ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

Friday, November 8th, 2024
Illegal Boats

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ […]

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

Friday, November 8th, 2024
Kannada-Ratha

ಮಂಗಳೂರು : ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ ಲೋಕದಲ್ಲಿ ಆಳವಾದ ಬೇರನ್ನು ಹೊಂದಿದೆ. ಮಂಡ್ಯದಲ್ಲಿ ನಡೆಯಲಿರುವ […]

‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ. ಚೌಟ

Thursday, November 7th, 2024
Modi-Loan

ಮಂಗಳೂರು: ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು,” ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ರಾಷ್ಟ್ರೀಯ ಶಿಕ್ಷಣ […]

ಡಿ 7ರಂದು ಮುಂಬೈಯಲ್ಲಿ ವಿಶ್ವಬಂಟರ ಸಮಾಗಮ

Thursday, November 7th, 2024
World-Bunts

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಐಕಳ ಹರೀಶ್ ಶೆಟ್ಟಿ ಹೇಳಿದರು. ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿಕೊಂಡಿದ್ದು ಸುಮಾರು 75 ಸಾವಿರಕ್ಕೆ ಮಿಕ್ಕಿ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಯಾಗಿ ನಡೆದಿದೆ. ಮಂಬಯಿ ನಗರದಲ್ಲಿ 3 […]

ಸರಕಾರೀ ಸ್ಥಳಗಳನ್ನು ವಕ್ಫ್ ಹೆಸರಿಗೆ ಮಾಡುತ್ತಿರುವ ಕಾಂಗ್ರೆಸ್, ಉಡುಪಿಯಲ್ಲಿ ಡಿಸಿ ಕಚೇರಿಗೆ ಮುತ್ತಿಗೆ

Wednesday, November 6th, 2024
Wakf-Land

ಉಡುಪಿ : ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗುತ್ತಾ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು. ರಾಜ್ಯದಲ್ಲಿ ರೈತರ ಮತ್ತು ಮಠ ಮಂದಿರಗಳ ಆಸ್ತಿಗಳನ್ನು ಕಾಂಗ್ರೆಸ್ ವಕ್ಫ್ ಹೆಸರಲ್ಲಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ […]

ಹೆಣ್ಣು ಮಕ್ಕಳಿಗೆ ರಕ್ಷಣೆ‌ ಒದಗಿಸುವಂತೆ “ದಕ್ಷಿಣದಿಂದ ಉತ್ತರಕ್ಕೆ” ಪಾದಯಾತ್ರೆ

Wednesday, November 6th, 2024
Foot-March

ಮಂಗಳೂರು : ಹೆಣ್ಣು ಮಕ್ಕಳಿಗೆ ರಕ್ಷಣೆ‌ ನೀಡಬೇಕು: ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಮಂಗಳೂರು ಟು ದಿಲ್ಲಿ ಪ್ರಧಾನಿ ಕಚೇರಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪ್ರವೀಣ್ ಮಂಗಳೂರು, ಮೂಸಾ ಶರೀಫ್ ರವರ ನಾಯಕತ್ವದಲ್ಲಿ ಭೇಟಿ ಬಚಾವೋ ಎಂಬ ಧ್ಯೇಯವಾಕ್ಯದಡಿಯಲ್ಲಿ “ದಕ್ಷಿಣದಿಂದ ಉತ್ತರಕ್ಕೆ” – (ಮಂಗಳೂರಿನಿಂದ ದೆಹಲಿ) ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಒಂದು ಹೆಣ್ಣು ಓದಿನ ವಿಚಾರವಾಗಿಯೋ, ಅಥವಾ […]

ಜ.15-19: 5 ದಿನಗಳ ಕಾಲ ಮಂಗಳೂರಿನಲ್ಲಿ ಮೂರನೇ ವರ್ಷದ “ಸ್ಟ್ರೀಟ್ ಫುಡ್ ಫಿಯೇಸ್ಟಾ”

Wednesday, November 6th, 2024
Street-Food

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರುಗುವ ಮೂರನೇ ವರ್ಷದ ಸ್ಟ್ರೀಟ್ ಫುಡ್ ಫಿಯೇಸ್ಟಾ ಇದರ ದಿನಾಂಕ ಮತ್ತು ಸ್ಥಳದ ಘೋಷಣೆ ನಗರದ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಜರುಗಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, “ಮೂರನೇ ವರ್ಷದ ಸ್ಟ್ರೀಟ್ ಫುಡ್ ಕಾರ್ಯಕ್ರಮದ ದಿನಾಂಕ ಘೋಷಣೆ ಮಾಡಲು ಇಲ್ಲಿರುವ ದೇವರ ಮಕ್ಕಳ ಎದುರು ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮಕ್ಕಳಿಗೆ ವಿಶೇಷ ಆಹಾರ, ಆಟವಾಡಲು ವ್ಯವಸ್ಥೆ ಕಲ್ಪಿಸಿ ಅವರ ಸಂಭ್ರಮದಲ್ಲಿ ಭಾಗಿಯಾಗಿದ್ದೇವೆ. ಈ […]

ಶಿಗ್ಗಾವಿ ಉಪಚುನಾವಣೆ: ಶಾಸಕ ಮಂಜುನಾಥ ಭಂಡಾರಿ ಬಿರುಸಿನ ಪ್ರಚಾರ

Wednesday, November 6th, 2024
Manjunath-Bhandary-shiggavi

ಮಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸವಣೂರು ಪುರಸಭೆ ವ್ಯಾಪ್ತಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಈ ವೇಳೆ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಕಾಂಗ್ರೆಸ್ ಯುವನಾಯಕ ಸಿ.ಎಂ. ಫಯಾಜ್ ತಮ್ಮ ಬೆಂಬಲಿಗರ ಜೊತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಶಾಸಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ […]

“ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರು ತಿಳಿದಿರಬೇಕು”

Monday, November 4th, 2024
Legal-Awarness

ಮಂಗಳೂರು : ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನೀಡಲಾಗುವ ಹಲವಾರು ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ […]

ವಿದ್ಯಾರ್ಥಿನಿಯರು ಆತ್ಮರಕ್ಷಣೆ ತರಬೇತಿ ಪಡೆದರೆ ನಿರ್ಭೀತಿಯಿಂದ ಬದುಕಬಹುದು: ವೇದವ್ಯಾಸ ಕಾಮತ್

Monday, November 4th, 2024
Kamath

ಮಂಗಳೂರು: ಬಾಲಕಿಯರು, ಮಹಿಳೆಯರನ್ನು ಗುರಿಯಾಗಿಸಿ ಇಂದು ಹಲವು ದಾಳಿಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಆತ್ಮರಕ್ಷಣೆಯ ತರಬೇತಿ ಪಡೆಯುವ ಅಗತ್ಯವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ನಗರದ ಎಕ್ಕೂರಿನಲ್ಲಿರುವ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಪಿಎಂ ಶ್ರೀ ಅನುದಾನದಿಂದ ವಿದ್ಯಾರ್ಥಿನಿಯರಿಗೆ ಆಯೋಜಿಸಲಾಗಿದ್ದ ಮೂರು ತಿಂಗಳ ಆತ್ಮರಕ್ಷಣೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆತ್ಮ ರಕ್ಷಣಾ ತರಬೇತಿಯನ್ನು ಕಲಿತುಕೊಂಡರೆ ನಿರ್ಭೀತಿಯ ವಾತಾವರಣದಲ್ಲಿ ಮಹಿಳೆಯರು ಬದುಕಲು ಸಾಧ್ಯ. ವಿದ್ಯಾರ್ಥಿಗಳು ದೇಶದ ಭವಿಷ್ಯದ ಆಸ್ತಿಗಳೆಂದು ಮಣಗಂಡಿರುವ ಪ್ರಧಾನಿ ನರೇಂದ್ರ […]