ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

Saturday, January 6th, 2024
swamiji

ಬೆಂಗಳೂರು : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು. ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು […]

ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ ಹವ್ಯಾಸ- ಕೆ.ವಿ.ಪ್ರಭಾಕರ್

Saturday, January 6th, 2024
Rohan-cup

ಮಂಗಳೂರು : ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ ಹವ್ಯಾಸ.ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಮೂಲಕ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟ ಉತ್ತಮ ಮಾದರಿ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಗ್ರಾಮ ವಾಸ್ತವ್ಯ ದಂತಹ ತನ್ನ ಸಮಾಜ ಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ […]

ಪಳ್ಳಿಕೆರೆ ರೈಲ್ವೇ ಟ್ರ್ಯಾಕ್ ಬಳಿ ಯುವತಿಯ ಮೃತದೇಹ ಪತ್ತೆ

Saturday, January 6th, 2024
Ishwarya-Joseph

ಕಾಸರಗೋಡು : ಯುವತಿಯೊಬ್ಬಳ ಮೃತದೇಹ ಪಳ್ಳಿಕೆರೆ ಮಾಸ್ತಿ ಗುಡ್ಡೆ ಯಲ್ಲಿ ಎಂಬಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೃತ ಯುವತಿಯನ್ನು ಕಾವುಮಂದದ ಐಶ್ವರ್ಯ ಜೋಸೆಫ್ (30) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಪರಿಸರವಾಸಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತ ದೇಹದ ಬಳಿ ಲಭಿಸಿದ ಪರ್ಸ್ ನಲ್ಲಿದ್ದ ಗುರುತು ಚೀಟಿಯಿಂದ ಯುವತಿಯ ಗುರುತು ಪತ್ತೆ ಹಚ್ಚಲಾಗಿದೆ. ಕೋಜಿಕ್ಕೊಡ್ […]

ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

Saturday, January 6th, 2024
ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

ಉಳ್ಳಾಲ: ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ (88) ಅವರು ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ”ಯಲ್ಲಿ ನಿಧನರಾದರು. ನಿಧನರಾದರು. ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗ ಮೊದಲಾದ ಸಾಹಿತ್ಯ ಲೋಕಕ್ಕೆ ಅಪಾರ ಸೇವೆಯನ್ನು ನೀಡಿದ್ದರು. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27‌ ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ

Friday, January 5th, 2024
Akshay Kozhikode

ಮಂಗಳೂರು : ಪ್ರೇಯಸಿಗೆ ಮೋಸಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದ ಉಳ್ಳಾಲ ತಾಲೂಕಿನ ಬೀರಿ ಬಳಿ ಶುಕ್ರವಾರ ನಡೆದಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ರಂಪಾಟ ನಡೆಸಿದ್ದಾಳೆ. ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. […]

ಪತ್ರಕರ್ತರು ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿಗೆ ತರಬೇಕು : ಶಾಸಕ ವೇದವ್ಯಾಸ್‌ ಕಾಮತ್‌ 

Friday, January 5th, 2024
Journalist Meeting

ಮಂಗಳೂರು : ಪತ್ರಕರ್ತರು ಪ್ರಾಮಾಣಿಕವಾಗಿ ಸುದ್ದಿ ಮಾಡಬೇಕಿದ್ದು, ಸಮಾಜದ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ ನಡೆಸಬೇಕಾಗಿದೆ. ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿಗೆ ತರಬೇಕಿದೆ. ಈ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಪತ್ರಕರ್ತರ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸಮಾಜಮುಖಿ ಪತ್ರಿಕೋದ್ಯಮಕ್ಕೆ ದಾರಿ ದೀಪವಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿದ್ದಾರೆ. ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಗಳೂರಿನ ಪತ್ರಕರ್ತರು ಮಾದರಿಯಾಗಿ […]

ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್‌ ಮೃತ್ಯು

Friday, January 5th, 2024
Raghu-MR

ಕಡಬ : ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಮೃತರು ಎಂದು ಗುರುತಿಸಲಾಗಿದೆ. ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೋಲಿಸರು […]

ಪಿಎಂ ಜನಮನ್ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Friday, January 5th, 2024
DC- Mullai Muhilan

ಮಂಗಳೂರು : ದುರ್ಬಲ ಬುಡಕಟ್ಟು ಸಮುದಾಯದವರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನ (ಪಿಎಂ ಜನಮನ್) ಯೋಜನೆಯಡಿ ಅಭಿವೃದ್ಧಿ ಮಿಷನ್ ಪ್ರಾರಂಭಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕುಮಾರ್ ತಿಳಿಸಿದ್ದಾರೆ. ಅವರು ಈ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲ ಇಲಾಖೆಗಳು ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸಂಬಂಧಿಸಿದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಹುಡುಕಿ ಯೋಜನೆಯ […]

ಹಿರಿಯ ಪತ್ರಕರ್ತ ರಘುನಾಥ ಎಂ. ವರ್ಕಾಡಿಯವರ ತುಳು ಕಥೆಗಳ ಕೃತಿ ಬಿಡುಗಡೆ

Thursday, January 4th, 2024
Raghunath Vorkady

ಮಂಗಳೂರು: ಹಿರಿಯ ಪತ್ರಕರ್ತ ರಘುನಾಥ ಎಂ. ವರ್ಕಾಡಿಯವರು ಬರೆದು, ಆಕೃತಿ ಆಶಯ ಪಬ್ಲಿಕೇಶನ್ಸ್‌ನಿಂದ ಪ್ರಕಟಿಸಿರುವ ‘ದೇವಕಿ ಬೈದ್ಯೆದಿ ಪಂಡ್‌ನ ಜನಪದ ಕತೆಕುಲು- ಸೂರ್ಯೆ ಚಂದ್ರೆ ಸಿರಿ’ ಎಂಬ ತುಳು ಕಥೆಗಳ ಕೃತಿಯನ್ನು ನಗರದ ಪತ್ರಿಕಾ ಭವನದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಗುರುವಾರ ಬಿಡುಗಡೆಗೊಳಿಸಿದರು. ಭತ್ತದ ಬಗೆಗಿನ ತುಳುನಾಡಿನ ನಂಬಿಕೆ, ಆರಾಧನಾ ಭಾವ ಹೆಚ್ಚಿನವರಿಗೆ ತಿಳಿದಿಲ್ಲ. ಅಂತಹ ವಿಷಯಗಳು ಕೃತಿಗಳ ರೂಪದಲ್ಲಿ ಮೂಡಿಬಂದಾಗ ಅದು ಇತಿಹಾಸವಾಗಿ ಮುಂದಿನ ಜನಾಂಗಕ್ಕೂ ತಿಳಿಯಲ್ಪಡುತ್ತದೆ. […]

ಬೋಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ ?

Thursday, January 4th, 2024
Jagdish-shetty

ಮಂಗಳೂರು: ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಕಾರ್ಪೊರೇಟರ್ , ಬಿಜೆಪಿ ನಾಯಕ ಜಗದೀಶ್ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಹಳೇ ಮಂಜುರನ್ ಹೋಟೆಲ್ ಮುಂಭಾಗದಲ್ಲಿ ಕಾರಿನಲ್ಲಿ ಕುಳಿತು ಜಗದೀಶ್ ಶೆಟ್ಟಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅವರಿಗೆ ಫುಡ್ ಪಾಯಿಸನ್ ಆಗಿ ಕಾರಲ್ಲಿ ಪ್ರಜ್ಞೆ ತಪ್ಪಿದ್ದರು ಎಂದೂ ಹೇಳಲಾಗುತ್ತಿದೆ. ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ […]