ಬ್ರಹ್ಮಕಲಶೋತ್ಸವಗಳಿಂದ ಶಕ್ತಿಸಂಚಯನ: ಡಾ. ಡಿ. ವೀರೇಂದ್ರ ಹೆಗ್ಗಡೆ

Tuesday, March 20th, 2018
veerendra-hegde

ಮೂಲ್ಕಿ: ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಶ ವಿಧಿವಿಧಾನಗಳು ಕ್ಷೇತ್ರ ಸಾನ್ನಿಧ್ಯದ ಶಕ್ತಿಯನ್ನು ಸಂಚಯನಗೊಳಿಸಿ ಭಕ್ತ ಸಮುದಾಯಕ್ಕೆ ಮತ್ತು ಊರಿಗೆ ಕ್ಷೇಮವನ್ನು ಉಂಟು ಮಾಡುತ್ತವೆ, ಈ ಕಾರ್ಯದಿಂದ ನಾಡಿನ ಪ್ರಜೆಗಳಲ್ಲಿ ಒಗ್ಗಟ್ಟು ಮತ್ತು ಸಾಮೂಹಿಕ ಸಾಮರಸ್ಯದ ಶಕ್ತಿ ಉಂಟಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ಪರಂಪರೆಯಲ್ಲಿ ಅಧ್ಯಾತ್ಮ ಸಂಪತ್ತು ತುಂಬಿ ತುಳುಕುತ್ತಿದೆ. ಈ […]

ಪುತ್ತೂರು ಬಳಿ ಗುಡುಗು ಸಿಡಿಲಿನ ಅಬ್ಬರ… ಓರ್ವ ಸಾವು, ಇಬ್ಬರಿಗೆ ಗಾಯ

Tuesday, March 20th, 2018
puttur

ಮಂಗಳೂರು: ಸಿಡಿಲು ಬಡಿಲು ವ್ಯಕ್ತಿವೋರ್ವ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕು ಸವಣೂರು ಗ್ರಾಮದ ಪುಣ್ಯಪ್ಪಾಡಿ ಎಂಬಲ್ಲಿ ಸಂಜೆ ನಡೆದಿದೆ. ಮೃತರನ್ನು ಧನಂಜಯ (35)ಎಂದು ಗುರುತಿಸಲಾಗಿದೆ. ಮೃತನ ಸಹೋದರಿ ಗೀತಾ ಹಾಗೂ ದೊಡ್ಡಪ್ಪ ಕುಂಡ ಎಂಬುವರು ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕದ್ರಿ ನವೀಕೃತ ಹಿಂದೂ ರುದ್ರಭೂಮಿ ಉದ್ಘಾಟನೆಗೆ ಅಡ್ಡಿ

Tuesday, March 20th, 2018
kadri-mangaluru

ಮಂಗಳೂರು: ಕದ್ರಿ ನವೀಕೃತ ಹಿಂದೂ ರುದ್ರಭೂಮಿ ಉದ್ಘಾಟನೆಗೆ ಸ್ಥಳೀಯ ಜೋಗಿ ಸಮುದಾಯದವರು ಅಡ್ಡಿ ಪಡಿಸಿದ ಘಟನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಶಾಸಕ ಜೆ.ಆರ್‌.ಲೋಬೊ, ಮೇಯರ್ ಭಾಸ್ಕರ್‌ ಮೊಲಿ ಉಪಸ್ಥಿತಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರುದ್ರಭೂಮಿ ಸುತ್ತ ಇಂಟರ್‌‌ಲಾಕ್‌ ಆಳವಡಿಸಿದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೋಗಿ ಸಮುದಾಯದವರು ಇಂಟರ್‌ಲಾಕ್‌ ತೆರವಿಗೆ ಆಗ್ರಹಿಸಿದರು. ಈ ರುದ್ರಭೂಮಿ ಹಿಂದೆ ಜೋಗಿ ಸಮುದಾಯಕ್ಕೆ ಮೀಸಲಾಗಿ, ಜೋಗಿಗಳ ಮೃತದೇಹವನ್ನು ಜೋಗಿ ಸಂಪ್ರದಾಯದಂತೆ ಇಲ್ಲಿ ದಫನ್‌ ಮಾಡಲಾಗುತ್ತಿತ್ತು. ನಂತರ ಇದು ಸಾರ್ವಜನಿಕ ರುದ್ರಭೂಮಿಯಾದರೂ […]

ಪಟ್ಲ ಯಕ್ಷಾಶ್ರಯ ಯೋಜನೆಯ – 2 ನೇ ಮನೆಯ ಹಸ್ತಾಂತರ

Tuesday, March 20th, 2018
sathish-patla

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಟ್ಲ ಯಕ್ಷಾಶ್ರಯ ಯೋಜನೆಯಂತೆ ಎರಡನೇಯ ಮನೆಯ ಗೃಹಪ್ರವೇಶವು ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಎಂಬಲ್ಲಿ ನೆರವೇರಿತು ಬ್ರಹ್ಮಶ್ರೀ ರವೀಶ್ ತಂತ್ರಿಯವರು ಈ ಹಿಂದೆ ಕಟೀಲು ಮೇಳದಲ್ಲಿ 45 ವರ್ಷಗಳ ಕಾಲ ಕಲಾಸೇವೆಗೈದು ಇದೀಗ ಅಶಕ್ತರಾಗಿ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಶ್ರೀ ಕೊರಗಪ್ಪ ನಾಯ್ಕ ಇವರಿಗೆ ಮನೆಯನ್ನು ಹಸ್ತಾಂತರಿಸಿದರು. ಅಲ್ಲದೆ ಪೌಂಡೇಶನ್ ಹತ್ತು ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಿ ಕಲಾವಿದರ ಬಾಳಲ್ಲಿ ಬೆಳಕಾಗಿ ಮೂಡಿಬಂದಿರುವುದಕ್ಕೆ ಟ್ರಸ್ಟ್ ನ್ನು ಅಭಿನಂದಿಸಿದರು. ಮುಖ್ಯವಾಗಿ ಇವತ್ತು ಪಟ್ಲ […]

ಕರಾವಳಿಗೆ ರಾಹುಲ್‌ ಗಾಂಧಿ ಆಗಮನ: ಸಿಎಂ ಸೇರಿ ಮುಖಂಡರಿಂದ ಅದ್ದೂರಿ ಸ್ವಾಗತ

Tuesday, March 20th, 2018
siddaramaih

ಉಡುಪಿ: ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದು, ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ.ಪರಮೇಶ್ವರ್, ಕೆ.ಸಿ.ವೇಣುಗೋಪಾಲ್, ರಮಾನಾಥ ರೈ ಮತ್ತಿತರರು ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಮತ್ತೆ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಿದ ರಾಹುಲ್, ಎರ್ಮಾಳಿನ ಹೆಲಿಪ್ಯಾಡ್‌ನಲ್ಲಿ ಬಂದಿಳಿದರು. ಈ ವೇಳೆ ಹೆಲಿಪ್ಯಾಡ್‌ನಲ್ಲಿ ರಾಹುಲ್‌ ಗಾಂಧಿ ಅವರನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ, […]

ಶಾಸಕ ಅಭಯಚಂದ್ರ ಜೈನ್‌ ವಿರುದ್ಧ ವಿಹೆಚ್‌ಪಿ ಪ್ರತಿಭಟನಾ ಸಭೆ

Tuesday, March 20th, 2018
abhaychandra-jain

ಮಂಗಳೂರು: ಕರಿಂಜೆ ಶ್ರೀಗಳ ಬಗ್ಗೆ ಮಾತನಾಡಿದ್ದ ಅಭಯಚಂದ್ರ ಜೈನ್‌ ಅವರು ಹಿಂದೂ ವಿರೋಧಿ ಶಾಸಕ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್‌ ಸೋಮವಾರ ಸ್ವರಾಜ್ಯ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಸಿತು. ಹಿಂಸೆಯನ್ನು ಮಾಡದಂತಹ ಸಮಾಜದಿಂದ ಬಂದವರು ಶಾಸಕ ಅಭಯಚಂದ್ರ ಜೈನ್‌. ಸಂತರನ್ನು ಒಬ್ಬ ಸಾಮಾನ್ಯ ವ್ಯಕ್ತಿ ನಿಂದಿಸಿದರೆ ಕ್ಷಮಿಸಬಹುದು. ಆದರೆ ಶಾಸಕರಂತಹ ವ್ಯಕ್ತಿ ನಿಂದಿಸಿದರೆ ಕ್ಷಮಿಸಲಾರೆವು. ನಾವು ಕಾವಿ ತೊಡುವವರು, ಸಂತರಲ್ಲಿ ನಿಮ್ಮ ದರ್ಪ ತೋರಿಸಿದರೆ ಕಾವಿ ಅಗ್ನಿ ವಸ್ತ್ರವಾಗಿ ನಿಮ್ಮನ್ನು ಸುಡಬಹುದು. ಆದ್ದರಿಂದ ನೀವು ರಾಜಕೀಯ […]

ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ವಾರ್ಡನ್ ಮತ್ತು ಸಿಬಂದಿಯಿಂದ ಹಲ್ಲೆ

Monday, March 19th, 2018
Assault

ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಸುಮಾರು 20ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳ ಮೇಲೆ  ಹಾಸ್ಟೆಲ್‌ನಲ್ಲಿದ್ದ  ಕಾಲೇಜು ಸಿಬಂದಿ ಸೇರಿ ಯದ್ವಾತದ್ವಾ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್‌ನಲ್ಲಿ ಶನಿವಾರ  ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಿಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಸೇರಿ ಹಾಸ್ಟೆಲ್‌ನಲ್ಲೇ ಸಂಭ್ರಮಾಚರಣೆ ನಡೆಸುತ್ತಿದ್ದರು. ಆದರೆ,‌ ಇದಕ್ಕೆ ವಾರ್ಡನ್ ಮತ್ತು ಸಿಬಂದಿ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ […]

ಮೋದಿ ಜನಪರ ಯೋಜನೆಗಳ ಲಾಭ ರಾಜ್ಯದ ಜನರಿಗೂ ಸಿಗಬೇಕು- ಡಿ ವೇದವ್ಯಾಸ ಕಾಮತ್

Sunday, March 18th, 2018
vedavyasa

ಮಂಗಳೂರು  : ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸದೇ ವಂಚಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಶ್ರೇಷ್ಟ ಯೋಜನೆಗಳ ಲಾಭವನ್ನು ಜನರು ಪಡೆಯಬೇಕು. ಭಾರತೀಯ ಜನತಾ ಪಾರ್ಟಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಜನಪರ ಯೋಜನೆಗಳಿಗೆ ಚಾಲನೆ ನೀಡಲಿದೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ಮಂಗಳೂರು ನಗರ ದಕ್ಷಿಣದಲ್ಲಿ ಮನೆಮನೆ ಸಂಪರ್ಕ ಅಭಿಯಾನದ ಅಂಗವಾಗಿ 51 ನೇ […]

ಜಾಲತಾಣಗಳಲ್ಲಿ ಯುವತಿರೊಂದಿಗಿನ ಸೆಲ್ಫಿ ವೈರಲ್, ಹೋಮ್ ಗಾರ್ಡ್ ಪರಾರಿ

Saturday, March 17th, 2018
homeguard

ಉಡುಪಿ: ಯುವಕನೋರ್ವ ಹತ್ತಾರು ಯುವತಿಯರೊಂದಿಗೆ ತೆಗೆಸಿಕೊಂಡ ಸೆಲ್ಪಿ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈತ ಕಾರ್ಕಳ ತಾಲೂಕಿನ ಹೋಮ್ ಗಾರ್ಡ್ ಎಂದು ಹೇಳಲಾಗಿದ್ದು ಈತ 10ಕ್ಕೂ ಹೆಚ್ಚು ಯುವತಿಯರನ್ನು ಯಾಮಾರಿಸಿದ್ದಾನೆ ಎಂದು ಆರೋಪಿಸಲಾಗಿದೆ.ಈತನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಈ ಪ್ರಸಂಗದ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಯುವತಿಯರೊಂದಿಗೆ ಸೆಲ್ಫಿ ಪೋಟೋಗಳಲ್ಲಿ ಇರುವ ಯುವಕ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆಯ ಮಂಜರಪಲ್ಕೆ ನಿವಾಸಿ ಸುಜಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ನಿಟ್ಟೆ […]

ನಟ ಜಗ್ಗೇಶ್ 55ನೇ ಹುಟ್ಟುಹಬ್ಬದ ಪ್ರಯುಕ್ತ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

Saturday, March 17th, 2018
jaggesh-2

ಉಡುಪಿ: ಚಿತ್ರ ನಟ ಜಗ್ಗೇಶ್ ಇಂದು ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಕುಟುಂಬ ಸಮೇತರಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಜಗ್ಗೇಶ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನೂ ಜಗ್ಗೇಶ್ ಚಂಡಿಕಾ ಹೋಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.