ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಬಿಜೆಪಿ

Tuesday, June 4th, 2024
suresh-gopi

ತಿರುವನಂತಪುರಂ: ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಕೊನೆಗೂ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿದೆ. ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದ್ದು, ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಜಯ ಗಳಿಸಿದ್ದಾರೆ. ಸುರೇಶ್ ಗೋಪಿ ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸುರೇಶ್ ಗೋಪಿ ಬರೊಬ್ಬರಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಇದು […]

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಸೋಲು

Tuesday, June 4th, 2024
Eshwarappa

ಶಿವಮೊಗ್ಗ: ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಜಯ ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನ ಪಡೆದು ಬಿಜೆಪಿ ವಿರುದ್ದ ಬಂಡಾಯ ನಿಂತಿದ್ದ ಕೆ.ಎಸ್‌.ಈಶ್ವರಪ್ಪ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಡಮ್ಮಿ ಕ್ಯಾಂಡಿಡೇಟ್ ಎನ್ನುತ್ತಿದ್ದ ಈಶ್ವರಪ್ಪನವರ ಮಾತು ಹುಸಿಯಾಗಿದೆ. ಖುದ್ದು, ಈಶ್ವರಪ್ಪ ಊಹಿಸಲೂ ಅಸಾಧ್ಯವಾದಂತಹ ಸೋಲು ಕಂಡಿದ್ದಾರೆ. ಮತಎಣಿಕೆಯ ಒಂದು ದಿನದ ಮುನ್ನವೂ ಈಶ್ವರಪ್ಪ ಗೆಲುವಿನ ಮಾತನ್ನು ಆಡಿದ್ದರು. […]

ಹಾಸನ ಲೋಕಸಭಾ ಕ್ಷೇತ್ರದ ಜೆಡಿಯಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹೀನಾಯ ಸೋಲು

Tuesday, June 4th, 2024
Prajwal Revanna

ಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಜೆಡಿಯಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ಸ್ ಅಭ್ಯರ್ಥಿ ಶ್ರೇಯಶ್ಸ್ ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ. ಗುರುವಾರ ತಡರಾತ್ರಿ ಪ್ರಜ್ವಲ್‌ ಅವರನ್ನ ಎಸ್‌ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಏಪ್ರಿಲ್‌ 26 ರಂದು ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿಕ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಬರೋಬ್ಬರಿ 34 ದಿನಗಳ ಬಳಿಕ ರಾಜ್ಯಕ್ಕೆ ಆಗಮಿಸಿದ್ದು, ಎಸ್‌ ಐಟಿ ಅಧಿಕಾರಿಗಳು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಕರ್ನಾಟಕದ 28 […]

ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

Tuesday, June 4th, 2024
ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,02,107 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 30,50,93 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 97,014 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 12,734 ಮತಗಳು ಬಿದ್ದಿವೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ […]

ಆಳ್ವಾಸ್ ಪ್ರಗತಿಯಲ್ಲಿ 254 ಕಂಪೆನಿಗಳು,20,043 ಹೆಚ್ಚು ಉದ್ಯೋಗ ಅವಕಾಶಗಳು

Tuesday, June 4th, 2024
Alvas pragati

ಮಂಗಳೂರು : 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ವೃತ್ತಿ ಆಕಾಂಕ್ಷಿಗಳಿಗೆ ವಿವಿಧ ರೀತಿಯ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದೆ. ಈ ಮೇಳವು ವಿಶೇಷವಾಗಿ ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಅವಕಾಶ ಕೊಡಿಸುವ ಮಹತ್ಕರ‍್ಯವನ್ನು ಸಾಂಗವಾಗಿ ನಡೆಸುತ್ತಿದೆ. ಎರಡು ದಶಕಗಳಿಂದ ಪ್ರಗತಿ ಮೇಳವು ತನ್ನ ನಿಖರವಾದ ಯೋಜನೆ, ಉತ್ತಮ ಆತಿಥ್ಯ ಮತ್ತು ಉನ್ನತ ಮಟ್ಟದ ವೃತ್ತಿ ಅವಕಾಶಗಳೊಂದಿಗೆ ಪ್ರತಿಷ್ಠಿತ ಉದ್ಯೋಗ ಮೇಳವಾಗಿ ರಾಷ್ಟçಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಳೆದ 13 ಆಳ್ವಾಸ್ ಪ್ರಗತಿ ಹಾಗೂ 7 ಉದ್ಯೋಗ […]

ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಲೈನ್‌ಮ್ಯಾನ್ ಮೃತ್ಯು

Monday, June 3rd, 2024
saleem

ಬೈಂದೂರು : ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುವ ವೇಳೆ ವಿದ್ಯುತ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಇಂದು ತಗ್ಗರ್ಸೆ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಲೈನ್‌ಮ್ಯಾನ್ ಸಲೀಂ ಮೇ. ಅಗಸಿಮನೆ (38) ಸಾವನ್ನಪ್ಪಿದ್ದಾರೆ.ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಲೈನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಲೀಂ ಅವರು ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿ. ವಿವಾಹಿತರಾಗಿರುವ ಅವರು […]

ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ: ಪಿ. ಶ್ರವಣ್ ಕುಮಾರ್

Saturday, June 1st, 2024
ADC

ಮಂಗಳೂರು : ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ವರದಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪುಸ್ತಕ ನೀಡುವ ಮೂಲಕ ಶುಭ ಹಾರೈಸಿದರು. ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಬಳಿಕ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿದ್ದು, ಇಂಡಿಯನ್ ಡಿಫೆನ್ಸ್ ಸ್ಟೇಟ್ ಸರ್ವಿಸ್ ನಲ್ಲಿ ತರಬೇತಿ ಪಡೆದಿದ್ದಾರೆ. ಇಂಡಿಯನ್ ರೆವೆನ್ಯೂ ಸರ್ವಿಸ್ […]

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ

Saturday, March 16th, 2024
chakravarti-sulibale

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಬಿಜೆಪಿಯಿಂದ ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ […]

ಕೆ.ಎಸ್‌.ಈಶ್ವರಪ್ಪ ಭೇಟಿ, ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ ಸತ್ಯಜಿತ್ ಸುರತ್ಕಲ್‌

Saturday, March 16th, 2024
Satyajith

ಮಂಗಳೂರು : ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಫಲರಾದ ಸತ್ಯಜಿತ್ ಸುರತ್ಕಲ್‌ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ್ದಾರೆ. ಅದಕ್ಕಾಗಿ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಗೆ ಸಿದ್ಧತೆ ಮಾಡಿಕೊಂಡಿರುವ ಕೆ.ಎಸ್‌.ಈಶ್ವರಪ್ಪಅವರನ್ನು ಭೇಟಿಮಾಡಿದ್ದಾರೆ. ಕೆ.ಎಸ್‌. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ […]

ಪುತ್ತೂರು ಬಿಜೆಪಿ ನಾಯಕರ ಪ್ರಬಲ ವಿರೋಧದಿಂದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ತಡೆ

Saturday, March 16th, 2024
Arun-Kumar-Puttila

ಪುತ್ತೂರು: ಬಿಜೆಪಿಗೆ ಬಂಡಾಯವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಲು ಪುತ್ತೂರು ಬಿಜೆಪಿ ಮುಖಂಡರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸೇರ್ಪಡೆ ತಡೆಹಿಡಿಯಲಾಗಿದೆ. ಪುತ್ತಿಲ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧೆ ನಡೆಸಿದ ಬಳಿಕ ಪುತ್ತಿಲ ಪರಿವಾರವನ್ನು ಸ್ಥಾಪಿಸಿಕೊಂಡು ತನ್ನ ಅಸ್ತಿತ್ವವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಇದಕ್ಕೆ ಕಡಿವಾಣ ಹಾಕಲು ಅವರನ್ನು ಮತ್ತೊಮ್ಮೆ ಬಿಜೆಪಿಗೆ ಸೇರ್ಪಡೆಗೊಳಿಸಲು […]