ನಂತೂರು ಜಂಕ್ಷನ್‌ ರಸ್ತೆಯಲ್ಲಿ ಗುಂಡಿಗಳನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ದುರಸ್ತಿ ಮಾಡುವ ದೃಶ್ಯ

Friday, September 22nd, 2023
Nanthoor-Junction

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಜಂಕ್ಷನ್‌ನಲ್ಲಿ ರಸ್ತೆ ಗುಂಡಿಗಳನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಕಾಂಕ್ರಿಟ್ ಹಾಕಿ ಮುಚ್ಚಿದ್ದಾರೆ. ರಸ್ತೆ ಗುಂಡಿಗಳಿಂದಾಗಿ ಜಂಕ್ಷನ್ ನಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ಅಲ್ಲದೇ ಟ್ರಾಫಿಕ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದು, ಪೊಲೀಸ್ ಸಿಬ್ಬಂದಿಯ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇಲ್ಲಿನ ದುರವಸ್ಥೆಯನ್ನು ಕಂಡು ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಷ್ ಪ್ರೆಸ್ : ರೈಲ್ವೆ ಸಚಿವರ ಭರವಸೆ

Friday, September 22nd, 2023
Railway-Minister

ಮಂಗಳೂರು : ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಭರವಸೆಯನ್ನು ನೀಡಿದ್ದಾರೆ. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ […]

ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ, ಸಿ.ಸಿ.ಕ್ಯಾಮರಾದಲ್ಲಿ ಸೆರೆ

Thursday, September 21st, 2023
ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ, ಸಿ.ಸಿ.ಕ್ಯಾಮರಾದಲ್ಲಿ ಸೆರೆ

ಬಂಟ್ವಾಳ : ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ರೋಗಿಗಳ ಮೊಬೈಲ್ ಕಳ್ಳತನ ಮಾಡಿದ ಆರೋಪಿಯ ಚಹರೆ ಗಮ‌ನಿಸಿದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಫೋಟೋ ಅಂಟಿಸಲಾಗಿದೆ. ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ಹಾಗೂ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೋರ್ವರಲ್ಲಿ “ಒಮ್ಮೆ ಫೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಫೋನ್ ಮಾಡಲು ಇದೆ” ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ನೊಂದಿಗೆ […]

ಬಂಟ್ಸ್ ಹಾಸ್ಟೇಲ್: ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ

Thursday, September 21st, 2023
Bunts hostel Ganapathy

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ‌ ನಗರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಕಡೆಂಜ ಅಶೋಕ್ ಕುಮಾರ್ ಚೌಟ ಚಾಲನೆ ನೀಡಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದ.ಕ. ಜಿಲ್ಲಾ ಸಂಚಾಲಕ […]

ಮಂಗಳೂರು ವಿವಿಯಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Thursday, September 21st, 2023
mangalore-university

ಮಂಗಳೂರು : ಯಾವುದೇ ಸಂಶೋಧನೆಯ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣಬೇಕಾದರೆ ಆ ಸಂಶೋಧನಾ ಕಾರ್ಯದ ಹಿಂದೆ‌ ನಮ್ಮ ತಾಳ್ಮೆ, ಉತ್ಸಾಹ, ಕಠಿಣ ಪರಿಶ್ರಮ ಪ್ರಮುಖ ಪಾತ್ರವಹಿಸುತ್ತದೆ. ವಿಜ್ಞಾನ ಹಾಗೂ ಇಂದಿನ‌ ಆಧುನಿಕ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ‌ ಯುವ ಸಮುದಾಯ ಹೆಚ್ಷೆಚ್ಷು ತೊಡಗಿಸಿಕೊಂಡು ಹೊಸ ಹೊಸ ಆವಿಷ್ಕಾರದೊಂದಿಗೆ ಸಮಾಜಕ್ಕೆ‌ ತಮ್ಮದೇ ಆದ ಕೊಡುಗೆ‌ ನೀಡಬೇಕಿದೆ, ಎಂದು ಐಐಟಿಎಂ ಚೆನ್ನೈ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ಎ.ಎಸ್.ರಾಮಚಂದ್ರರಾವ್ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆಯಲಿರುವ ‘ಭೌತಶಾಸ್ತ್ರ ಮತ್ತು ನ್ಯಾನೋತಂತ್ರಜ್ಞಾನ’ […]

