ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ನಿಧನ

Thursday, November 2nd, 2023
shekar-Ajekar

ಕಾರ್ಕಳ : ಅಜೆಕಾರು ಗ್ರಾಮದ ನಿವಾಸಿ ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ಬುಧವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೇಖರ್ ಅಜೆಕಾರ್ ಇವರು, ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು . ಬೆಳದಿಂಗಳ ಸಾಹಿತ್ಯ ಕೂಟ ಸಹಿತ ಹಲವು ಸಾಹಿತ್ಯಕೂಟಗಳನ್ನು ಸಂಘಟಿಸುವುದರ ಮೂಲಕ ಕರಾವಳಿ ಪರಿಸರದಲ್ಲಿ ಜನಪ್ರಿಯರಾಗಿದ್ದ ರಲ್ಲದೆ ಮುಂಬೈ ಸಹಿತ ಹಲವೆಡೆ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಬೆಂಗಳೂರು […]

ಮಂಗಳೂರಿನಲ್ಲಿ 68ನೆಯ ಕನ್ನಡ ರಾಜ್ಯೋತ್ಸವ ಆಚರಣೆ

Thursday, November 2nd, 2023
Kannada-Rajyotsava

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ 68 ನೆಯ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವುದರ ಜೊತೆಗೆ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ಸಾಹಿತ್ಯ ಹಾಗೂ ಸಂಸ್ಕೃತಿಗಳಿಗೂ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿದರು.  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದಾರೆ. […]

ಚಿನ್ನ ತರಲು ಪೀಡಿಸುತ್ತಿದ್ದ ಗಂಡ, ನವ ವಿವಾಹಿತೆ ತಾಯಿ ಮನೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ

Monday, October 30th, 2023
ಚಿನ್ನ ತರಲು ಪೀಡಿಸುತ್ತಿದ್ದ ಗಂಡ, ನವ ವಿವಾಹಿತೆ ತಾಯಿ ಮನೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ನವ ವಿವಾಹಿತೆ ಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಪ್ರೀತಿಸಿ ಮದುವೆಯಾದರಿಂದ ಒಳ್ಳೆ […]

ಸಿನೆಮಾ ಶೂಟಿಂಗ್ ಸನ್ನಿವೇಶದಲ್ಲಿ ಕೊರಗಜ್ಜನ ಡೈಲಾಗ್, ನಟ ಕೋಮಲ್ ಕಲ್ಲಾಪು ಆದಿ ಸ್ಥಳಕ್ಕೆ ಭೇಟಿ

Sunday, October 29th, 2023
ಸಿನೆಮಾ ಶೂಟಿಂಗ್ ಸನ್ನಿವೇಶದಲ್ಲಿ ಕೊರಗಜ್ಜನ ಡೈಲಾಗ್, ನಟ ಕೋಮಲ್ ಕಲ್ಲಾಪು ಆದಿ ಸ್ಥಳಕ್ಕೆ ಭೇಟಿ

ಮಂಗಳೂರು : ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಉಳ್ಳಾಲದ ಕಲ್ಲಾಪು ಬುರ್ದುಗೋಳಿ ಗುಳಿಗ, ಕೊರಗತನಿಯ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. “ಕಾಲಾಯ ನಮಃ” ಸಿನೆಮಾ ಶೂಟಿಂಗ್ ಸನ್ನಿವೇಶವೊಂದರಲ್ಲಿ ಸಹನಟ ಶೈನ್ ಶೆಟ್ಟಿಯವರು ಹೇಯ್ ನಿನಗೆ ಒಳ್ಳೆದಾಯ್ತು ಮಾರಾಯ. ಕೊರಗಜ್ಜನಿಗೆ ಚಕ್ಕುಳಿ, ವೀಳ್ಯ ಇಟ್ಟು ಪ್ರಸಾದ ತಗೊಳ್ಳಬೇಕೆಂದು ಬಾಯಿ ತಪ್ಪಿ ಡೈಲಾಗ್ […]

ಕಂಕನಾಡಿ ಗ್ರಾಮಾಂತರ ಠಾಣೆ ಹಾಗೂ ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

Sunday, October 29th, 2023
ಕಂಕನಾಡಿ ಗ್ರಾಮಾಂತರ ಠಾಣೆ ಹಾಗೂ ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು : ವಾಮಂಜೂರಿನಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆಯ ನೂತನ ಕಟ್ಟಡ ಹಾಗೂ ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟನೆಯನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೆರವೇರಿಸಿದರು.  ಉದ್ಘಾಟನೆ ಬಳಿಕ ಮಾತನಾಡಿದ ಅವರು ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಮಾಡುತ್ತಿದ್ದೇವೆ. ಸಿಸಿಟಿವಿಗಳ ಮೂಲಕ ಇಡೀ ರಾಜ್ಯದಲ್ಲಿ ಪೊಲೀಸ್ ಠಾಣೆಗಳನ್ನು ನಿಗಾ ಇಡುತ್ತೇವೆ. ಈ ರೀತಿಯ ನಿಗಾ ಸೆಂಟರ್ ದೇಶದಲ್ಲೇ ಮೊದಲು ಎಂದು ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.  1950ರಲ್ಲಿ ಕಂಕನಾಡಿ ಗ್ರಾಮಾಂತರ, 1959 ರಲ್ಲಿ ಬಜ್ಪೆ ಠಾಣೆ ಸ್ಥಾಪನೆಯಾಗಿತ್ತು. ಇವೆರಡಕ್ಕೂ […]

ಮುಂದಿನ ಬಜೆಟ್ ನಲ್ಲಿ ಬಂಟ ರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ – ಮುಖ್ಯಮಂತ್ರಿ ಭರವಸೆ

Saturday, October 28th, 2023
Vishwa-Buntara-sammelana-Ud

ಉಡುಪಿ : ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. […]

ರಾಜ್ಯದಲ್ಲಿ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ : ಮುಖ್ಯ ಮಂತ್ರಿ

Saturday, October 28th, 2023
Cm-Mangalore

ಮಂಗಳೂರು : ರಾಜ್ಯದಲ್ಲಿ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲು ಬಂದಿರುವ ಮುಖ್ಯಮಂತ್ರಿ, ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ […]

ಸುಳ್ಯ ಮೂಲದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ

Friday, October 27th, 2023
ಸುಳ್ಯ ಮೂಲದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ : ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿ ಕನಕಮಜಲಿನ ಕಾಪಿಲ ನಿವಾಸಿ ಗಿರಿಯಪ್ಪ ಗೌಡರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರ ಪತ್ನಿ ಐಶ್ವರ್ಯ(26) ಆತ್ಮಹತ್ಯೆಗೆ ಶರಣಾದವರು. ಸುಳ್ಯ ಮೂಲದ ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್ ಅವರನ್ನು ಮದುವೆಯಾಗಿದ್ದರು. ಐಶ್ವರ್ಯರವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ದುಡಿಯುತ್ತಿದ್ದರು. ಪತಿ ರಾಜೇಶ್ ಸ್ವಂತ ಐಸ್ ಕ್ರೀಮ್ ಪಾರ್ಲರ್ […]

ಕಾಸರಗೋಡಿನಲ್ಲಿ ದಾಖಲೆಗಳಿಲ್ಲದ 33.24 ಲಕ್ಷ ರೂ. ವಶ

Thursday, October 26th, 2023
money

ಕಾಸರಗೋಡು : ದಾಖಲೆಗಳಿಲ್ಲದ ಸುಮಾರು 33.24 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಕಾಸರಗೋಡು ನಗರ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮುಹಮ್ಮದ್ ಮತ್ತು ಸುಲೈಮಾನ್ ಬಂಧಿತ ಆರೋಪಿಗಳು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ನಗರದ ಜುವಲ್ಲರಿಯೊಂದರ ಸಮೀಪ ಇಬ್ಬರನ್ನು ಬಂಧಿಸಲಾಯಿತು. ಬಂಧಿತರ ಬಳಿ ಯಾವುದೇ ದಾಖಲೆ ಪತ್ರ ಲಭಿಸಿಲ್ಲ. ನಗರದಲ್ಲಿ ಅಕ್ರಮ ಹಣಕಾಸಿನ ವ್ಯವಹಾರ ದ ಬಗ್ಗೆ ಮಾಹಿತಿ ಲಭಿಸಿದ್ದರಿಂದ ದಾಳಿ ಹಾಗೂ ತಪಾಸಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಲ್ಲಿ ‘ಮಂಗಳೂರು ದಸರಾ’ ಶೋಭಾಯಾತ್ರೆ

Wednesday, October 25th, 2023
mangalore-Dasara

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಲ್ಲಿ ‘ಮಂಗಳೂರು ದಸರಾ’ ಶೋಭಾಯಾತ್ರೆ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲ ಸ್ತಂಭನದೊಂದಿಗೆ ಸಮಾಪನಗೊಂಡಿದೆ. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಹಾಗಣಪತಿ, ಶಾರದಾ ಮಾತೆಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪೂಜೆ ಯೊಂದಿಗೆ ಮಂಗಳವಾರ ಸಂಜೆ ಶೋಭಾಯಾತ್ರೆ ಮೆರವಣಿಗೆ ಆರಂಭಗೊಂಡಿತ್ತು. ಸುಮಾರು 7 ಕಿ.ಮೀ. ನಗರ ಪ್ರದಕ್ಷಿಣೆಯ ಬಳಿಕ ಬುಧವಾರ ಮುಂಜಾನೆ ಮರಳಿ […]