ಮೂಡ ಹಗರಣದ ಪ್ರತಿಭಟಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಬಂಧಿಸಿದ್ದು, ಸಿದ್ದರಾಮಯ್ಯ ಸರ್ಕಾರದ ಸರ್ವಾಧಿಕಾರ ಧೋರಣೆ

Friday, July 12th, 2024
vedayas-kamath

ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ರಣಹೇಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಪ್ರತಿಭಟನಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ […]

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಶ್ರೀ ವಿ. ಸೋಮಣ್ಣ

Friday, July 12th, 2024
Brijesh Chowta

ಮಂಗಳೂರು : ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ […]

ಪಡುಪಣಂಬೂರು ಎಂಬಲ್ಲಿ ಚಡ್ಡಿಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್

Thursday, July 11th, 2024
chaddi-gang

ಮಂಗಳೂರು : ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ನಗರದ ಹೊರವಲಯದ ಪಡುಪಣಂಬೂರು ಎಂಬಲ್ಲಿ ಸ್ಥಳ‌ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ದರೋಡೆ ಆರೋಪಿಗಳನ್ನು ನಿನ್ನೆ ಸಕಲೇಶಪುರದಿಂದ ಬಂಧಿಸಿ ತರಲಾಗಿತ್ತು. ಬುಧವಾರ ಬೆಳಗ್ಗೆ ಸ್ಥಳ ಮಹಜರು ವೇಳೆ ಎಎಸ್ ಐ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗದರೋಡೆಕೋರರ ಕಾಲಿಗೆ ಪೊಲೀಸರು […]

ಆದಾಯ ತೆರಿಗೆ ಇಲಾಖೆಯ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯವಾದಿ ಹರ್ಷ ಕುಮಾರ್‌ ನೇಮಕ

Wednesday, July 10th, 2024
Harsha-Kumar

ಮಂಗಳೂರು : ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್‌ ಅವರು ನೇಮಕವಾಗಿದ್ದಾರೆ. ಭಾರತದ ಮಾನ್ಯ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರ ಸೂಚನೆಯ ಮೇರೆಗೆ ಭಾರತ ಸರ್ಕಾರ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹರ್ಷ ಕುಮಾರ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿದೆ. ಆದಾಯ ತೆರಿಗೆ ಇಲಾಖೆಯ ಮಂಗಳೂರು ವಿಭಾಗದ ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ಪ್ರಕರಣಗಳಲ್ಲಿ ಹರ್ಷ ಕುಮಾರ್ ಅವರು […]

ಕದ್ರಿ ಮಂಜುನಾಥ ದೇವಾಲಯದ ಒಳಾಂಗಣಕ್ಕೆ ಬೈಕಿನಲ್ಲಿ ನುಗ್ಗಿ, ಅಣ್ಣಪ್ಪ ದೈವದ ಕತ್ತಿ ತೆಗೆದು ದಾಂಧಲೆ ಮಾಡಿದ ಆಗಂತುಕ

Tuesday, July 9th, 2024
kadri-temple

ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯೋರ್ವ ದಾಂಧಲೆ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಮಹಾಪೂಜೆ ವೇಳೆ ದೇವಾಲಯದಲ್ಲಿ ಈ ರೀತಿಯ ದಾಂಧಲೆ ನಡೆಸಿದ್ದಾನೆ. ಈತ ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ಅಣ್ಣಪ್ಪ ದೈವದ ಕತ್ತಿ(ಕಡ್ತಲೆ) ತೆಗೆದು ದಾಂಧಲೆ ಮಾಡಿದ್ದಾನೆ. ದೇವಾಲಯದ ಸೆಕ್ಯುರಿಟಿ ಇದ್ದರೂ ಒಳಾಂಗಣಕ್ಕೆ ಬೈಕ್ ತಂದು, ಅಣ್ಣಪ್ಪ ದೈವದ ಗುಡಿಯೊಳಗೆ ನುಗ್ಗಿ ಮಂಟಪದ ಮೇಲೆ ಹತ್ತಿ ದಾಂಧಲೆ ಮಾಡಿರುತ್ತಾನೆ. ಅಣ್ಣಪ್ಪ […]

ರಸ್ತೆ ಅಗಲೀಕರಣಕ್ಕೆ ಜನರ ಸಹಕಾರ ಅತ್ಯಗತ್ಯ: ವೇದವ್ಯಾಸ ಕಾಮತ್

Tuesday, July 9th, 2024
soorya-narayana

ಮಂಗಳೂರು: ಮಂಗಳೂರು ನಗರದ ಜನಸಂಖ್ಯೆ 8 ಲಕ್ಷಕ್ಕೆ ಏರಿದೆ. ನಗರದ ಅಭಿವೃದ್ಧಿಗೆ ರಸ್ತೆಗಳ ಅಗಲೀಕರಣ ಅನಿವಾರ್ಯ. ಜನರೂ ತಮ್ಮ ಜವಾಬ್ದಾರಿ ಅರಿತು ಸಹಕರಿಸಬೇಕೆಂದು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ. ಮಂಗಳವಾರ ನಾಗುರಿ- ಮರೋಳಿ ಸೂರ್ಯನಾರಾಯಣ ದೇವಸ್ಥಾನ ರಸ್ತೆಯ ಅಗಲೀಕರಣ- ತೆರವು ಕಾರ್ಯಾಚರಣೆ ಕುರಿತು, ಇಲ್ಲಿನ ಚರ್ಚ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಡೀಲ್- ಪಂಪ್ವೆಲ್ ರಸ್ತೆಗೆ 26 ಕೋಟಿ ರೂ. ಒದಗಿಸಲಾಗಿದ್ದರೂ ಒತ್ತುವರಿಯಲ್ಲಿ ಆಗುತ್ತಿರುವ ಸಮಸ್ಯೆಯಿಂದ ಯೋಜನೆ ಜಾರಿ […]

ನಮೋ ಮೊಯರ್ ಗ್ಲೋಬಲ್ ಪೌಂಡೇಶನ್; ಗ್ರಾಮೀಣ ಪ್ರದೇಶದ ಶಾಲೆಯಲ್ಲಿ ಕಂಪ್ಯೂಟರ್ ವಿತರಣೆ

Tuesday, July 9th, 2024
Namo-Moyer

ಮುಂಬಯಿ : ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳು ತಮ್ಮ ಪ್ರತಿಭೆಯನ್ನು ವಿಕಸನ ಗೊಳಿಸುವಲ್ಲಿ ವಂಚಿತರಾಗಬಾರದು ಎಂಬ ನೆಲೆಯಲ್ಲಿ ಅಂತಹ ಶಾಲೆಗಳಿಗೆ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದ ಕ್ಲವ್ಡ್ ಆಧಾರಿತ ಕಂಪ್ಯೂಟರ್ ಲ್ಯಾಬ್ ಮತ್ತು ತರಬೇತಿ ಕೇಂದ್ರ, ಶಾಕ್ ಪ್ರೂಪ್ ಹಾಗೂ ವಾಟರ್ ರೆಸಿಸ್ಟೆಂಟ್ ಟೇಬಲ್ ನೊಂದಿಗೆ ಒದಗಿಸಲು ನಮೋ ಮೊಯರ್ ಗ್ಲೋಬಲ್ ಪೌಂಡೇಶನ್, ಹಿಟಾಚಿ ಸಿಸ್ಟಮ್ಸ್ ಇಂಡಿಯಾ ಪ್ರೈ, ಲಿ. ಇವರ ಸಹಾಯದಿಂದ ಈ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದು ಇದು ಶಿಕ್ಷಕರಿಗೂ ವಿದ್ಯಾರ್ಥಿಗಳಿಗೂ ಪ್ರಯೋಜನಕಾರಿಯಾಗುವುದು ಮಾತ್ರವಲ್ಲದೆ ನಮ್ಮ ಸಂಸ್ಥೆಯ “ಪರಿವರ್ತನೆ” […]

ಲೈಸನ್ಸ್ ಪಡೆಯದಿದ್ದರೆ ಭಾರೀ ಮೊತ್ತದ ದಂಡ: ಖಾಸಗಿ ಹಾಸ್ಟೆಲ್‍ಗಳಿಗೆ ಎಚ್ಚರಿಕೆ

Tuesday, July 9th, 2024
Hostel

ಮಂಗಳೂರು :- ಜಿಲ್ಲೆಯ ನಗರ ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾ ಸಂಸ್ಥೆಗಳು ಮತ್ತು ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಹೊಸ ಖಾಸಗಿ ವಸತಿ ನಿಲಯಗಳು ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವುದು ಹಾಗೂ ಕೆಲವು ಖಾಸಗಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಲಭ್ಯತೆ ಹಾಗೂ ಶುಚಿತ್ವ ಇಲ್ಲದಿರುವುದು ಕಂಡು ಬಂದಿರುತ್ತದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳು 15 ದಿನಗಳೊಳಗಾಗಿ ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಿಗೆ ಪಡೆದುಕೊಳ್ಳಬೇಕು. […]

ಧರ್ಮಸ್ಥಳದಲ್ಲಿ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಬಿಡುಗಡೆ

Tuesday, July 9th, 2024
siri-dhanya-siri-sari

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಡುಗಡೆಗೊಳಿಸಿ ಶುಭ ಹಾರೈಸಿದರು. ಹಿರಿಯ ಪತ್ರಕರ್ತ ಅನಂತ ಹುದಂಗಜೆ ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಯೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ […]

ಕಾಂಗ್ರೇಸ್ ತಮ್ಮ ಎಪ್ಪತ್ತು ವರ್ಷಗಳ ಅಧಿಕಾರ ಅವಧಿಯಲ್ಲಿ ಹಿಂದುಗಳಿಗಾಗಿ ಏನು ಮಾಡಿದರು : ನಂದನ ಮಲ್ಯ

Tuesday, July 9th, 2024
nandana-mallya

ಮಂಗಳೂರು : ರಾಹುಲ್ ಗಾಂಧಿಯವರು ಲೋಕಸಭೆ ಚುನಾವಣೆಯ ಮೊದಲು ಜನಿವಾರ ಕುಂಕುಮ ಹಚ್ಚಿಕೊಂಡು ತಾನೊಬ್ಬ ದೊಡ್ಡ ಹಿಂದು ಎಂದು ತಿರುಗಾಡುತ್ತಾ. ಚುನಾವಣೆ ಮುಗಿದ ತಕ್ಷಣ ತನ್ನ ಹಿಂದು ವಿರೋಧಿಯಾಗಿ ಬದಲಾಗಿ ನಿಜಬಣ್ಣ ತೋರಿಸಿದರು ಎಂದು ದ.ಕ. ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ನಂದನ ಮಲ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸತ್ತಿನಲ್ಲಿ ಹಿಂದುಗಳನ್ನು ಹಿಂಸೆ ಮಾಡುವವರು, ಅಸತ್ಯ ಮಾತಾಡುವವರು ಎಂದು ಹಿಂದೂ ಸಮಾಜವನ್ನು ಮೂದಲಿಸಿದರು. ಅಡ್ವಾಣಿ ಅವರ ಹಿಂದುತ್ವದ ಆಂದೋಲನವನ್ನು ಇದೀಗ ಹೊಸಕಿ ಹಾಕಿದ್ದೇವೆ ಎಂದು ತಮ್ಮ ಹಿಂದೂ […]