ಅಂಬರ ಮರ್ಲೆರ್ ತುಳು ಹಾಸ್ಯ ಧಾರಾವಾಹಿ ಸೆಪ್ಟಂಬರ್ 24 ರಿಂದ ಚಂದನ ವಾಹಿನಿಯಲ್ಲಿ ಪ್ರಸಾರ

Thursday, September 21st, 2023
ambara-marler

ಮಂಗಳೂರು : ನಮ್ಮ ಅರ್ನ ಕ್ರಿಯೇಷನ್ಸ್ ಸಂಸ್ಥೆಯು ಸಿದ್ದಪಡಿಸಿದ “ಅಂಬರ ಮರ್ಲೆರ್” ಎನ್ನುವ ಹೊಸ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯ 24 ಕಂತುಗಳಲ್ಲಿ ದೂರದರ್ಶನದ ಚಂದನ ವಾಹಿನಿಯ ಪ್ರತಿ ಭಾನುವಾರ ಮಧ್ಯಾಹ್ನ ಸಮಯ 1.30 ರಿಂದ 2.00 ಗಂಟೆಯವರೆಗೆ ಪ್ರಸಾರ ವಾಗಲಿದೆ. ಧಾರವಾಹಿಯ ಚಿತ್ರೀಕರಣ ಪುತ್ತೂರು, ಮಂಗಳೂರು, ಹಾಗೂ ಕೇರಳ ರಾಜ್ಯದ ಕೆಲವು ಭಾಗಗಳಲ್ಲಿ ನಡೆದಿದ್ದು ಈ ಧಾರಾವಾಹಿಯಲ್ಲಿ ತುಳು ಹಾಗೂ ಕನ್ನಡ ಚಿತ್ರರಂಗದ, ರಂಗಭೂಮಿಯ ಹೆಸರಾಂತ ಹಾಸ್ಯ ಕಲಾವಿದರು ಪಾತ್ರ ನಿರ್ವಹಿಸಿದ್ದಾರೆ. ಮಜಾ ಟಾಕೀಸ್ ನ […]

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

Thursday, September 21st, 2023
ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ […]

ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೃದಯಾಘಾತದಿಂದ ನಿಧನ

Thursday, September 21st, 2023
ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೃದಯಾಘಾತದಿಂದ ನಿಧನ

ಸಿದ್ದಾಪುರ : ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅದ್ಭುತ ಕಂಠಸಿರಿಯ ಯಕ್ಷಗಾನ ಭಾಗವತರೂ, ಕೃತಿ ರಚನಾಕಾರರೂ ಆಗಿದ್ದ ಅವರು ಹಲವು ಮೇಳಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸಾಲಿಗ್ರಾಮ ಮೇಳ, ಸಿಗಂದೂರು ಮೇಳ ಹಾಗೂ ವಿವಿಧ ಬಯಲಾಟ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಅಪಾರ ಬಂಧುಗಳು, ಅಭಿಮಾನಿಗಳು ಇದ್ದಾರೆ.

“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

Wednesday, September 20th, 2023
"ಯಾನ್ ಸೂಪರ್ ಸ್ಟಾರ್" ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ” ಎಂದು ರಾಮ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು, “ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ. ನಾನೆಲ್ಲಿ ಹೋದರೂ […]

ಮಂಗಳೂರು ಕದ್ರಿ ಗಣೇಶೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ನೃತ್ಯ ವೈವಿಧ್ಯ

Wednesday, September 20th, 2023
ಮಂಗಳೂರು ಕದ್ರಿ ಗಣೇಶೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ನೃತ್ಯ ವೈವಿಧ್ಯ

ಮಂಗಳೂರು: ಕದರಿಕಾ ಚಾರಿಟೇಬಲ್ ಟ್ರಸ್ಟ್( ರಿ) ಹಾಗೂ ಕದ್ರಿ ಕ್ರಿಕೆಟರ್ಸ್( ರಿ) ಆಶ್ರಯದಲ್ಲಿ ಮಂಗಳೂರು ಕದ್ರಿ ಮೈದಾನ ದಲ್ಲಿ ನಡೆದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಮಂಗಳವಾರ ರಾತ್ರಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನೃತ್ಯ ವೈವಿಧ್ಯ ಹಾಗೂ ಜಿಲ್ಲೆಯ ಸುಪ್ರಸಿದ್ಧ ಸಂಗೀತ ಕಲಾವಿದರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರಗಿತು . ಈ ಸಂದರ್ಭದಲ್ಲಿ ಕದರಿಕಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕದ್ರಿ ಕ್ರಿಕೆಟರ್ಸ್ ನಾ ಸರ್ವ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು […]