ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ : ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

Friday, June 14th, 2024
ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ : ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

ಮಂಗಳೂರು : ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ನಗರವನ್ನು ಎರಡನೆ ರಾಜ್ಯದ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ. ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ತಿಳಿಸಿದರು. ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ‘ ಬಂದರು,ವಿಮಾನ ನಿಲ್ದಾಣ, ರೈಲು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸೌಲಭ್ಯ ಹೊಂದಿರುವ ಮಂಗಳೂರು ಪ್ರವಾಸೋದ್ಯಮ ಅಭಿವೃದ್ಧಿಗೆ […]

“ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ” -ಗಣೇಶ್ ರಾವ್

Friday, June 14th, 2024
"ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ" -ಗಣೇಶ್ ರಾವ್

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಚೇರ್ ಮೆನ್ ಗಣೇಶ್ ರಾವ್ ಅವರು, “ತುಡರ್ ಅಂದರೆ ಕನ್ನಡದಲ್ಲಿ ಬೆಳಕು ಅಂತ ಅರ್ಥ. ಒಂದು ಬೆಳಕಿನಿಂದ ಎಷ್ಟೋ ದೀಪಗಳನ್ನು ಬೆಳಗಿಸಬಹುದು. ಅದೇ ರೀತಿ ಬಿಡುಗಡೆಯಾಗಿರುವ ತುಳು ಸಿನಿಮಾ ತುಳು ತುಡರ್ […]

ಸದಾಶಿವ ಸೊರಟೂರು ಅವರ ‘ನಿನ್ನ ಬೆರಳು ತಾಕಿ’ ಕವನ ಸಂಕಲನಕ್ಕೆ ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರ

Thursday, June 13th, 2024
sadashiva-soraturu

ಮಂಗಳೂರು : ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿವರ್ಷ ಅತ್ಯುತ್ತಮ ಕವನ ಸಂಕಲನಕ್ಕೆ ನೀಡುವ 2023ನೇ ಸಾಲಿನ ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರಕ್ಕೆ ದಾವಣಗೆರೆಯ ಸದಾಶಿವ ಸೊರಟೂರು ಅವರ ‘ನಿನ್ನ ಬೆರಳು ತಾಕಿ’ ಕವನ ಸಂಕಲನವು ಆಯ್ಕೆಯಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೆ. ವಿ. ಕೃಷ್ಣ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪುರಸ್ಕಾರವು 25000 ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದ್ದು ಮುಂಬರುವ ನವೆಂಬರ್ ನಲ್ಲಿ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಕವಿ ಸದಾಶಿವ ಸೊರಟೂರು ಅವರು ದಾವಣಗೆರೆ ಜಿಲ್ಲೆ ಹೊನ್ನಾಳಿ […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಅಧಿಕಾರ ವಹಿಸಿಕೊಂಡರು

Thursday, June 13th, 2024
Tharnatha-Gatty

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಉರ್ವಸ್ಟೋರ್ ನ ತುಳು ಭವನದಲ್ಲಿರುವ ತುಳು ಅಕಾಡೆಮಿ ಕಚೇರಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ […]

ರೇಣುಕಾಸ್ವಾಮಿ ಮೆಸೇಜ್ ದರ್ಶನ್ ಗೆ ಕಳುಹಿಸಿದ್ದು ತಪ್ಪಾಯಿತು ಎಂದು ಪೊಲೀಸರಲ್ಲಿ ಹೇಳಿಕೊಂಡ ಪವಿತ್ರಾ ಗೌಡ

Thursday, June 13th, 2024
ರೇಣುಕಾಸ್ವಾಮಿ ಮೆಸೇಜ್ ದರ್ಶನ್ ಗೆ ಕಳುಹಿಸಿದ್ದು ತಪ್ಪಾಯಿತು ಎಂದು ಪೊಲೀಸರಲ್ಲಿ ಹೇಳಿಕೊಂಡ ಪವಿತ್ರಾ ಗೌಡ

ಬೆಂಗಳೂರು: ರೇಣುಕಾಸ್ವಾಮಿ ತನ್ನ ಮರ್ಮಾಂಗದ ವಿಡಿಯೋ ಮೆಸೇಜ್ ಮತ್ತು ದರ್ಶನ್ ಗಿಂತ ನಾನೇನು ಕಮ್ಮಿ ಇಲ್ಲ ನನ್ನ ಜೊತೆ ಬಾ ಎಂದು ಪವಿತ್ರಾ ಗೌಡ ಗೆ ಕಳುಹಿಸಿದ್ದ ಎಂದು ಹೇಳಲಾದ ಮೆಸೇಜ್ ದರ್ಶನ್ ಗೆ ಕಳುಹಿಸಿದ್ದು ತಪ್ಪಾಯಿತು ಎಂದು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡ ಒಪ್ಪಿಕೊಂಡಿದ್ದಾರೆ. ಪವಿತ್ರಾ ಗೌಡಗೆ ಇದೀಗ ಕೆಟ್ಟ ಮೇಲೆ ಬುದ್ಧಿ ಬಂದಿದೆ. ಕೈಗೆ ಕೋಳ ಬಿದ್ದ ಮೇಲೆ ಜ್ಞಾನೋದಯವಾಗಿದ್ದು, ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. […]

ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ‌ರಾವ್ ಖುಲಾಸೆ

Thursday, June 13th, 2024
Atul-Rao

ಉಡುಪಿ : ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ ಅತುಲ್ ‌ರಾವ್ ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ. 2008ರ ಜೂ.10ರಂದು ಅಂದರೆ 15 ವರ್ಷಗಳ ಹಿಂದೆ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ […]

ಕುವೈತ್ ನ ಅಗ್ನಿ ದುರಂತದಲ್ಲಿ ಕಾಸರಗೋಡಿನ ಇಬ್ಬರು ಸೇರಿ, ಕೇರಳದ ಹನ್ನೊಂದು ಮಂದಿ ಮೃತ

Thursday, June 13th, 2024
Kerala-Residents

ಕಾಸರಗೋಡು : ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ಅನಾಹುತದಲ್ಲಿ ಕಾಸರಗೋಡು ಮೂಲದ ಇಬ್ಬರು ಸೇರಿ ರಾಜ್ಯದ ಒಟ್ಟು ಹನ್ನೊಂದು ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೆರ್ಕಳ ಕುಂಡಡ್ಕದ ರಂಜಿತ್ ( 34) ಹಾಗೂ ತೃಕ್ಕರಿಪುರ ಎಳಂಬಚ್ಚಿಯ ಪಿ . ಕುಂಞ ಕೇಳು ( 55) ಮೃತಪಟ್ಟವರು. ರಂಜಿತ್ ಕಳೆದ ಎಂಟು ವರ್ಷಗಳಿಂದ ಕುವೈತ್ ನಲ್ಲಿ ಉದ್ಯೋಗದಲ್ಲಿದ್ದರು. ಒಂದು ವರ್ಷದ ಹಿಂದೆ ಊರಿಗೆ ಬಂದು ಮರಳಿದ್ದರು . ಚೆರ್ಕಳ – ಕುಂಡಡ್ಕದ […]

ಜೂನ್‌ 15 ಮತ್ತು 16 ರಂದು ಎರಡು ದಿನಗಳ ದಕ್ಷಿಣ ಭಾರತ ಉತ್ಸವ

Wednesday, June 12th, 2024
Tourism

ಬೆಂಗಳೂರು : ವಿಶ್ವ ಪ್ರವಾಸೋದ್ಯಮ ಭೂಪಟದಲ್ಲಿ ದಕ್ಷಿಣ ಭಾರತದ ಏಳೂ ರಾಜ್ಯಗಳ ಪ್ರವಾಸೋದ್ಯಮ ಕ್ಷೇತ್ರದ ಅವಕಾಶಗಳನ್ನು ಮುಂಚೂಣಿಗೆ ತರುವ ನಿಟ್ಟಿನಲ್ಲಿ ಜೂನ್‌ 15 ಮತ್ತು 16 ರಂದು ಎರಡು ದಿನಗಳ ಕಾಲ ದಕ್ಷಿಣ ಭಾರತ ಉತ್ಸವ – 2024 ನ್ನು ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್‌ ಕೆ ಪಾಟೀಲ್‌ ತಿಳಿಸಿದರು. ಇಂದು ವಿಧಾನಸೌಧದಲ್ಲಿ ದಕ್ಷಿಣ ಭಾರತ ಉತ್ಸವದ ಲಾಂಛನವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ. ಇವುಗಳ […]

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು CPIM ಒತ್ತಾಯ

Wednesday, June 12th, 2024
cpim

ಮಂಗಳೂರು : ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ಕಳೆದ ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ಪರಿಣಾಮ ಉಳ್ಳಾಲ, ತೊಕ್ಕೋಟ್ಟು, ಬಜಾಲ್, ಜಪ್ಪಿನಮೊಗರು ಸೇರಿದಂತೆ ಆಸುಪಾಸಿನ ಸಾವಿರಾರು ಜನತೆ ತೀರಾ ಸಂಕಷ್ಟಕ್ಕೊಳಗಾಗಿ ದಿನನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ರೈಲ್ವೆ ಇಲಾಖೆ ಕೆಳಸೇತುವೆ (ಅಂಡರ್ ಪಾಸ್) ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಮುಗಿಸಿ ಜನರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ)ಕೇಂದ್ರ ವಿಭಾಗ ಸಮಿತಿಯು ಒತ್ತಾಯಿಸಿದ್ದು, ಈ ಬಗ್ಗೆ ಇಂದು( 12-06-2024) […]

ಮಳೆಗಾಲದಲ್ಲಿ ಅವಘಡ ಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Wednesday, June 12th, 2024
Lalshmi-Hebbalkar

ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡ ಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, […]