ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಜುಲೈ 16ರಂದು ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Monday, July 15th, 2024
Red Alert

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 16ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಕೂಡ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ […]

ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ 19 VTU ಶ್ರೇಣಿಗಳನ್ನು ಪಡೆದುಕೊಂಡಿದೆ

Monday, July 15th, 2024
Sahyadri

ಮಂಗಳೂರು : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು (ವಿಟಿಯು) 2023-24ನೇ ಶೈಕ್ಷಣಿಕ ವರ್ಷಕ್ಕೆ ಇತ್ತೀಚೆಗೆ ಬಿಡುಗಡೆ ಮಾಡಿದ ರ್ಯಾಂಕ್ ಪಟ್ಟಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (ಎಸ್‌ಸಿಇಎಂ) ವಿದ್ಯಾರ್ಥಿಗಳು 19 ರ್ಯಾಂಕ್ ಗಳನ್ನು ಪಡೆದಿದ್ದಾರೆ. ರಾಜ್ಯ ಮಟ್ಟದಲ್ಲಿ ಕಾಲೇಜು ಪಡೆದ ಗರಿಷ್ಠ ಸಂಖ್ಯೆಯ ಶ್ರೇಣಿಯೆಂದರೆ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್‌ಮೆಂಟ್, ಮಂಗಳೂರು. ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಡೇಟಾ ಸೈನ್ಸ್) ನ ಶ್ರೀವಿದ್ಯಾ ಮತ್ತು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ […]

ಡೆಂಗ್ಯೂ ನಿಯಂತ್ರಣ: ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಿ

Monday, July 15th, 2024
Dengue Insect

ಮಂಗಳೂರು : ಜಿಲ್ಲೆಯ ವಿವಿದೆಡೆ ಡೆಂಗ್ಯೂ ರೋಗ ಕಂಡುಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ಗಳು, ಬ್ಯಾರಲ್‍ಗಳು, ಹೂವಿನಕುಂಡ, ಹಳೆ ಟಯರ್‍ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ ಲಾರ್ವಾಗಳು ಉತ್ಪತ್ತಿಯಾಗುತ್ತವೆ. ಲಾರ್ವಾ ನಾಶದಿಂದಷ್ಟೇ ಡೆಂಗ್ಯೂ ನಿಯಂತ್ರಣ ಸಾಧ್ಯ. ಡೆಂಗ್ಯೂ ನಿಯಂತ್ರಣಕ್ಕಾಗಿ ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ. ಜಿಲ್ಲೆಯ […]

ತುಳು ಅಧಿಕೃತ ಭಾಷೆ : ಶಾಸಕರುಗಳಿಗೆ ತುಳು ಅಕಾಡೆಮಿ ಅಧ್ಯಕ್ಷರ ಒತ್ತಾಯ

Monday, July 15th, 2024
Tulu-Language

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕರಾವಳಿಯ ಶಾಸಕರು ಪ್ರಸಕ್ತ ವಿಧಾನ ಮಂಡಲದ ಅಧಿವೇಶನದಲ್ಲಿ ವಿಚಾರ ಪ್ರಸಾಪ ಮಾಡಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ತುಳು ಭಾಷಿಕರ ಬೇಡಿಕೆಗೆ ಕಳೆದ ಅಧಿವೇಶನದಲ್ಲಿ ಸರಕಾರ ಪೂರಕವಾಗಿ ಸ್ಪಂದಿಸಿರುತ್ತದೆ. ಕಳೆದ ವಿಧಾನಸೌಧ ಅಧಿವೇಶನದಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯ ವೇಳೆ ಒಂದಕ್ಕಿಂತ ಹೆಚ್ಚು ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಹೊಂದಿರುವ ಹೊರ […]

ಫ್ಯೂಸ್ ಹಾಕಲು ತೆರಳಿದ ಯುವಕ ವಿದ್ಯುತ್ ಆಘಾತಕ್ಕೆ ಬಲಿ

Monday, July 15th, 2024
Harish

ಉಪ್ಪಿನಂಗಡಿ : ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ಹರೀಶ (32) ಮೃತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃತಪಟ್ಟಿದ್ದಾರೆ.

ಮನೆಯಲ್ಲಿ ಬೆಂಕಿ ಅವಘಡ ಬಾರ್ ಉದ್ಯಮಿ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Monday, July 15th, 2024
Ramananda-shetty

ಉಡುಪಿ: ಅಂಬಲಪಾಡಿಯ ಗಾಂಧಿನಗರದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿದ್ದು ಮನೆ ಮಾಲಿಕ ಬಾರ್ ಉದ್ಯಮಿ ಮೃತಪಟ್ಟ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಅಂಬಲಪಾಡಿಯ ಬಾರ್ ಉದ್ಯಮಿ ರಮಾನಂದ ಶೆಟ್ಟಿ ಮೃತ ಪಟ್ಟವರು. ಅವರ ಪತ್ನಿ ಅಶ್ವಿನಿ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮನೆಮಂದಿ ಮಲಗಿದ್ದ ವೇಳೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದರ ಪರಿಣಾಮ ಇನ್ವರ್ಟರ್ ಸೇರಿದಂತೆ ಹಲವಾರು […]

ಭಾರೀ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

Monday, July 15th, 2024
kUMARADHARA

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಎರಡನೇ ಸಲ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚಿಸಲಾಗಿದೆ. ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದೆ. ಅಲ್ಲದೇ ಕುಮಾರಧಾರ ಉಪನದಿ ದರ್ಪಣ ತೀರ್ಥ […]

“ ಬೀಚ್ ಫೆಸ್ಟಿವಲ್ ನಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ -ಮೇಯರ್ ಸುಧೀರ್ ಶೆಟ್ಟಿ

Sunday, July 14th, 2024
Beach-Festival

ಮಂಗಳೂರು : “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ ಹಾಗೂ ಮಂಗಳೂರು ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜನೆಯಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ತಪಸ್ಯ ಫೌಂಡೇಶನ್ […]

ಕಾರ್ಕಳದಲ್ಲಿ ರಾಜಕೀಯ ಅಸ್ತಿತ್ವವೇ ಇಲ್ಲದೆ ಕಂಗಾಲಾಗಿರುವ ಕಾಂಗ್ರೆಸ್ ನಿಂದ ದಾಂಧಲೆ – ನವೀನ್ ನಾಯಕ್

Sunday, July 14th, 2024
naveen-nayak

ಕಾರ್ಕಳ : ಯಾವ ವೇದಿಕೆಯಲ್ಲಿ ಯಾವ ವಿಚಾರ ಪ್ರಸ್ತಾಪ ಮಾಡಬೇಕೆಂಬ ಪರಿಜ್ಞಾನವಿಲ್ಲದ ಕಾರ್ಕಳ ಕಾಂಗ್ರೆಸ್, ಕಾರ್ಕಳದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ದಾಂಧಲೆ ನಡೆಸಿ ತಾಲೂಕಿನ ಜನರಿಗೆ ಘೋರ ಅನ್ಯಾಯ ಎಸಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ನೀಡದಂತೆ ತಡೆದಿರುವುದು ಅಕ್ಷಮ್ಯ. ಕಾರ್ಕಳದ ಜನತೆ ಈ ಕಾಂಗ್ರೆಸ್ಸನ್ನು ಯಾವತ್ತಿಗೂ ಕ್ಷಮಿಸಲಾರರು ಎಂದು ಬಿಜೆಪಿಯ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ಆರೋಪಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ನೀಡುವ ಸದುದ್ದೇಶವನ್ನಿಟ್ಟುಕೊಂಡು, ಮಾನ್ಯ ಜಿಲ್ಲಾಧಿಕಾರಿ ಹಾಗೂ ಮಾನ್ಯ ಶಾಸಕರ ಉಪಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು […]

ಕೂಳೂರಿನ ಹಿಂದು ರುದ್ರಭೂಮಿ ಪರಿಸರದಲ್ಲಿ ಹತ್ತನೇ ತಿಂಗಳ ಸ್ವಚ್ಛ ಮಂಗಳೂರು ಅಭಿಯಾನದ ಶ್ರಮದಾನ ಸಂಪನ್ನ

Sunday, July 14th, 2024
Ramakrishna-Mission

ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಎರಡನೇ ಆವೃತ್ತಿಯ ಹತ್ತನೇ ತಿಂಗಳ ಸ್ವಚ್ಛತಾ ಅಭಿಯಾನವನ್ನು, ಭಾನುವಾರ ಬೆಳಗ್ಗೆ ಕೂಳೂರಿನ ಹಿಂದು ರುದ್ರಭೂಮಿ ಪರಿಸರದಲ್ಲಿ ನಡೆಯಿತು. ಎಮ್.ಆರ್.ಪಿ.ಎಲ್. ಸಂಸ್ಥೆಯ ಸಾಮಾಜಿಕ ಕಾರ್ಯಕ್ರಮಗಳ ಮುಖ್ಯಸ್ಥರಾದ ಪ್ರಶಾಂತ್ ಬಾಳಿಗಾ ಹಾಗೂ ನಿಟ್ಟೆ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಧನೇಶ್ ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್ ರಾವ್, ಸಹಾಯಕ ಪ್ರಾಧ್ಯಾಪಕರಾದ ಪ್ರಕಾಶ್, ಕಮಲಾಕ್ಷ ಪೈ, […]