ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ ಬಂಧನ

Saturday, October 26th, 2024
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ ಬಂಧನ

ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ, ಮಾಜಿ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸಚಿತಾ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು 2 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿದ್ದ ಆರೋಪದಲ್ಲಿ ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದೆ. ಕೆಲ ದಿನಗಳಿಂದ […]

ಕಾಂಗ್ರೆಸ್ ಸರ್ಕಾರದಿಂದ ಸಾವಿರಾರು ಅರ್ಹ ಬಿಪಿಎಲ್ ಕಾರ್ಡ್ ರದ್ದು :- ಶಾಸಕ ಕಾಮತ್ ಆಕ್ರೋಶ

Saturday, October 26th, 2024
Vedvyasa-Kamath

ಮಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿ ನಡೆಯುತ್ತಿದ್ದು ಅನೇಕ ಅರ್ಹ ಬಡವರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಪಡಿಸಲಾಗುತ್ತಿದೆ. ಆ ಕಾರಣಕ್ಕೆ ಅನೇಕರಿಗೆ ಈ ತಿಂಗಳ ಪಡಿತರ ಅಕ್ಕಿಯನ್ನು ತಡೆಹಿಡಿಯಲಾಗಿದ್ದು ಬಡ ವರ್ಗದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಏಕಾಏಕಿ ಸಾವಿರಾರು ಅರ್ಹ ಬಿಪಿಎಲ್‌ ಚೀಟಿಗಳು ರದ್ದಾಗಿರುವ ಬಗ್ಗೆ ನಾಗರಿಕರು ದಿನನಿತ್ಯ ಕರೆ ಮಾಡಿ ಅಳಲು ತೋಡಿಕೊಳ್ಳುತ್ತಿದ್ದು ಇನ್ನೂ […]

ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ

Saturday, October 26th, 2024
Patla Foundation

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು. ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು. ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಮಾತನಾಡಿ, ಒಂಬತ್ತು ವರ್ಷಗಳಲ್ಲಿ ಯಕ್ಷಗಾನ ಕಲಾವಿದರಿಗೆ ಸುಮಾರು 13 ಕೋಟಿ […]

ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ

Saturday, October 26th, 2024
ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ

ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು ಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಜಯರಾಮ ಆಚಾರ್ಯ ಅತ್ಯಂತ ಸೂಕ್ಷ್ಮ ಪ್ರಜ್ಞೆಯ ಪಾಂಡಿತ್ಯಪೂರ್ಣ ಕಲಾವಿದರಾಗಿದ್ದರು,ಹಿರಿಯ ಪರಂಪರೆಯ […]

ಜಿಹಾದಿ ಸಂಚು : ಯುವತಿ ಆತ್ಮಹತ್ಯೆ ಯತ್ನ ಪೊಲೀಸ್ ಇಲಾಖೆ ವೈಫಲ್ಯಕ್ಕೆ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ

Friday, October 25th, 2024
bharath-shetty

ಸುರತ್ಕಲ್: ಸುರತ್ಕಲ್ ಇಡ್ಯಾ ನಿವಾಸಿ ಹಿಂದೂ ಯುವತಿ ಒಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಪೊಲೀಸ್ ವೈಫಲ್ಯದ ವಿರುದ್ಧ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ […]

ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Thursday, October 24th, 2024
Veerendra-Hegde

ಉಜಿರೆ: ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ – ಎಲ್ಲಾ ರಂಗಗಳಲ್ಲಿಯೂ ಹೆಗ್ಗಡೆಯವರು ಹೊಗಳಿಕೆಗೆ ಹಿಗ್ಗದೆ, ಟೀಕೆಗಳಿಗೆ ಅಂಜದೆ, ಸ್ಥಿತಪ್ರಜ್ಞೆಯಿಂದ ಎಲ್ಲಾ ಮಠ-ಮಂದಿರಗಳಿಗೂ ಮಾದರಿಯಾಗಿ ಅನವರತ ಸೇವೆ ಮಾಡಿ ಧರ್ಮಸ್ಥಳದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ್ದಾರೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ […]

ಅಗ್ನಿವೀರನಾಗಿ ಆಯ್ಕೆಗೊಂಡ ಪುನೀತ್‌ರಾಜ್‌ಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ

Thursday, October 24th, 2024
Puneeth-Raj

ಪುತ್ತೂರು : ಭಾರತೀಯ ಸೇನೆ ನಡೆಸುವ ʼಅಗ್ನಿಪಥ್‌ʼ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಪುನೀತ್‌ರಾಜ್‌ ʼಅಗ್ನಿವೀರ್‌ʼ ಗೆ ಆಯ್ಕೆಗೊಂಡಿರುತ್ತಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಮಲೆನಾಡಿನ ತಪ್ಪಲು ಗ್ರಾಮವಾದ ಕೊಂಬಾರಿನವರಾದ ಇವರು ಬಡತನದ ಬೇಗೆಯಲ್ಲಿ ಬೆಂದು ಬೆಳೆದವರು. ಎಳವೆಯಲ್ಲಿಯೇ ತಂದೆಯನ್ನು ಕಳೆದುಕೊಂಡ ಇವರು ಸ್ವಂತ ಮನೆಯೂ ಇಲ್ಲದೆ ಬಂಧುಗಳ ಆಶ್ರಯದಲ್ಲಿ ತಾಯಿಯ ಜೊತೆ ವಾಸಮಾಡುತ್ತಿದ್ದರು.ದುರ್ದೈವವೆಂದರೆ, ಮೂರು ವರ್ಷಗಳ ಹಿಂದೆ ಕಾಯಿಲೆಯಿಂದ ತಾಯಿಯೂ ಮೃತಪಟ್ಟರು. ಬಳಿಕ ಮಾವನ ನೆರವಿನೊಂದಿಗೆ ವಿದ್ಯಾಭ್ಯಾಸ ಮುಂದುವರಿಸಿದ ಇವರು, […]

ತ್ರಿಚಕ್ರ ವಾಹನ ಪಡೆಯಲು ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

Thursday, October 24th, 2024
Matsyavahini

ಮಂಗಳೂರು : ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನ ಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ ಮಾಸಿಕ ರೂ. […]

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರುಗೆ ಜಯ

Thursday, October 24th, 2024
Kishor-Putturu

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಅಕ್ಟೋಬರ್ 24 ರಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ. ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ […]

ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಶಿಲಾನ್ಯಾಸ, ಪುತ್ತೂರಿನ ಕಾಂಗ್ರೆಸ್ ಶಾಸಕರು ಭಾಗಿ

Wednesday, October 23rd, 2024
Putturu-VHP

ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆದಿದ್ದು, ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದರು. ಪುತ್ತೂರಿನ ವಿಹಿಂಪ ನಿವೇಶನದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಅಶೋಕ್ ರೈಯವರನ್ನು ಸಂಘಟಕರು ಶಾಲು ಹೊದಿಸಿ ಗೌರವಿಸಿದರು. ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕ ಶಕುಂತಳಾ ಶೆಟ್ಟಿಯವರು ಕಾಂಗ್ರೆಸ್ ಪಕ್ಷ ಸೇರಿ ಶಾಸಕರಾಗುವ ಮೊದಲು ಬಿಜೆಪಿಯಲ್ಲಿದ್ದರು. […]