ಸುರತ್ಕಲ್‌ನ ತಾತ್ಕಾಲಿಕ ಮಾರುಕಟ್ಟೆ ಉದ್ಘಾಟನೆ

Sunday, March 25th, 2018
Surathkal Market

ಸುರತ್ಕಲ್ : ಸುರತ್ಕಲ್‌ನಲ್ಲಿ ಅತ್ಯಾಧುನಿಕ ಸುಸಜ್ಜಿತ ಮಾರುಕಟ್ಟೆಯನ್ನು ಒಂದೂವರೆ ವರ್ಷದೊಳಗೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಮೊಹಿಯುದ್ದೀನ್ ಬಾವಾ ಹೇಳಿದರು. ಸುರತ್ಕಲ್ ನ ತಾತ್ಕಾಲಿಕ ಮಾರುಕಟ್ಟೆಯನ್ನು ಶನಿವಾರ ಶಾಸಕ ಮೊಹಿಯುದ್ದೀನ್ ಬಾವಾ ಉದ್ಘಾಟಿಸಿ ಮಾತನಾಡಿದರು. ನೂತನ ಮಾರುಕಟ್ಟೆ ನಿರ್ಮಾಣವಾಗುವ ವರೆಗೆ ವ್ಯಾಪಾರಿಗಳ ಹಿತ ದೃಷ್ಟಿಯಿಂದ ಅವರ ಅನುಕೂಲಕ್ಕೆ ತಕ್ಕಂತೆ ಪಾಲಿಕೆ ವತಿಯಿಂದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಹೊಸ ಮಾರುಕಟ್ಟೆ ನಿರ್ಮಾಣವಾದ ಬಳಿಕ ನೂತನ ಮಾರುಕಟ್ಟೆಗೆ ಸ್ಥಳಾಂತರಿಸಲಾಗುವುದು ಎಂದರು. ಅಭಿವೃದ್ಧಿಯಲ್ಲಿ ಜನತೆ ಕೈ ಜೋಡಿಸಿದಾಗ ನಮಗೂ […]

ನಕಲಿ ಆಹಾರ ಮತ್ತು ಪಾನೀಯ ತಯಾರಕರಿಗೆ ಎಚ್ಚರಿಕೆ

Saturday, March 24th, 2018
Bottle

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇನಾಮಿ ಸಂಸ್ಥೆಗಳು ಹಳೇ ಬಾಟಲಿಗಳಲ್ಲಿ ಮತ್ತು ಬ್ರಾಂಡ್ ರಹಿತ ನಕಲಿ ಹೆಸರುಗಳಲ್ಲಿ ಹಾಗೂ ಆಹಾರ ನೋಂದಣಿ ಅಥವಾ ಪರವಾನಗಿ ಇಲ್ಲದೇ ಪಾನೀಯಗಳನ್ನು ತಯಾರಿಸಿ (ಬಿರಿಂಡ, ಕಸ್ಕಸ್, ಎಳ್ಳು ಜ್ಯೂಸ್, ಬೊಂಡ ಜ್ಯೂಸ್ ಇತ್ಯಾದಿ) ಮಾರಾಟ ಮಾಡುತ್ತಿರುವುದು ಕಂಡು ಬಂದಿರುತ್ತದೆ. ಆಹಾರ ಪರವಾನಗಿ ಅಥವಾ ನೋಂದಣಿ ಪಡೆಯದೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ (ISO) ನಿಯಮಗಳನ್ನು ಉಲ್ಲಂಘಿಸಿ ಆಹಾರ/ಪಾನೀಯ ತಯಾರಿಸುವುದು ಮತ್ತು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಇದನ್ನು ಮುಂದುವರಿಸಿದಲ್ಲಿ […]

ವೆನ್‍ಲಾಕ್‍ನಲ್ಲಿ ಐಸಿಯು ಸಾಮಥ್ರ್ಯ ಹೆಚ್ಚಿಸಲು ಸರಕಾರಕ್ಕೆ ಕೆಡಿಪಿ ಸಭೆ ಒತ್ತಾಯ

Saturday, March 24th, 2018
kdp

ಮಂಗಳೂರು : ಜಿಲ್ಲಾಸ್ಪತ್ರೆ ವೆನ್‍ಲಾಕ್‍ನಲ್ಲಿ ಐಸಿಯು ತುರ್ತು ಚಿಕಿತ್ಸಾ ಘಟಕದಲ್ಲಿ (ತೀವ್ರ ನಿಗಾ ಘಟಕ) ಬೇಡಿಕೆಗೆ ತಕ್ಕಂತೆ ಹಾಸಿಗೆ ಲಭ್ಯವಿಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಸಾಮಥ್ರ್ಯ ಹೆಚ್ಚಿಸುವಂತೆ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸರಕಾರವನ್ನು ಒತ್ತಾಯಿಸಲಾಗಿದೆ. ಶುಕ್ರವಾರ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಸಭೆಯಲ್ಲಿ ಈ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲು ನಿರ್ಣಯಿಸಲಾಯಿತು. . ವಿಷಯ […]

ಯೋಗಸಾಧಕ ದಿ|ಕೆ.ನಾರಾಯಣ ಶೆಟ್ರ ಪ್ರಥಮ ವರ್ಷದ ಸ್ಮರಣಾಂಜಲಿ

Saturday, March 24th, 2018
narayana shetty

ಮಂಗಳೂರು : ಯೋಗಸಾಧಕ, ಸಮಾಜ ಸೇವಕ, ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾದ ದಿ|ಕೆ.ನಾರಾಯಣ ಶೆಟ್ರ ಪ್ರಥಮ ವರ್ಷದ ಸ್ಮರಣಾಂಜಲಿ ಕಾರ್ಯಕ್ರಮವು ದಿ.ಕೆ.ನಾರಾಯಣ ಶೆಟ್ಟಿ ಸಂಸ್ಮರಣಾ ಸಮಿತಿ ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ) ಮಂಗಳೂರು ವತಿಯಿಂದ ಮಂಗಳೂರಿನ ಪುರಭವನದಲ್ಲಿ ದಿ.23ರಂದು ನಡೆಯಿತು. ಡಾ.ಎಮ್ ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ ತನ್ನ ವಿಚಾರ ಧಾರೆಗಳನ್ನು ಸಮಾಜಕ್ಕೆ ಅರ್ಪಿಸಿ ಸಮಾಜಮುಖಿಯಾಗಿ ಬೆಳೆದವರು ಕಲ್ಪವೃಕ್ಷಕ್ಕೆ ಸಮಾನರು .ಅಂತಹ ಯೋಗ್ಯ ರೀತಿಯಲ್ಲಿ ಸಾಧನೆ ಮಾಡಿದವರು ನಿಜವಾದ […]

‘ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’

Friday, March 23rd, 2018
u-t-kader

ಮಂಗಳೂರು: ‘ರಾಜ್ಯದಲ್ಲಿ ಶೇಖರಣೆಯಾದ ಸಂಪತ್ತನ್ನು ಕೆಲವರು ಮಾತ್ರ ಬಳಸಿಕೊಳ್ಳುವುದು ಬೇಡ, ಅದು ಎಲ್ಲ ವರ್ಗದ ಎಲ್ಲರಿಗೂ ಸಿಗಬೇಕು ಎಂಬ ದೆಸೆಯಿಂದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮೊದಲ ಬಾರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’ ಎಂದು ಸಚಿವ ಯು.ಟಿ. ಖಾದರ್ ಹೇಳಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಹೋಬಳಿ ಮಟ್ಟದಲ್ಲಿ ರಾಜ್ಯದ ಪ್ರಥಮ, ಉಳ್ಳಾಲ ಪುರಸಭೆ ವ್ಯಾಪ್ತಿಯ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ‘ಇಂದಿರಾ ಕ್ಯಾಂಟಿನ್’ಅನ್ನು ಗುರುವಾರ ಉದ್ಘಾಟಿಸಿ […]

ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ(ರಿ)ಪದ್ಯಾಣ ಗೋಪಾಲಕೃಷ್ಣ ಹೆಸರಿನಲ್ಲಿ ನೀಡಲಾಗುತ್ತಿರುವ 2018ರ ಪ.ಗೋ ಪ್ರಶಸ್ತಿ ಪ್ರಧಾನ

Friday, March 23rd, 2018
dakshina-kannda

ಮಂಗಳೂರು: ಸಮಾಜದಲ್ಲಿ ಪತ್ರಕರ್ತರು ತುರ್ತು ಸಂದರ್ಭಗಳಲ್ಲಿ ಸೈನಿಕರಂತೆ, ಕೆಲವೊಮ್ಮೆ ಅವರಿಗೂ ಮುಂಚಿತವಾಗಿ ಸ್ಥಳಕ್ಕೆ ತಲುಪಿ ಕಾರ್ಯ ನಿರ್ವಹಿಸಿರುವುದನ್ನು ಗಮನಿಸಿರುವುದಾಗಿ ಎಂದು ಹಿರಿಯ ಪತ್ರಕರ್ತೆ ಅನಿತಾ ಪಿಂಟೋ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ(ರಿ) (ಪದ್ಯಾಣ ಗೋಪಾಲಕೃಷ್ಣ ) ಹೆಸರಿನಲ್ಲಿ ನೀಡಲಾಗುತ್ತಿರುವ 2018ರ ಪ.ಗೋ ಪ್ರಶಸ್ತಿಯನ್ನು ಪ್ರಶಾಂತ್ ಸುವರ್ಣ ಅವರಿಗೆ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ವಿತರಿಸಿ ಅವರು ಮಾತನಾಡುತ್ತಿದ್ದರು. ದೇಶದ ಗುಜರಾತ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪ, ದಕ್ಷಿಣ ಭಾರತದಲ್ಲಿ ಸಂಭವಿಸಿದ ಸುನಾಮಿಯ […]

ಮುಸ್ಲಿಮರಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ನವರು ಅವರನ್ನು ನಂಬಲು ಸಾದ್ಯವಿಲ್ಲ: ಕವಿತಾ ಸನಿಲ್

Friday, March 23rd, 2018
kavita-sanil

ಮಂಗಳೂರು: ಕರಾವಳಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡಾ ರಂಗೇರುತ್ತಿದೆ. ಕರಾವಳಿಯಲ್ಲಿ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಪ್ರವಾಸ ಕರಾವಳಿ ಕೈ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಆದರೆ ಈ ನಡುವೆ ಕರಾವಳಿಯ ಕಾಂಗ್ರೆಸ್ ಮುಖಂಡರು ಒಂದರ ಮೇಲೊಂದು ಎಡವಟ್ಟುಗಳನ್ನು ಮಾಡಿಕೊಳ್ಳುತಲೇ ಇದ್ದು ಚುನಾವಣೆಯಲ್ಲಿ ಇದು ಹಿನ್ನಡೆಯಾಗಿ ಪರಿಣಮಿಸಬಹುದೇ ಎಂಬ ಅನುಮಾನ ಕಾಡುತ್ತಿದೆ. ಒಂದೆಡೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಸಂದರ್ಭದಲ್ಲಿ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ನ ಮುಸ್ಲಿಂ ಮುಖಂಡರು ಭಾರೀ ಒತ್ತಡ ಹೇರಿದ್ದರು. ಅದರೆ […]

