ಕದ್ರಿ ಜಾತ್ರ ಮಹೋತ್ಸವ : ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ

Wednesday, January 22nd, 2025
Makkimane

ಮಂಗಳೂರು : ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನ ದ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಕದ್ರಿ ಆಶ್ರಯದಲ್ಲಿ ಸೋಮವಾರ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದ ದ ಕಾರ್ಯಾಧ್ಯಕ್ಷರಾದ ಸುಧಾಕರ ರಾವ್ ಪೇಜಾವರ, ಭಾರತೀಯ ಜೈನ್ ಮಿಲನ್ ಮಂಗಳೂರಿನ ಅಧ್ಯಕ್ಷರಾದ ರತ್ನಾಕರ ಜೈನ್, ಕಲ್ಕೂರ ಪ್ರತಿಷ್ಠಾನ ದ ಅಧ್ಯಕ್ಷರಾದ ಪ್ರದೀಪ ಕುಮಾರ […]

ಕೋಟೆಕಾರ್ ಸಹಕಾರಿ ಬ್ಯಾಂಕ್‌ ದರೋಡೆ, ತಮಿಳುನಾಡಿನಲ್ಲಿ ಮೂವರು ಆರೋಪಿಗಳು ಅರೆಸ್ಟ್

Monday, January 20th, 2025
Kotekar-Cooperative-Bank-ro

ಮಂಗಳೂರು : ಕೋಟೆಕಾರ್ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನ ಮಧುರೈ ಬಳಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ಬಳಿ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ. ಮುರುಗನ್ಡಿ , ಮಣಿವಣ್ಣನ್ ಬಂಧಿತ ಆರೋಪಿಗಳು ಆರೋಪಿಗಳು ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರ್ ಬೆನ್ನಟ್ಟಿದ್ದ ಪೊಲೀಸರು. ಕೃತ್ಯ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಆರೋಪಿಗಳು ಪರಾರಿಯಾಗಿದ್ದರು. ಮಂಗಳೂರು ಪೊಲೀಸ್‌ ತಂಡ ಮಹತ್ವದ ಕಾರ್ಯಾಚರಣೆ ನಡೆಸಿ […]

ತಗ್ಗುಂಜೆಯಲ್ಲಿ ಅಪೂರ್ವ ಉಮಾಮಹೇಶ್ವರ ಶಿಲ್ಪ ಪತ್ತೆ

Monday, January 20th, 2025
Umamaheshwara

ಉಡುಪಿ : ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತಿಯ ತಗ್ಗುಂಜೆಯಲ್ಲಿ ಅಪೂರ್ವ ಉಮಾಮಹೇಶ್ವರ ಶಿಲ್ಪ ಕಂಡು ಬಂದಿದೆ. ಸುಮಾರು 35 ಸೆ.ಮೀ ಎತ್ತರ 26 ಸೆ.ಮೀ ಅಗಲದ ಪಂಚಲೋಹದ ಈ ಶಿಲ್ಪ, ಶೈವ-ಶಾಕ್ತ ಮತ್ತು ನಾಗಾರಾಧನೆ ಪಂಥಗಳ ಅಪೂರ್ವ ಸಂಗಮದ ಪ್ರತೀಕವಾಗಿದೆ. ಎತ್ತರವಾದ ಪದ್ಮಾಸನ ಪೀಠದ ಮೇಲೆ ಆಸೀನವಾಗಿರುವ ಶಿವ ಜಟಾಮುಕಟನಾಗಿದ್ದು, ಪಂಚ ನಾಗಜಡೆಗಳ ಮುಕ್ಕೊಡೆಯನ್ನು ಹೊಂದಿದ್ದಾನೆ. ಪರ್ಯಂಕಾಸನ/ಸುಖಾಸೀನ ಭಂಗಿಯಲ್ಲಿ ಕುಳಿತಿರುವ ಶಿವನ ಎಡತೊಡೆಯ ಮೇಲೆ ಪಾರ್ವತಿ ಆಸೀನಳಾಗಿದ್ದಾಳೆ. ಶಿವನ ಕೆಳಗಿನ ಕೈ ಅಭಯ ಮುದ್ರೆಯಲ್ಲಿದ್ದು, […]

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Monday, January 20th, 2025
Veerendra-Hegde

ಬೆಂಗಳೂರು : ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಾನ್ಯ ಕರ್ನಾಟಕ ಹೈಕೋರ್ಟ್‌ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಖಡಕ್‌ ಆದೇಶ ನೀಡಿದೆ. ಸೋಮವಾರ, ನ್ಯಾ. ಆರ್. ದೇವದಾಸ್‌ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಅಲ್ಲದೇ ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ […]

ನೊಬೆಲ್ ವರ್ಲ್ಡ್ ರೆಕಾರ್ಡ್ ದಾಖಲಿಸಿರುವ ಫಾತಿಮಾ ನಜಫ್ ರಿಗೆ ಸನ್ಮಾನ!

Monday, January 20th, 2025
Fathima Nafhaz

ಮಂಗಳೂರು : ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ್ರದ ಉಂಗುರ ಕೊಟ್ಟು ಸನ್ಮಾನಿಸಲಾಯಿತು. ಈ ವೇಳೆ ಸುರತ್ಕಲ್ ಠಾಣಾಧಿಕಾರಿ ರಘು ನಾಯಕ ಅವರು ಬಾಲಕಿಯನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತಾಡಿದ ಅವರು, “ಶಿಕ್ಷಣದ ಜೊತೆಗೆ ಮಕ್ಕಳು ಬಾಲ್ಯದಲ್ಲೇ ಇಂತಹ ಸಾಧನೆಯಲ್ಲಿ […]

“ಮಂಗಳೂರಿನ ಜನತೆಗೆ ಕಲುಷಿತ ನೀರು” -ಐವನ್ ಡಿಸೋಜ ವಾಗ್ದಾಳಿ

Monday, January 20th, 2025
Ivan-D souza

ಮಂಗಳೂರು: “ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ ಬಾವಿಗಿಳಿದರೂ ಪ್ರಯೋಜನವಾಗಿಲ್ಲ. ಸತ್ಯಶೋಧನಾ ಸಮಿತಿ ರಚಿಸುವುದಕ್ಕೂ ಪಾಲಿಕೆಯ ಆಡಳಿತ ಮುಂದಾಗಿಲ್ಲ. ಹೀಗಾಗಿ ನಾವೇ ಸಮಿತಿ ರಚಿಸಿ ತನಿಖೆ ಮಾಡಿದ್ದೇವೆ. ಎಲ್ಲಿ ಎಸ್ ಟಿಪಿ ಕೊಳಚೆ ನೀರು ಸೇರುತ್ತಿದೆಯೋ ಅಲ್ಲಿ ಹೋಗಿ ಪ್ರತ್ಯಕ್ಷ ವರದಿ ತಯಾರಿಸಿ ಅದನ್ನು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

ಬಹುರೂಪಿ ಚಿಂತನೆಗಳನ್ನು ಕಟ್ಟಿಕೊಡುವ ಕೃತಿ ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ: ಪ್ರೊಫೆಸರ್ ಸಬಿಹಾ ಭೂಮಿಗೌಡ

Sunday, January 19th, 2025
ಬಹುರೂಪಿ ಚಿಂತನೆಗಳನ್ನು ಕಟ್ಟಿಕೊಡುವ ಕೃತಿ ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ: ಪ್ರೊಫೆಸರ್ ಸಬಿಹಾ ಭೂಮಿಗೌಡ

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡದ ಬಹುರೂಪಿ ಚಿಂತನೆಗಳನ್ನು ಒಂದೆಡೆ ಕಟ್ಟಿಕೊಡುವ ಕೃತಿಯೇ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಹೇಳಿದರು. ಬಹು ಓದು ಬಳಗ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ ನ ಸಹಯೋಗದೊಂದಿಗೆ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ರವಿವಾರ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು 1995 ರಿಂದ 2023ರವರೆಗಿನ ಮೂರು ದಶಕಗಳ ಕಾಲದ ಈ ಭಾಗದ ಲೇಖಕ ಲೇಖಕಿಯರು […]

ಪೆದಮಲೆ ವಾಜಿಲ್ಲಾಯ-ಧೂಮಾವತಿ ದೈವಸ್ಥಾನದ ಆಮಂತ್ರಣ ಪತ್ರ ಬಿಡುಗಡೆ

Sunday, January 19th, 2025
Pedamale

ಮಂಗಳೂರು : ಶ್ರೀ ಕ್ಷೇತ್ರ ಪೆದಮಲೆ ವಾಜಿಲ್ಲಾಯ ಧೂಮಾವತಿ ದೈವಸ್ಥಾನದಲ್ಲಿ 300 ವರ್ಷಗಳ ಬಳಿಕ ನಡೆಯಲಿರುವ ನೇಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನೀರ್ ಮಾರ್ಗದ ಪೆದಮಲೆ ಕ್ಷೇತ್ರದಲ್ಲಿ ಆದಿತ್ಯವಾರ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು, “ದೈವದ ಕಾರ್ಯ ದೈವೇಚ್ಛೆಯಂತೆಯೇ ನೆರವೇರುತ್ತದೆ. ಆಮಂತ್ರಣ ಪತ್ರಿಕೆ ನಾವು ಮುದ್ರಿಸಿ ಮನೆಮನೆಗೆ ಹಂಚಬಹುದು ಆದರೆ ಅದಕ್ಕೆ ಬೇಕಾದುದನ್ನು ದೈವ ಸಂಕಲ್ಪದಂತೆಯೇ ಪಡೆದುಕೊಳ್ಳುತ್ತದೆ. ಹಾಗೆಯೇ ಗ್ರಾಮದ […]

ಟೋಲ್ ಸುಂಕ ವಸೂಲಿಗೆ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ : ವಿಡಿಯೋ ವೈರಲ್

Sunday, January 19th, 2025
ಟೋಲ್ ಸುಂಕ ವಸೂಲಿಗೆ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ : ವಿಡಿಯೋ ವೈರಲ್

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲುನಲ್ಲಿ ಟೋಲ್ ಸುಂಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸ್ಥಳೀಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಚಾಲಕ ಬ್ರಹ್ಮರಕೂಟ್ಲು ಟೋಲ್ ಗೇಟ್ ನಲ್ಲಿ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಲ್ಲದೆ, ಲಾರಿ ಬಾಗಿಲು ತೆರೆದು […]

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ಅಧಿಕೃತ ಚಾಲನೆ

Saturday, January 18th, 2025
street-food-25

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಅಧಿಕೃತ ಚಾಲನೆ ದೊರೆಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡುತ್ತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು […]