ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಯಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳ ಭೇಟಿ
Tuesday, June 25th, 2024ಮಂಗಳೂರು : ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಹಾಗೂ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ಆಶ್ರಯದಲ್ಲಿ ಇಂದು(24-06-2024) ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಉಳ್ಳಾಲ ತಾಲೂಕು, ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಾವೂರು ಉಳಿಯ ದ್ವೀಪ(ಕುದ್ರು) ದಲ್ಲಿ ಯಾವುದೇ ತರಹದ ಮರಳುಗಾರಿಕೆಗೆ ಅನುಮತಿ ಇಲ್ಲದಿದ್ದರೂ ಬಲಾಢ್ಯ ಮರಳು ಮಾಫಿಯಾ ಅಕ್ರಮವಾಗಿ ಮರಳುಗಾರಿಕೆ ವ್ಯಾಪಕವಾಗಿ […]