ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿ ಮನೆ ಸಂಪೂರ್ಣ ಜಲಾವೃತ

Thursday, July 4th, 2024
Adyar-dota

ಮಂಗಳೂರು : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿನ ಮನೆ ಸಂಪೂರ್ಣ ಜಲಾವೃತಗೊಂಡಿದೆ. ವಿಕ್ರಮ್ ಶೆಟ್ಟಿ ಎಂಬುವರಿಗೆ ಸೇರಿದ ಒಂದು ಅಂತಸ್ತಿನ ಮನೆ ಯಾಗಿದ್ದು, ಕಳೆದ ಮೂರು ವರ್ಷಗಳಿಂದ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೋಂಡಾ ಫ್ಯಾಕ್ಟರಿಗೆ ಹೋಗುವ ರಸ್ತೆಯೂ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮುಳುಗಡೆಯಾಗುತ್ತಿದ್ದು, ರಸ್ತೆಯುದ್ದಕ್ಕೂ ಜಲಾವೃತವಾಗಿದೆ. ಆ ಪ್ರದೇಶದಲ್ಲಿ ಹಲವಾರು ಮನೆಗಳು ಮತ್ತು ಶಾಲೆಗಳಿದ್ದರೂ ಅವುಗಳಿಗೆ ಹೋಗುವ ರಸ್ತೆಯು ಅಸಮರ್ಪಕ ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದರಿಂದ ಸಂಪೂರ್ಣವಾಗಿ […]

ಡೆತ್ ನೋಟ್ ಬರೆದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Thursday, July 4th, 2024
anitha17

ಬೆಳ್ತಂಗಡಿ : ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ […]

ಬಲ್ಮಠ ರಸ್ತೆಯಲ್ಲಿ ಕಟ್ಟಡಕ್ಕೆ ತಳಪಾಯ ಕೊರೆಯುವಾಗ ಮಣ್ಣು ಕುಸಿತ, ಇಬ್ಬರು ಕಾರ್ಮಿಕರಲ್ಲಿ ಓರ್ವನ ರಕ್ಷಣೆ

Wednesday, July 3rd, 2024
Balmatta-Mud-Slide

ಮಂಗಳೂರು: ನಗರದ ಬಲ್ಮಠ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ ತಳಪಾಯ ಕೊರೆಯುವಾಗ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಚಂದನ್ ಕುಮಾರ್ (30) ಮತ್ತು ರಾಜಕುಮಾರ್ (18) ಮಣ್ಣಿನಡಿ ಸಿಲುಕಿರುವ ಕಾರ್ಮಿಕರು. ಘಟನೆಯಲ್ಲಿ ಓರ್ವ ಕಾರ್ಮಿಕ ರಾಜ್ ಕುಮಾರ್ ಅವರನ್ನು ರಕ್ಷಣಾ ತಂಡ ಮೇಲಕೆತ್ತಿದೆ. ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಿದೆ. ಮಣ್ಣಿನ ಅಡಿಯಲ್ಲಿ ಸಿಲುಕಿರುವ ಮತ್ತೋರ್ವ ಕಾರ್ಮಿಕನಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕ್ರೇನ್ ಮೂಲಕ ಜೆಸಿಬಿಯನ್ನು ಕೆಳಗಿಸುವ […]

ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮುಖ್ಯಮಂತ್ರಿಗೆ ಮನವಿ

Wednesday, July 3rd, 2024
Tullu-FIlm

ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ. ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ. ಪ್ರಾದೇಶಿಕ ಭಾಷೆಗಳ ಅಭಿಮಾನದಿಂದ ನಿರ್ಮಾಪಕರು ಚಲನ ಚಿತ್ರ ನಿರ್ಮಿಸುತ್ತಾರೆ. ಯಾವು ಪರಭಾಷೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ […]

ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ, ನೂತನ ಎಸ್‌ಪಿ ಯಾಗಿ ಯತೀಶ್ ಎನ್.

Wednesday, July 3rd, 2024
DK-Sp

ಮಂಗಳೂರು : ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು ಈ ವರ್ಗಾವಣೆಗಳ ಪೈಕಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಮೇ 2023 ರಲ್ಲಿ ರಿಷ್ಯಂತ್ ಅವರು […]

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪತ್ನಿ ಹೆಸರು! ಸಿಬಿಐ ತನಿಖೆ ಆಗಲಿ :- ಶಾಸಕ ಕಾಮತ್

Wednesday, July 3rd, 2024
ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪತ್ನಿ ಹೆಸರು! ಸಿಬಿಐ ತನಿಖೆ ಆಗಲಿ :- ಶಾಸಕ ಕಾಮತ್

ಮಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಸೈಟುಗಳ ಹಂಚಿಕೆಯಲ್ಲಿ 4 ಸಾವಿರ ಕೋಟಿ ರೂ. ಗಳ ಭಾರೀ ಅಕ್ರಮ ನಡೆದಿದ್ದು, ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಹೆಸರು ಉಲ್ಲೇಖವಾಗಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೇರಿ ಒಂದು ವರ್ಷದಲ್ಲೇ ಹಗರಣಗಳ ಮೇಲೆ‌ ಹಗರಣಗಳು ಬಯಲಿಗೆ ಬರುತ್ತಿವೆ. ಮೊದಲು ವಾಲ್ಮೀಕಿ ‌ನಿಗಮದ 187 ಕೋಟಿ ರೂ.ಹಗರಣ, ಈಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ 4 […]

ಮನೆಯ ಕೋಣೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Tuesday, July 2nd, 2024
ಮನೆಯ ಕೋಣೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ : ತನ್ನ ಮನೆಯ ಕೋಣೆಯಲ್ಲಿ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ […]

ಮಂಗಳೂರಿನ ಪ್ರಮುಖ ರಸ್ತೆಗೆ ಮೋಗ್ಲಿಂಗ್ ಹೆಸರು ಹಾಗೂ ಅವರ ಹೆಸರಿನಲ್ಲಿ ವೃತ್ತ : ಸ್ಟಾನಿ ಆಳ್ವಾರಿಸ್

Tuesday, July 2nd, 2024
mogling

ಮಂಗಳೂರು : ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ಅವರ ಹೆಸರಿನಲ್ಲಿ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಳ್ವಾರಿಸ್ ಒತ್ತಾಯಿಸಿದರು. ಅವರು ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ ಬ್ಯಾರಿ […]

ತಾನು ಎಂದಿಗೂ ಅಪ್ರಬುದ್ಧ ಎಂಬುದನ್ನು ರಾಹುಲ್ ಮತ್ತೆ ನಿರೂಪಿಸಿದರು : ಶಾಸಕ ಕಾಮತ್

Tuesday, July 2nd, 2024
vedavyas-kamath

ಮಂಗಳೂರು : “ಹಿಂದೂಗಳೆಂದು ಕರೆದುಕೊಳ್ಳುವವರು ಸದಾ ಹಿಂಸಾಚಾರ ಮತ್ತು ದ್ವೇಷವನ್ನು ಹರಡುವವರು” ಎಂದು ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಪ್ರಬುದ್ಧ ಹೇಳಿಕೆ ನೀಡುವುದಕ್ಕೆ ನಿಸ್ಸೀಮರೆಂದು ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಒಲ್ಲದ ಮನಸ್ಸಿನಿಂದ ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್ ಗಾಂಧಿ ಈ ಹಿಂದೆ ವಿದೇಶದಲ್ಲಿ ನಿಂತುಕೊಂಡು ಭಾರತದಲ್ಲಿ ಪ್ರಜಾಭುತ್ವವಿಲ್ಲವೆಂದು ಭಾಷಣ ಮಾಡಿ ದೇಶದ ಘನತೆಗೆ ಧಕ್ಕೆ ತಂದಿದ್ದರು. ಇಂದು ಪ್ರಜಾಪ್ರಭುತ್ವದ ದೇಗುಲವಾದ ಲೋಕಸಭೆಯಲ್ಲೇ […]

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Tuesday, July 2nd, 2024
ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

ಮಂಗಳೂರು : ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು […]