ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ನಿಧನ

Wednesday, February 7th, 2024
Padmanabha naringana

ಮಂಗಳೂರು : ಪದ್ಮನಾಭ ನರಿಂಗಾನ (77)ಅವರು ಹೃದಯಾಘಾತದಿಂದ ನಗರದ ಖಾಸಗಿ‌ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ, ದಲಿತ ನಾಯಕ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಕಳೆದ‌‌ ಬಾರಿ‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರುಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ನಿಧನಕ್ಕೆ […]

ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Tuesday, February 6th, 2024
ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ವಯನಾಡಿನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರಿನ ಲತೀಪ್ ಕೆ.ವಿ(36) ಬಂಧಿತರು. ಮಂಗಳವಾರ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ […]

ಸಹಕಾರ ಸಂಘದಲ್ಲಿ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರಿಗೆ ಶೋಧ

Tuesday, February 6th, 2024
Kadaba

ಕಡಬ : ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಲಕ್ಷಾಂತರ ರೂಪಾಯಿಗಳನ್ನು ಸಾಲ ಪಡೆದು ಇಬ್ಬರು ವಂಚಿಸಿರುವುದಾಗಿ ದೂರು ದಾಖಲಾಗಿದೆ. ನೆಲ್ಯಾಡಿ ಸಹಕಾರ ಸಂಘ, ಉಪ್ಪಿನಂಗಡಿಯ ಸಹಕಾರಿ ಸಂಘ, ಅಲಂಕಾರು ಸಹಕಾರಿ ಸಂಘಗಳಲ್ಲಿ ಇವರು ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು […]

ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡಿದ್ದಲ್ಲಿ ಬಿಜೆಪಿ ಸೇರ್ಪಡೆ, ಇಲ್ಲವಾದಲ್ಲಿ ಲೋಕಸಭೆಗೆ ಸ್ಪರ್ಧೆ

Monday, February 5th, 2024
puttila-parivara

ಪುತ್ತೂರು: ಪುತ್ತಿಲ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆದಿದ್ದು ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇನ್ನು ಮೂರು ದಿನಗಳಲ್ಲಿ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಅಥವಾ ಲೋಕಸಭೆಯಲ್ಲಿ ಸ್ಫರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ನಿರ್ಧರಿಸುವ ಘೋಷಣೆ ಮಾಡಲಾಗಿದೆ. ಪುತ್ತಿಲರಿಗೆ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷತೆ ನೀಡದಿದ್ದಲ್ಲಿ ಮುಂದೆ ಜಿಲ್ಲೆಯಲ್ಲಿ ಮಹಾ ರಾಜಕೀಯ ವಿಪ್ಲವ ನಡೆಯಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಸಂಜೆ ಪುತ್ತೂರಿನ ಕೊಟೇಚ ಹಾಲ್‍ನಲ್ಲಿ ನಡೆದ ಪುತ್ತಿಲ […]

ಒಂದೇ ಸ್ಥಳದಲ್ಲಿ 18 ಗುಳಿಗ ದೈವಗಳ ಅಬ್ಬರದ ನರ್ತನ, ತುಳುನಾಡಿನ ಇತಿಹಾಸದಲ್ಲೇ ಮೊದಲು

Monday, February 5th, 2024
Barkaje-guliga

ಮಂಗಳೂರು: ಒಂದೇ ಬಾರಿ 18 ಗುಳಿಗ ದೈವದ ಗಗ್ಗರ ಸೇವೆ ವೇಣೂರು ಸಮೀಪದ ಬರ್ಕಜೆ ನವ ಗುಳಿಗ ಕ್ಷೇತ್ರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಬರ್ಕಜೆ ಎಂಬಲ್ಲಿ ಈ ಬಾರಿ 18 ಗುಳಿಗನ ಅಬ್ಬರದ ನರ್ತನ ಸೇವೆಗೆ ಭಕ್ತರು ಸಾಕ್ಷಿಯಾದರು. ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಒಂಬತ್ತು ಗುಳಿಗ ದೈವದ ನರ್ತನ ಸೇವೆ ನಡೆಯುತ್ತಿತ್ತು.‌ ಆದರೆ ಈ ಬಾರಿ ಸಂಪ್ರದಾಯದಂತೆ ಒಂಬತ್ತು ಹಾಗೂ ಸೇವೆಯಾಗಿ […]

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕೊಳಲು ನುಡಿಸಿ ಸೇವೆ ಸಲ್ಲಿಸಿದ ವಿದೇಶಿ ಪ್ರಜೆ

