 7th, 2020
Amrutha Somehwara

ಮಂಗಳೂರು  : ಹಿರಿಯ ಸಾಹಿತಿ, ಜನಪದ ವಿದ್ವಾಂಸ, ನಿವೃತ್ತ ಪ್ರಾಧ್ಯಾಪಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ 2020ರ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಘೋಷಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತ ಯತೀಶ್‌ ಉಳ್ಳಾಲ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.  ಅ.10ರಂದು ಇಲ್ಲಿನ ಬಾಲವನದಲ್ಲಿ ನಡೆಯಲಿರುವ ಡಾ. ಕಾರಂತರ ಜನ್ಮ ದಿನಾಚರಣೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.  ಅಪರಾಹ್ನ 2.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕೊರೊನಾ ನಿಯಮಾವಳಿ ಹಿನ್ನೆಲೆಯಲ್ಲಿ ಈ ಬಾರಿ ಜನ್ಮದಿನಾಚರಣೆ ಸರಳವಾಗಿ ನಡೆಯಲಿದೆ. ಪ್ರೊ.ಅಮೃತ ಸೋಮೇಶ್ವರ ಖ್ಯಾತ […]

ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯಕ್ಕೆ ಪ್ರಾರಂಭ – ಕೋಟ ಶ್ರೀನಿವಾಸ ಪೂಜಾರಿ

Tuesday, October 6th, 2020
yakshagana

ಮಂಗಳೂರು :  ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯಕ್ಕೆ ಪ್ರದರ್ಶನಗೊಳ್ಳಲಿದೆ ಎಂದು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಯಕ್ಷಗಾನ ಮೇಳಗಳ ಸಂಚಾಲಕರ ಸಭೆಯನ್ನುದ್ಧೇಶಿಸಿ ಮಾತನಾಡಿದ ಅವರು, ಕೋವಿಡ್–19 ನಿಂದಾಗಿ ಯಕ್ಷಗಾನ ಕಲಾವಿದರ ಸ್ಥಿತಿ ಸಂಕಷ್ಟದಲ್ಲಿ ಸಿಲುಕಿದ್ದು, ಯಾವುದೇ ಕಲಾವಿದನಿಗೆ ಅನ್ಯಾಯವಾಗದಂತೆ ಶೀಘ್ರದಲ್ಲಿಯೇ ಸರಕಾರದಿಂದ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು […]