ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ

Saturday, June 29th, 2024
narendra-Modi-cm

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳುಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ […]

ಬಾಬುಗುಡ್ದದಲ್ಲಿರುವ ಕುದ್ಮುಲ್ ರಂಗರಾವ್ ರವರ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ

Saturday, June 29th, 2024
Kudmal-Ranga-Rao

ಮಂಗಳೂರು : ಪೂಜ್ಯನೀಯ ಕುದ್ಮುಲ್ ರಂಗರಾವ್ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್ ಅತ್ತಾವರ ಬಾಬುಗುಡ್ಡ, ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಬಾಬುಗುಡ್ದದಲ್ಲಿರುವ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಈ ದೇಶದಲ್ಲಿ ದಲಿತೋದ್ಧಾರಕ್ಕಾಗಿ ಶ್ರಮಿಸಿದ ಹಲವಾರು ಮಹನೀಯರನ್ನು ಕಾಣಬಹುದು. ಆದರೆ ದಲಿತೋದ್ಧಾರಕ್ಕಾಗಿ ತನ್ನ ಬದುಕನ್ನೇ ಸಮರ್ಪಣೆ ಮಾಡಿದವರು ಎಂದರೆ ನಮ್ಮ ಕುದ್ಮಲ್ […]

ತುಳು ಭಾಷೆ ಉಳಿಸಿ ಬೆಳೆಸುವಲ್ಲಿ ಹೊರನಾಡ ತುಳುವರ ಕೊಡುಗೆ ಅನನ್ಯವಾದುದು : ತಾರಾನಾಥ್ ಗಟ್ಟಿ ಕಾಪಿಕಾಡ್

Saturday, June 29th, 2024
bhadravathi

ಮಂಗಳೂರು : ತುಳು ಭಾಷೆ ಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು. ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ಹಾಗೂ ಸಂಸ್ಕೃತಿ ಎಲ್ಲರನ್ನೂ ಜೊತೆಯಾಗಿ ಒಳಗೊಳ್ಳುವ ಗುಣಧರ್ಮವನ್ನು ಹೊಂದಿದೆ. ಈ ಕಾರಣದಿಂದಾಗಿ ಹೊರನಾಡಿನಲ್ಲಿ […]

ಸಂಸದರ ಸಭೆ : ರಾಜ್ಯ ಸರ್ಕಾರದ ನಡೆಗೆ ಬಸವರಾಜ ಬೊಮ್ಮಾಯಿ ಅಭಿನಂದನೆ

Friday, June 28th, 2024
Bommai

ಹೊಸದಿಲ್ಲಿ : ಕರ್ನಾಟಕದ ಸಂಸದರ ಸಭೆಯನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಂದೊಳ್ಳೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದಕ್ಕಾಗಿ, ರಾಜ್ಯ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಒಳ್ಳೆಯ ಪರಂಪರೆ, ರಾಜ್ಯ ಸರ್ಕಾರದ ಸಚಿವರು ಮತ್ತು ಸಂಸದರು ಮುಕ್ತವಾಗಿ ಚರ್ಚೆಯನ್ನು ಮಾಡಿದ್ದೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಯೋಜನೆ ಅಥವಾ ಕಾರ್ಯಕ್ರಮಗಳು ಯಶಸ್ವಿ ಆಗಬೇಕಾದರೆ, […]

ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಭಾಷೆ ಸೇರ್ಪಡೆ

Friday, June 28th, 2024
Tharanath-Gatty

ಮಂಗಳೂರು : ತುಳು ಭಾಷೆಗೆ ಜಾಗತಿಕವಾಗಿ ಸ್ಥಾನ ಮಾನ ದೊರಕಲು ಪ್ರಯತ್ನಗಳು ನಡೆಯುತ್ತಿದ್ದು ಅದರ ಭಾಗವಾಗಿ ಗೂಗಲ್ ಟ್ರಾನ್ಸೇಲಟರ್ ನಲ್ಲಿ ಇತರ ಭಾಷೆಗಳಿಂದ ತುಳು ಭಾಷೆಯ ಅರ್ಥಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಇದು ತುಳುವರು ಸಂಭ್ರಮಪಡುವಂತವ ವಿಚಾರವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ. ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಸೇರ್ಪಡೆಗೊಂಡಿರುವುರಿಂದ ತುಳುನಾಡಿಗೆ ಬರುವ ಪ್ರವಾಸಿಗರಿಗೆ ತುಳುವರೊಂದಿಗೆ ಮಾತನಾಡಲು ಅನುಕೂಲವಾಗಲಿದೆ. ಕೆಲವು ಸಂದರ್ಭದಲ್ಲಿ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ […]

ಸಹ್ಯಾದ್ರಿ ಕಾಲೇಜ್ – ಯುವ ಎಂಜಿನೀಯರ್‌ಗಳ ಭವಿಷ್ಯ ನಿರ್ಮಿಸುವಲ್ಲಿ ಸಹಕಾರಿಯಾಗಿದೆ

Friday, June 28th, 2024
ಸಹ್ಯಾದ್ರಿ ಕಾಲೇಜ್ - ಯುವ ಎಂಜಿನೀಯರ್‌ಗಳ ಭವಿಷ್ಯ ನಿರ್ಮಿಸುವಲ್ಲಿ ಸಹಕಾರಿಯಾಗಿದೆ

ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (VTU), ಬೆಳಗಾವಿಗೆ ಸಂಯೋಜಿತವಾಗಿರುವ ಸ್ವಾಯತ್ತ ಸಂಸ್ಥೆ, 2007ರಲ್ಲಿ ಭಂಡಾರಿ ಫೌಂಡೇಶನ್ ಅಡಿಯಲ್ಲಿ ಸ್ಥಾಪಿಸಲಾಯಿತು. ಕಾಲೇಜನ್ನುAICTE, ನವದೆಹಲಿ ಮತ್ತು ಕರ್ನಾಟಕ ಸರ್ಕಾರ(GOK) ಅನುಮೋದಿಸಿದೆ. ಇದುi) ‘A’ ಗ್ರೇಡ್‌ನೊಂದಿಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಕೌನ್ಸಿಲ್ (NAAC) ನಿಂದ ಮಾನ್ಯತೆ ಪಡೆದಿದೆ,ii) ಐದು ಎಂಜಿನಿಯರಿಂಗ್ ಕಾರ್ಯಕ್ರಮಗಳಿಗಾಗಿ ರಾಷ್ಟ್ರೀಯ ಮಾನ್ಯತೆ ಮಂಡಳಿ (NBA) ಮತ್ತುiii) ಇಂಜಿನಿಯರ್ಸ್ ಸಂಸ್ಥೆ (ಭಾರತ) (IE(I)). ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (UGC) ಕಾಯಿದೆಯ […]

ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ-ಡಾ.ಶಾಂತಾರಾಮಶೆಟ್ಟಿ

Friday, June 28th, 2024
ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ-ಡಾ.ಶಾಂತಾರಾಮಶೆಟ್ಟಿ

ಮಂಗಳೂರು ;ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕಳೆದ 50 ವರ್ಷಗಳಲ್ಲಿ ಒಟ್ಟು 84 ಸಾವಿರ ಕೃತಕ ಕಾಲು ಸೇರಿದಂತೆ ಕೃತಕ ಅಂಗಾಂಗ ವಿತರಿಸಲಾಗಿದೆ. ಇದರಲ್ಲಿ ಶೇ.80 ಜನರಿಗೆ ವಿವಿಧ ಸಂಘಸಂಸ್ಥೆಗಳು, ದಾನಿಗಳ ನೆರವಿನಿಂದ ಪೂರ್ತಿ ಉಚಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂದು ಸೆಂಟರ್‌ನ ನಿರ್ದೇಶಕ, ಖ್ಯಾತ ಮೂಳೆ ತಜ್ಞ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.ದೈಹಿಕ ಊನತೆ […]

ರೆಡ್ ಅಲರ್ಟ್ ಘೋಷಣೆ : ಜೂನ್ 28 ರಂದು ಶಾಲೆಗಳಿಗೆ ರಜೆ

Thursday, June 27th, 2024
mullai-muhilan

ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜೂನ್28 ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ ರಜೆ ಸಾರಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಪ್ರವಾಸಿಗರು ತೆರಳದಂತೆ ಮುನ್ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ, ಸಾರ್ವಜನಿಕರು ವಿದ್ಯುತ್ ಕಂಬಗಳು, ತಂತಿಗಳತ್ತ […]

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

Thursday, June 27th, 2024
Kempegowda-jayanti

ಬೆಂಗಳೂರು : ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. […]

ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” -ಕಮಿಷನರ್ ಅನುಪಮ್ ಅಗರ್ವಾಲ್

Thursday, June 27th, 2024
Mithun-Kodethuru

ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದು ಮಾತಾಡಿದರು. “ಪ್ರತಿಯೊಂದು ಕಡೆಯಲ್ಲೂ ಪಾಸಿಟಿವ್ ಮತ್ತು ನೆಗೆಟಿವ್ ಅಭಿಪ್ರಾಯ ಇದ್ದೇ ಇರುತ್ತದೆ. ನಾವು ನೋಡುವ ರೀತಿ ಪಾಸಿಟಿವ್ ಆಗಿದ್ದರೆ ಎಲ್ಲವೂ ಪಾಸಿಟಿವ್ ಆಗಿಯೇ […]