ತುಳು ಸಾಹಿತ್ಯ ಅಕಾಡೆಮಿ: ಮೂವರು ಸಾಧಕರಿಗೆ ಪ್ರಶಸ್ತಿ

Friday, March 23rd, 2018
tulu-academy

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮೂರು ಮಂದಿಯನ್ನು ಆಯ್ಕೆ ಮಾಡಲಾಗಿದೆ. ಡಾ. ಎನ್‌. ನಾರಾಯಣ ಶೆಟ್ಟಿ(ಯಕ್ಷಗಾನ), ಸೇಸಪ್ಪ ಪಂಬದ ಮಂಜನಾಡಿ(ಜಾನಪದ) ಹಾಗೂ ಹೆಚ್. ಶಕುಂತಳಾ ಭಟ್ (ಸಾಹಿತ್ಯ) ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ, 2017ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಯಲ್ಲಿ ಪ್ರಶಸ್ತಿಗಾಗಿ ಮೂರು ವಿಭಾಗಗಳಲ್ಲಿ ತಲಾ 1 ಪುಸ್ತಕವನ್ನು […]

ಮಸಾಜ್ ನೆಪದಲ್ಲಿ ಹನಿಟ್ರ್ಯಾಪ್… ಮಂಗಳೂರಲ್ಲಿ ಖತರ್ನಾಕ್‌ ಗ್ಯಾಂಗ್‌ ಅಂದರ್‌!

Friday, March 23rd, 2018
arrested

ಮಂಗಳೂರು: ನಗರದ ಮೇರಿಹಿಲ್‌ನ ಬಾಡಿಗೆ ಮನೆಯೊಂದರಲ್ಲಿ ಮಸಾಜ್ ಹೆಸರಲ್ಲಿ ಹನಿಟ್ರ್ಯಾಪ್ ಮಾಡಿ ವ್ಯಕ್ತಿವೋರ್ವನನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ರವಿ ಗೌಡ (42), ಮಂಗಳೂರು ಜೈಲ್ ರಸ್ತೆ ಮಿಷನ್ ಕಂಪೌಂಡ್‌ನ ಪ್ರೀತೇಶ್ (36), ಮಂಗಳೂರು ಕೊಡಕ್ಕಲ್ ಪಡೀಲ್‌ನ ರಮೇಶ್ (35) ಎಂದು ಗುರುತಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಮೂವರು ಮಹಿಳೆಯರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಗರದ ವ್ಯಕ್ತಿವೋರ್ವನಿಗೆ ಮಸಾಜ್ ಮಾಡುವ ನೆಪದಲ್ಲಿ ಬಾಡಿಗೆ ಮನೆವೊಂದಕ್ಕೆ ಕರೆಯಿಸಿಕೊಂಡು ನಂತರ ಮನೆಗೆ ಹೋದ […]

ಇಂಟರ್‌ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್‌: ಸಂಜಯ್ ಪೂಜಾರಿಗೆ ಪ್ರಶಸ್ತಿ, ಗೌರವ

Friday, March 23rd, 2018
inter-karate

ಬಂಟ್ವಾಳ: ಶ್ರೀಲಂಕಾದಲ್ಲಿ ನಡೆದ ಇಂಟರ್‌ನ್ಯಾಷನಲ್ ಎಸ್ ಕೆ ಎ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಎರಡು ಬೆಳ್ಳಿ ಪದಕಗಳನ್ನು ಪಡೆದ ವಿಟ್ಲ ವಿಠಲ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸಂಜಯ್ ಪೂಜಾರಿ ಇವರನ್ನು ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವತಿಯಿಂದ ಗೌರವಿಸಲಾಯಿತು. ಕೋಟಿಕೆರೆ ಸದಾನಂದ ಪೂಜಾರಿ ಮತ್ತು ವಸಂತಿ ದಂಪತಿಯ ಪುತ್ರರಾದ ಇವರು ಕರಾಟೆ ಶಿಕ್ಷಕ ಮಾಧವ ಅಳಿಕೆಯವರ ಶಿಷ್ಯ. ಈ ಕಾರ್ಯಕ್ರಮದಲ್ಲಿ ಜೇಸಿಐ ವಿಟ್ಲ ಘಟಕದ ಪೂರ್ವಾಧ್ಯಕ್ಷ ಬಾಬು ಕೊಪ್ಪಳ, ವಿಠಲ ವಿದ್ಯಾ ಸಂಘದ ಸದಸ್ಯ […]