ರಾಷ್ಟ್ರೀಯ ಆಯುರ್ವೇದ ದಿನಾಚರಣೆ – “ಅಸಮರ್ಪಕ ಜೀವನ ಶೈಲಿಯಿಂದ ಆರೋಗ್ಯಕ್ಕೆ ಆಪತ್ತು”

Tuesday, October 29th, 2024
Ayurveda-Day

ಮಂಗಳೂರು : ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಯಿಗೆ ಚಪಲಕ್ಕೆ […]

ಗ್ರಾಮೀಣ ಜನರ ಸಮಸ್ಯೆನಿವಾರಣೆಗೆ ಮಾಧ್ಯಮ ರಂಗದ ನಿರಂತರ ಪ್ರಯತ್ನ ಇತರರಿಗೆ ಮಾದರಿ -ಮುಲ್ಲೈ ಮುಗಿಲನ್

Tuesday, October 29th, 2024
Kutluru

ಮಂಗಳೂರು : ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮವಾರ ಸಮವಸ್ತ್ರ […]

ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು

Sunday, October 27th, 2024
Twahiba

ಮಂಜೇಶ್ವರ: ಇಲ್ಲಿನ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಅಸೌಖ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ. ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಇಂದು ರಾತ್ರಿ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಆಕಾಲಿಕ ಮರಣಕ್ಕೆ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಾಚಾರ್ಯರಾದ ಮುಹಮ್ಮದ್ […]

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

Sunday, October 27th, 2024
cm-siddaramaiha

ಬೆಂಗಳೂರು : ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು. ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ತಿಳಿಸಿದರು.

ಆಸ್ಪತ್ರೆಯಿಂದ ಪರಾರಿಯಾಗಿದ್ದ ಕಳ್ಳತನ ಆರೋಪಿಯನ್ನು ಬಂಧಿಸಿದ ಪೊಲೀಸರು

Sunday, October 27th, 2024
Koli-charan

ಸುಳ್ಯ : ಕಳ್ಳತನ ಪ್ರಕರಣವೊಂದರಲ್ಲಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಬಂಧಿತ ಆರೋಪಿ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿಂದ ಬಂಧಿಸಿದ್ದರು.

ವಿದ್ಯಾರ್ಥಿ ಮೇಲೆ ಹೆಜ್ಜೇನು ದಾಳಿ, ಭಯದಿಂದ ಓಡಿ ಹೋದ ಜನ

Sunday, October 27th, 2024
Thirthesh

ಬೆಳ್ತಂಗಡಿ : ಸಂತ ತೆರೆಸಾ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಮೇಲೆ ತೀವ್ರವಾಗಿ ಹೆಜ್ಜೇನು ದಾಳಿ ನಡೆಸಿ ಗಾಯಗೊಳಿಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲಾಗದ ವಿದ್ಯಾರ್ಥಿಗೆ ಪಂಚಾಯತ್ ಸಿಬ್ಬಂದಿ ರಕ್ಷಣೆ ನೀಡಿ ಹಾರೈಕೆ ಮಾಡಿದ್ದಾರೆ. ವಿದ್ಯಾರ್ಥಿ ತೀರ್ಥೇಶ್ ಮೇಲಂತಬೆಟ್ಟು ಶಾಲೆಯಿಂದ ಮನೆ ಕಡೆ ಬರುತ್ತಿದ್ದಾಗ ಹೆಜ್ಜೇನು ದಾಳಿ ಮಾಡಿತ್ತು. ಜೊತೆಗೆ ಹಲವು ಜನರ ಮೇಲೆ ದಾಳಿ ಮಾಡಿದಾಗ , ಜನ ಭಯದಿಂದ ಓಡಿ ಹೋದರು. ಸುತ್ತಲಿನ ಮನೆಯವರು ಭೀತಿಯಿಂದ ಮನೆಬಾಗಿಲು ಮುಚ್ಚಿದರು. ಹೆಜ್ಜೇನು ದಾಳಿಯಿಂದ ನೋವು ಉರಿ ತಾಳಲಾರದೆ, ಅತ್ತು […]

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ ಬಂಧನ

Saturday, October 26th, 2024
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ ಬಂಧನ

ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ, ಮಾಜಿ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸಚಿತಾ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು 2 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿದ್ದ ಆರೋಪದಲ್ಲಿ ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದೆ. ಕೆಲ ದಿನಗಳಿಂದ […]

ಕಾಂಗ್ರೆಸ್ ಸರ್ಕಾರದಿಂದ ಸಾವಿರಾರು ಅರ್ಹ ಬಿಪಿಎಲ್ ಕಾರ್ಡ್ ರದ್ದು :- ಶಾಸಕ ಕಾಮತ್ ಆಕ್ರೋಶ

Saturday, October 26th, 2024
Vedvyasa-Kamath

ಮಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿ ನಡೆಯುತ್ತಿದ್ದು ಅನೇಕ ಅರ್ಹ ಬಡವರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಪಡಿಸಲಾಗುತ್ತಿದೆ. ಆ ಕಾರಣಕ್ಕೆ ಅನೇಕರಿಗೆ ಈ ತಿಂಗಳ ಪಡಿತರ ಅಕ್ಕಿಯನ್ನು ತಡೆಹಿಡಿಯಲಾಗಿದ್ದು ಬಡ ವರ್ಗದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಏಕಾಏಕಿ ಸಾವಿರಾರು ಅರ್ಹ ಬಿಪಿಎಲ್‌ ಚೀಟಿಗಳು ರದ್ದಾಗಿರುವ ಬಗ್ಗೆ ನಾಗರಿಕರು ದಿನನಿತ್ಯ ಕರೆ ಮಾಡಿ ಅಳಲು ತೋಡಿಕೊಳ್ಳುತ್ತಿದ್ದು ಇನ್ನೂ […]

ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ

Saturday, October 26th, 2024
Patla Foundation

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು. ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು. ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಮಾತನಾಡಿ, ಒಂಬತ್ತು ವರ್ಷಗಳಲ್ಲಿ ಯಕ್ಷಗಾನ ಕಲಾವಿದರಿಗೆ ಸುಮಾರು 13 ಕೋಟಿ […]

ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ

Saturday, October 26th, 2024
ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ

ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು ಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಜಯರಾಮ ಆಚಾರ್ಯ ಅತ್ಯಂತ ಸೂಕ್ಷ್ಮ ಪ್ರಜ್ಞೆಯ ಪಾಂಡಿತ್ಯಪೂರ್ಣ ಕಲಾವಿದರಾಗಿದ್ದರು,ಹಿರಿಯ ಪರಂಪರೆಯ […]