Monday, February 5th, 2024
Flute-Mathew

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬರು ರಾತ್ರಿ ಶ್ರೀಕೃಷ್ಣನ ಶಯನೋತ್ಸವದ ವೇಳೆ ಕೊಳಲು ನುಡಿಸಿ ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ರಾತ್ರಿ ಪಲ್ಲಕ್ಕಿಯಲ್ಲಿ ಕೃಷ್ಣನನ್ನಿಟ್ಟು ಕೊಳಲು ನುಡಿಸುತ್ತಾ ಕೊನೆಯ ಪ್ರದಕ್ಷಿಣೆ ಹಾಕಿ ನಂತರ ಯತಿಗಳು ಕೃಷ್ಣನನ್ನು ಶಯನೋತ್ಸವಕ್ಕೆ ಕೊಂಡೊಯ್ಯುವ ವೇಳೆ ಕೊಳಲು ನುಡಿಸಿ ಗಮನ ಸೆಳೆದಿದ್ದಾರೆ. ಮ್ಯಾಥ್ಯೂ ಎಂಬ ಹೆಸರಿನ ಈ ವ್ಯಕ್ತಿ ಸದ್ಯ ತನ್ನ ಹೆಸರನ್ನು ಮಾಧವ ಎಂದು ಬದಲಾಯಿಸಿಕೊಂಡಿದ್ದಾರೆ. ಇವರು ಬೆಳ್ತಂಗಡಿಯ ಹರಿದಾಸ ಡೋಗ್ರ ಎಂಬುವರ ಬಳಿ […]

ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

Monday, February 5th, 2024
UT-Khader-Panolibailu

ಮಂಗಳೂರು: ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಹರಕೆ ಕೋಲ ನೆರವೇರಿಸಿದ್ದಾರೆ. ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ. ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.

ವಿದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಉದ್ಯೋಗಾವಕಾಶ, ಅರ್ಜಿ ಆಹ್ವಾನ

Thursday, February 1st, 2024
Abroad Job

ಮಂಗಳೂರು : ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ (PLI), ವಾರ್ಷಿಕ ಬೋನಸ್, ಸೇವಾ ಬೋನಸ್, ಕೆಫೆಟೇರಿಯಾ ಭತ್ಯೆಗಳನ್ನು ನೀಡಲಾಗುತ್ತದೆ. ಇಂಗ್ಲಿಷ್ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು. ಅಭ್ಯರ್ಥಿಗಳನ್ನು ಆನ್‍ಲೈನ್ ಸಂದರ್ಶನ ಹಾಗೂ ಪ್ರಾಯೋಗಿಕ ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು ಇಮೇಲ್ hr.imck@gmail.com ಗೆ ಕಳುಹಿಸಿ ಕೊಡಬಹುದು. ಹೆಚ್ಚಿನ […]

ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ : ಕ್ಯಾಪ್ಟನ್ ಬ್ರಿಜೇಶ್ ಚೌಟ

Thursday, February 1st, 2024
Brijesh-chowta

ಮಂಗಳೂರು : ಸನ್ಮಾನ್ಯ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಮನ್‌ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ . ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ […]

ಮಧ್ಯಂತರ ಬಜೆಟ್ ದೇಶದ ಭರವಸೆಯ ಬಜೆಟ್ : ಶಾಸಕ ವೇದವ್ಯಾಸ್ ಕಾಮತ್

Thursday, February 1st, 2024
Vedavyas-kamath

ಮಂಗಳೂರು : ದೇಶ ಚುನಾವಣೆಯ ಹೊಸ್ತಿಲಲ್ಲಿದ್ದರೂ ಯಾವುದೇ ಓಲೈಕೆಯ ಘೋಷಣೆಗಳಿಲ್ಲದ ಭವ್ಯ ಭಾರತದ ಭವಿಷ್ಯದ ದೃಷ್ಟಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್ ಭಾರತವೀಗ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಇದು ದೇಶದ ಭರವಸೆಯ ಬಜೆಟ್ ಆಗಿದ್ದು ಬಿಜೆಪಿ ಸರ್ಕಾರದ ಮುಖ್ಯ ಗುರಿಯೇ ದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿ. ಆ ನಿಟ್ಟಿನಲ್ಲಿ ಕೇಂದ್ರದ ಮೋದಿ ಸರ್ಕಾರವು ದೇಶವನ್ನು ಕೊಂಡೊಯ್ಯುತ್ತಿದೆ. ಪಿಎಂ […]