ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಶಿಲಾನ್ಯಾಸ, ಪುತ್ತೂರಿನ ಕಾಂಗ್ರೆಸ್ ಶಾಸಕರು ಭಾಗಿ

Wednesday, October 23rd, 2024
Putturu-VHP

ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆದಿದ್ದು, ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದರು. ಪುತ್ತೂರಿನ ವಿಹಿಂಪ ನಿವೇಶನದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಅಶೋಕ್ ರೈಯವರನ್ನು ಸಂಘಟಕರು ಶಾಲು ಹೊದಿಸಿ ಗೌರವಿಸಿದರು. ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕ ಶಕುಂತಳಾ ಶೆಟ್ಟಿಯವರು ಕಾಂಗ್ರೆಸ್ ಪಕ್ಷ ಸೇರಿ ಶಾಸಕರಾಗುವ ಮೊದಲು ಬಿಜೆಪಿಯಲ್ಲಿದ್ದರು. […]

ಅಕ್ಟೊಬರ್ 24, ವಿಧಾನಪರಿಷತ್ ಚುನಾವಣೆ ಮತಗಳ ಎಣಿಕೆ : ಫಲಿತಾಂಶ ವಿಳಂಭ ಸಾಧ್ಯತೆ

Wednesday, October 23rd, 2024
vote box

ಮಂಗಳೂರು : ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದೆ. ನಗರದ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ […]

ಮಂಗಳೂರು ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಕ್ಯಾ. ಚೌಟ ಮನವಿ

Wednesday, October 23rd, 2024
Brijesh-Chowta

ಮಂಗಳೂರು: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ […]

ಸವಿತಾ ಸಮಾಜದವರು ಅಮಂಗಲ ಎನ್ನುವುದು ಅನುಚಿತ ಮತ್ತು ಶುದ್ಧ ಅಸಂಗತ: ಶೃಂಗೇರಿ ಪೀಠಾಧೀಶ

Wednesday, October 23rd, 2024
sringeri-swamiji

ಬೆಂಗಳೂರು : ಸವಿತಾ ಸಮಾಜದವರು ಅಮಂಗಲ, ಅವರನ್ನು ನೋಡುವುದು ದುರದೃಷ್ಟ ಎಂಬ ಸಮಾಜದ ಮಾತುಗಳು ಅನುಚಿತ ಮತ್ತು ಶುದ್ಧ ಅಸಂಗತವಾದದ್ದು. ಮಂಗಳಕಾರ್ಯಗಳಲ್ಲಿ ಮಂಗಳವಾದ್ಯ ನುಡಿಸುವವರನ್ನ ನೋಡಿದರೆ ಎಲ್ಲಾ ಮಂಗಳವಾಗುತ್ತದೆ. ಪ್ರತಿಯೊಬ್ಬರೂ ಎಲ್ಲಾ ಸಮಾಜದವರನ್ನು ಗೌರವದಿಂದ ಕಾಣಬೇಕು ಎಂದು ಶೃಂಗೇರಿ ಶಾರದಾ ಮಠದ ಪೀಠಾಧೀಶರಾದ ವಿಧುರಶೇಖರಭಾರತಿ ಸ್ವಾಮೀಜಿ ಕರೆ ನೀಡಿದರು . ನಗರದ ಚಾಮರಾಜಪೇಟೆಯ ಶಂಕರಪುರದ ಶೃಂಗೇರಿ ಮಠದಲ್ಲಿ ಕೆ.ಆರ್. ನಗರದ ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠಾಧೀಶರಾದ ಶಂಕರಭಾರತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ, ಶೃಂಗೇರಿ ಸ್ವಾಮೀಜಿಯವರು ಇತಿಹಾಸದಲ್ಲಿ ಮೊದಲ […]

ಉಡುಪಿ : ಕಂಠಪೂರ್ತಿ ಕುಡಿದು ಸ್ನೇಹಿತನ ಕತ್ತು ಸೀಳಿ ಕೊಲೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Tuesday, October 22nd, 2024
Udupi-murder

ಉಡುಪಿ : ತನ್ನ ಸ್ನೇಹಿತನನ್ನೇ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ಕತ್ತು ಸೀಳಿ ಭೀಕರವಾಗಿ ಕೊಲೆಗೈದಿರುವ ಘಟನೆ ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ […]

ಸಂಘ ಪರಿವಾರ ದ ಸಕ್ರಿಯ ಕಾರ್ಯಕರ್ತ ರತೀಶ್ ಶೆಟ್ಟಿ ಪಾವಳ ನಿಧನ

Tuesday, October 22nd, 2024
Rathish-Shetty pavula

ವರ್ಕಾಡಿ: ಸಂಘ ಪರಿವಾರ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ, ಭಾರತೀಯ ಜನತಾಪಕ್ಷ ದಲ್ಲಿ ಸಕ್ರಿಯರಾಗಿದ್ದ ರತೀಶ್ ಶೆಟ್ಟಿ ಪಾವಳ (36) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಪಾವಳ ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ರಘುನಾಥ ಶೆಟ್ಟಿ – ವಿಜಯಲಕ್ಷ್ಮಿ ದಂಪತಿಯ ಪುತ್ರ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ರತೀಶ್ ಶೆಟ್ಟಿ ಕಳೆದೆರಡು ದಿನಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ರಾತ್ರಿ ನಿಧಾನರಾದರು. ಮೃತರು ತಂದೆ – ತಾಯಿ, ಹಾಗೂ ಸಹೋದರಿ ರಮ್ಯಾ ಭಂಡಾರಿ, […]

ಬೆಂಗಳೂರು ಕಂಬಳವನ್ನು ನಿಲ್ಲಿಸುವಂತೆ ಹೈಕೋರ್ಟ್ ಮೊರೆ ಹೋದ ಪ್ರಾಣಿ ದಯಾ ಸಂಘ

Monday, October 21st, 2024
peta

ಮಂಗಳೂರು : ಬೆಂಗಳೂರಿನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಲಾಗಿರುವ ಬೆಂಗಳೂರು ಕಂಬಳವನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ ಎಂದು ಪೇಟಾ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ತುರ್ತು ವಿಚಾರಣೆಗೆ ಪರಿಗಣಿಸುವಂತೆ ಸೋಮವಾರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠಕ್ಕೆ ಮನವಿ ಮಾಡಿದ್ದಾರೆ. ರಾಜ್ಯದ […]

ರೈಲ್ವೆ ಹಳಿ ಮೇಲೆ ಕಲ್ಲು : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

Monday, October 21st, 2024
Brijesh-Ullal-Rail

ಮಂಗಳೂರು: ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ […]

ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Monday, October 21st, 2024
jayarama-acharya

ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರಿಗೆ ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆಗೆ ಸ್ಪಂಧಿಸದೆ ನಿಧನ ಹೊಂದಿದ್ದಾರೆ. 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ, […]

ಯುವಸಿರಿ, ರೈತ ಭಾರತದ ಐಸಿರಿ: ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Sunday, October 20th, 2024
Nati

ಉಜಿರೆ: ಪ್ರಕೃತಿಗೂ, ಕೃಷಿಗೂ ಅವಿನಾಭಾವ ಸಂಬಂಧವಿದ್ದು ಕೃಷಿ ನಮ್ಮ ಭವ್ಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಉಜಿರೆಯ ಸೋನಿಯಾ ಯಶೋವರ್ಮ ಹೇಳಿದರು. ಅವರು ಭಾನುವಾರ ಬೆಳಾಲು ಗ್ರಾಮದ ಅನಂತೋಡಿಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿಕ್ಲಬ್, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ, ತಾಲ್ಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇಜಿನಾಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅನ್ನದಾನಕ್ಕಿಂತ ಮಿಗಿಲಾದ ದಾನವಿಲ್ಲ. ಆಹಾರದ ಪೋಲು ಹಾಗೂ […]