ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Tuesday, October 10th, 2023
veekshith

ಮಂಗಳೂರು : ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಾಖಲಾಗಿದೆ. ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದ ವೀಕ್ಷಿತ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುತ್ತೂರಿನ ಕುರಿಯ ಎಂಬಲ್ಲಿನ ನಿವಾಸಿಯಾಗಿರುವ ವೀಕ್ಷಿತ್ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ

Tuesday, October 10th, 2023
boat-fire

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಗರದ ಹಳೆಬಂದರು (ದಕ್ಕೆ) ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರ ಬೋಟ್ ಗಳಿಗೆ ಬೆಂಕಿ‌ ಹರಡುವುದನ್ನು ತಪ್ಪಿಸಲಾಗಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ‘ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ […]

ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ, ಮಂಗಳೂರು ನಗರಕ್ಕೆ ಶೌರ್ಯ ರಥ ಯಾತ್ರೆ ಪ್ರವೇಶ

Monday, October 9th, 2023
ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ, ಮಂಗಳೂರು ನಗರಕ್ಕೆ ಶೌರ್ಯ ರಥ ಯಾತ್ರೆ ಪ್ರವೇಶ

ಮಂಗಳೂರು : ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಶೌರ್ಯ ರಥ ಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600 ಕಿ.ಮೀ. ಸಂಚರಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿ ಇದೀಗ ಕರಾವಳಿ ಜಿಲ್ಲೆ ಪ್ರವೇಶಿಸಿದ್ದು, ಪುತ್ತೂರು ಮತ್ತು ಬಂಟ್ವಾಳದಲ್ಲಿ ಯಶಸ್ವಿ ಸಮಾವೇಶಗಳನ್ನು ನಡೆಸಿ ಇದೀಗ ಮಂಗಳೂರು ನಗರ ಪ್ರವೇಶಿಸಿದೆ. ನಗರದ ಹೊರವಲಯದ ಅಡ್ಯಾರಿನಲ್ಲಿ ರಥಕ್ಕೆರ ಭವ್ಯ ಸ್ವಾಗತ ಕೋರಲಾಯಿತು. ಸಂಜೆ 4.30ಕ್ಕೆ ನಗರದ ಜ್ಯೋತಿ ವೃತ್ತದಿಂದ ಶೌರ್ಯ ರಥ ಯಾತ್ರೆ ಸಾಗಿ […]

ಮಂಗಳೂರು ದಸರಾಕ್ಕೆ ಪಾಲಿಕೆ ವತಿಯಿಂದಲೇ ವಿದ್ಯುದ್ದೀಪಾಲಂಕಾರ:- ಶಾಸಕ ಕಾಮತ್

Monday, October 9th, 2023
Vedvyas-Kamath

ಮಂಗಳೂರು : ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕ್ಷೇತ್ರದ ನವೀಕರಣದ ರೂವಾರಿ ಗೌರವಾನ್ವಿತ ಬಿ.ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಸಂದರ್ಭದಲ್ಲಿ ಈ ಬಾರಿಯೂ ಸಹ ಕಳೆದ ವರ್ಷಗಳಂತೆ ಪಾಲಿಕೆ ವತಿಯಿಂದಲೇ 1.30 ಕೋಟಿ ರೂ ವೆಚ್ಚದಲ್ಲಿ ನಗರಕ್ಕೆ ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುವ ದಸರಾ ಉತ್ಸವವು ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯಬೇಕೆಂಬ ಉದ್ದೇಶದಿಂದ ಕ್ಷೇತ್ರದ ಮುಂದಾಳುಗಳು, ಮಹಾನಗರ ಪಾಲಿಕೆ ಆಡಳಿತ […]

ಕೃಷಿಕ ಕುಟುಂಬವನ್ನು ಎಬ್ಬಿಸಲು ಮುಂದಾಗ ಅರಣ್ಯ ಇಲಾಖೆ ಸಿಬ್ಬಂದಿ, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹಲವು ಶಾಸಕರು

Monday, October 9th, 2023
ಕೃಷಿಕ ಕುಟುಂಬವನ್ನು ಎಬ್ಬಿಸಲು ಮುಂದಾಗ ಅರಣ್ಯ ಇಲಾಖೆ ಸಿಬ್ಬಂದಿ, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹಲವು ಶಾಸಕರು

ಬೆಳ್ತಂಗಡಿ : ತಾಲೂಕಿನ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ ಎರಡನೇ ಬಾರಿ ಈ ಮನೆ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ […]

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

Monday, October 9th, 2023
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಡಿದ್ದಾರೆ. ಭಾನುವಾರ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡರ ಕುಟುಂಬ ಆ.9ರ ಸೋಮವಾರ ಬೆಳಗ್ಗೆ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ. ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ ಮತ್ತು ಕುಕ್ಕೆ […]

ಪಾಣೆಮಂಗಳೂರಿನ ನೇತ್ರಾವತಿ ಹಳೆಯ ಸೇತುವೆಯಲ್ಲಿ ಬಿರುಕು, ಸ್ಥಳೀಯರಲ್ಲಿ ಆತಂಕ

Monday, October 9th, 2023
ಪಾಣೆಮಂಗಳೂರಿನ ನೇತ್ರಾವತಿ ಹಳೆಯ ಸೇತುವೆಯಲ್ಲಿ ಬಿರುಕು, ಸ್ಥಳೀಯರಲ್ಲಿ ಆತಂಕ

ಬಂಟ್ವಾಳ : ಪಾಣೆಮಂಗಳೂರಿನ ನೇತ್ರಾವತಿ ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ರವಿವಾರ ರಾತ್ರಿ ದ್ವಿಚಕ್ರ ವಾಹನ ಸವ್ವಾರರೊಬ್ಬರು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಕಡೆಯಿಂದ ನಾಲ್ಕನೇ ಪಿಲ್ಲರ್ ಬಳಿ ಬಿರುಕು ಕಾಣಿಸಿಕೊಂಡಿದೆ. ರಸ್ತೆಯ ಡಾಮರು ಎದ್ದು ಹೋಗಿದ್ದು, ಬಿರುಕು ಗೋಚರಿಸುತ್ತಿದೆ. ಆದರೆ ಇದು ಸೇತುವೆ ಬಿರುಕು ಬಿಟ್ಟಿರುವುದೋ ಅಥವಾ ಮೇಲಿನ ರಸ್ತೆಯ ಭಾಗದಲ್ಲಿ ಮಾತ್ರ ಬಿರುಕು ಕಂಡುಬಂದಿದೆಯೇ ಎಂಬುದು ಖಚಿತಗೊಂಡಿಲ್ಲ. ಈ ಕುರಿತು ಸಂಬಂಧಪಟ್ಟ ತಜ್ಞರು ಪರಿಶೀಲನೆ ನಡೆಸಿ ವರದಿ ನೀಡಬೇಕಿದೆ […]

ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ಭೂಮಾಲೀಕರಿಗೆ ಪರಿಹಾರ ಪಡೆದುಕೊಳ್ಳಲು ಸೂಚನೆ

Saturday, October 7th, 2023
NH169

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 169(13) ಸಾವಣೂರು ಜಂಕ್ಷನ್ ಬಿಕರ್ನಕಟ್ಟೆ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಾಗಿ ಮೂಡಬಿದ್ರೆ ತಾಲ್ಲೂಕು ಪಡುರ್ಮಾನಾಡು ಮತ್ತು ಪುತ್ತಿಲ ಗ್ರಾಮಗಳಿಗೆ ಭೂಸ್ವಾಧೀನಗೊಂಡ ಜಮೀನನ್ನು ಭೂ ಮಾಲೀಕರಿಗೆ ರಾಜ್ಯ ಉಚ್ಚ ನ್ಯಾಯಾಲಯದ ಆದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ಪರಿಹಾರ ಪಡೆದುಕೊಳ್ಳಲು ದಾಖಲೆಗಳೊಂದಿಗೆ ಕೋರಿಕೆ ಪತ್ರ ಸಲ್ಲಿಸುವಂತೆ ಸೂಚನಾ ಪತ್ರವನ್ನು ಕಚೇರಿಯಿಂದ ಈಗಾಗಲೇ ಜ್ಯಾರಿ ಮಾಡಲಾಗಿದೆ. ಈ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದ್ದು, ಈವರೆಗೆ ಕ್ಲೇಮ್ ಅರ್ಜಿ ಸಲ್ಲಿಸದಿರುವ ಭೂ ಮಾಲೀಕರು ಒಂದು […]

ಕೊಣಾಜೆ ನಡುಪದವಿನಲ್ಲಿ ಚಿರತೆ ಹಿಡಿಯಲು ಜೀವಂತ ಕೋಳಿಯನ್ನು ಕಟ್ಟಿ ಬೋನು ಇರಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು

Saturday, October 7th, 2023
konaje- leopard

ಕೊಣಾಜೆ: ನಡುಪದವು ಬಳಿ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ‌ ಸಿಬ್ಬಂದಿ ಜೀವಂತ ಕೋಳಿಯನ್ನು ಕಟ್ಟಿ ಬೋನು ಇರಿಸಿದ್ದಾರೆ. ಕೊಣಾಜೆ ನಡುಪದವಿನಲ್ಲಿ ಗುರುವಾರ ರಾತ್ರಿ 9.30 ವೇಳೆಗೆ ವಾಕಿಂಗ್ ಹೋಗುತಿದ್ದ ಉಪನ್ಯಾಸಕರೊಬ್ಬರು ಅಲ್ಲೇ ಸಮೀಪದ ಲಾಡ ಬಳಿ ಚಿರತೆಯನ್ನು ನೋಡಿ ಭಯಭೀತಗೊಂಡಿದ್ದರು. ಅಲ್ಲದೆ ಅದೇ ರಾತ್ರಿ ಪರಿಸರದ ಮಹಿಳೆ‌ ಸೇರಿದಂತೆ ಒಟ್ಟು ಐದು ಜನರು ಚಿರತೆಯನ್ನು ನೋಡಿ ಭಯಗೊಂಡಿರುವುದಾಗಿ ತಿಳಿಸಿದ್ದಾರೆ. ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಹಲವರಿಗೆ ಒಂದೇ […]

ಸಿಸಿಬಿ ಕಾರ್ಯಾಚರಣೆ: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದವನ ಸೆರೆ

Friday, October 6th, 2023
ಸಿಸಿಬಿ ಕಾರ್ಯಾಚರಣೆ: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದವನ ಸೆರೆ

ಮಂಗಳೂರು : ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮಂಗಳೂರು ನಗರದ ಕಂಕನಾಡಿ–ಪಂಪ್ ವೆಲ್ ನ ಹಳೆ ರಸ್ತೆಯಲ್ಲಿರುವ ವಿಶ್ವಾಸ್ ಕ್ರೌನ್ ಅಪಾರ್ಟ್ ಮೆಂಟ್ ನ ನೆಲ ಅಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ “ಹೆಲ್ಪ್ ಲೈನ್ ಮಂಗಳೂರು” ಎಂಬ ಹೆಸರಿನ ಸಂಸ್ಥೆಯನ್ನು ಇಟ್ಟು ಕೊಂಡು ಆಧಾರ್ ಕಾರ್ಡ್, ಪಡಿತರ ಚೀಟಿ(ರೇಶನ್ ಕಾರ್ಡ್) ,ಅಂಕ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ […]