ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಮೃತ

Thursday, June 27th, 2024
Auto-Drivers-death

ಮಂಗಳೂರು : ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಘಟನೆ ನಿನ್ನೆ 9ಗಂಟೆಗೆ ನಡೆದಿರುವುದು ಸಿಸಿ ಕ್ಯಾಮೆರಾ ದಲ್ಲಿ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಮೃತ ರಿಕ್ಷಾ ಚಾಲಕರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ನಿವಾಸಿ ರಾಜು(50) ಮತ್ತು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ದೇವರಾಜು(46) ಎಂದು ಗುರುತಿಸಲಾಗಿದೆ. ಒಬ್ಬರು […]

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಮನವಿ

Thursday, June 27th, 2024
sunil-karkala

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ಹಾಗೂ ಪ್ರಮುಖ ಮುಖ್ಯ ಸಂಪರ್ಕ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ, ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿ ಅವರನ್ನು ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ವಿ ಸುನಿಲ್‌ ಕುಮಾರ್‌ ರವರು ದೆಹೆಲಿಗೆ ತೆರಳಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಿ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ […]

ದ.ಕ.ಜಿಲ್ಲೆಯಲ್ಲಿ ತೀವ್ರ ಮಳೆ ಜೂನ್ 27ರಂದು ಶಾಲಾ ಕಾಲೇಜುಗಳಿಗೆ ರಜೆ

Wednesday, June 26th, 2024
DC-DK

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಸಾರಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಪ್ರವಾಸಿಗರು ತೆರಳದಂತೆ ಮುನ್ಸೂಚನೆ ನೀಡಲಾಗಿದೆ.

“ವಿದ್ಯಾರ್ಥಿಗಳು ಆಂತರಿಕವಾಗಿ ಅರಳುವಂತಾಗಲಿ”-ಡಾ. ವಿಜಯ ಸರಸ್ವತಿ

Wednesday, June 26th, 2024
vivekananda-college

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆಯ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಚಟುವಟಿಕೆಗಳಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಡಾ. ವಿಜಯ ಸರಸ್ವತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು “ಆಧುನಿಕ ಯುಗದಲ್ಲಿ ಸಾಕಷ್ಟು ಸಾಮಾಜಿಕ ಸ್ಥಿತ್ಯಂತರಗಳು ಆಗುತ್ತಿರುವುದನ್ನು ಕಾಣುತ್ತಿದ್ದೇವೆ. ಇದರ ಪರಿಣಾಮ ಬದಲಾದ ಭಾರತ. ವಾಣಿಜ್ಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳು […]

ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

Wednesday, June 26th, 2024
Ramesh

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂದು ತಿಳಿದು ಬಂದಿದೆ. ರಮೇಶ್ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರನ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸರು, ನರಿಕೊಂಬು […]

ಮನೆ ಕುಸಿದು ಇಬ್ಬರು ಮಕ್ಕಳ ಸಹಿತ ದಂಪತಿ ಮೃತ್ಯು

Wednesday, June 26th, 2024
Madaninagara

ಉಳ್ಳಾಲ: ಪಕ್ಕದ ಮನೆಯ ಆವರಣ ಗೋಡೆ ಕುಸಿದು ಇನ್ನೊಂದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ […]

ಹಾಲಿಗೆ ಏಕಾಏಕಿ 2 ರೂ ಏರಿಸುವ ಮೂಲಕ ಕಾಂಗ್ರೆಸ್ ನಿರಂತರ ಜನರನ್ನು ದೋಚುತ್ತಿದೆ

Tuesday, June 25th, 2024
vedavyasa-Kamath

ಮಂಗಳೂರು ; ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ ಏಕಾಏಕಿ 2 ರೂ ಏರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಣ್ಣಿಗೆ ಕಂಡದ್ದೆಲ್ಲದರ ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅತ್ತ ರೈತರ ಬದುಕಿಗೂ ಉಪಕಾರಿಯಾಗಿಲ್ಲ, ಬಡವರ ಬದುಕಿಗೂ ನೆಮ್ಮದಿಯಿಲ್ಲ. ಒಂದೆಡೆ ಹಾಲು […]

ಬಿಜೆಪಿಯವರು ಕೆಲಸ ಮಾಡದೇ ಇದ್ದರು ಮತ ಹಾಕುತ್ತಿದ್ದೀರಿ : ಡಿಸಿಎಂ ಡಿ.ಕೆ.ಶಿವಕುಮಾರ್

Tuesday, June 25th, 2024
ಬಿಜೆಪಿಯವರು ಕೆಲಸ ಮಾಡದೇ ಇದ್ದರು ಮತ ಹಾಕುತ್ತಿದ್ದೀರಿ : ಡಿಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು : “ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಮಂಗಳೂರಿನ ಬಜಪೆ ವಿಮಾನ ನಿಲ್ದಾಣ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣಕ್ಕೆ ನೀವು ಏನೂ ಮಾಡಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, […]

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Tuesday, June 25th, 2024
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ : ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಶ್ರೀ.ಎ.ವಿ ಶೆಟ್ಟಿ ಅವರು ಜೂ.25 ರಂದು 2024-25ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕಲಿಕೆಯು ಕಲ್ಪನೆಯೊಂದಿಗೆ ಸಾಗಬೇಕು ಹಾಗೂ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಇತರ ಪೂರಕ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು ಹಾಗೂ ಧರ್ಮಸ್ಥಳದ ಸಮಾಜಮುಖಿ ಕಾರ್ಯಗಳಿಂದ ನಾವು ಉತ್ತಮ ಮೌಲ್ಯಗಳನ್ನು ಕಲಿಯಲು ಸಾಧ್ಯ ಎಂದು ಎಂದು ಹೇಳಿದರು. ಶಾಲೆಯ […]

ಮಿಥುನ ಕೊಡೆತ್ತೂರ್‌ಗೆ ‘ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿ

Tuesday, June 25th, 2024
Mithun-Kodethuru

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್‌ 7ರಂದು ಪ್ರಕಟವಾದ ಮಿಥುನ್‌ ಅವರ “‌ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತʼ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಯ ಮಂಗಳೂರು ಸುದ್ದಿವಿಭಾಗ ಮುಖ್ಯಸ್ಥ ಹರ್ಷ ಮತ್ತು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ […]