ನೀವು ನಕ್ಕಾಗ ಹೊಳೆಯುವ ದಂತಪಂಕ್ತಿಗಳು ನಿಮ್ಮ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತವೆ. ಸುಂದರ ನಗುವಿಗೆ ಕಾರಣವಾಗುತ್ತದೆ. ಕ್ಷಮಿಸಿ, ಇದು ಯಾವುದೇ ಟೂಥ್ ಪೇಸ್ಟ್ ಜಾಹೀರಾತಲ್ಲ. ಮಾರುಕಟ್ಟೆಯಲ್ಲಿಂದು ಸಾವಿರಾರು ಕೃತಕ ಡೆಂಟಲ್ ಕೇರ್ ಉತ್ಪನ್ನಗಳು ಬರುತ್ತಿವೆ. ಆದರೆ ನಾವು ಹೇಳಹೊರಟದ್ದು ನೀವು ಮನೆಯಲ್ಲಿಯೇ ಮಾಡಬಹುದಾದ ನೈಸರ್ಗಿಕ ಡೆಂಟಲ್ ಕೇರ್ ಬಗ್ಗೆ. ಹಲ್ಲು, ಒಸಡು, ಬಾಯಿಯ ಆರೈಕೆಗೆ ಇದಕ್ಕಿಂತ ಬೆಸ್ಟ್ ಉಪಾಯ ಯಾವುದಿದೆ? ಚಂದದ ನಗುವಿಗೆ ಇಲ್ಲಿದೆ ಟಿಪ್ಸ್ 1. ಲವಂಗ : ನಿಮ್ಮ ಬಾಯಿಯಲ್ಲಿರುವ ಬ್ಯಾಕ್ಟಿರಿಯಾ ಹೊಡೆದೊಡಿಸಿ ಹಲ್ಲನ್ನು […]
ಮಂಗಳೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ನಗರದ ಪುರಭವನದಲ್ಲಿ ಮಂಗಳವಾರ ದರ್ಜಿಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ಹಾಗೂ ಟೈಲರ್ಗಳ ಪಿಂಚಣಿ ಕಾರ್ಡು ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಸಮಾವೇಶವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಹೊಸ ಪಿಂಚಣಿ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರಕಾರವು ಈಗ ನೀಡುತ್ತಿರುವ ಸಹಾಯಧನವನ್ನು ಮುಂದಿನ 10 ವರ್ಷಗಳಿಗೆ ವಿಸ್ತರಿಸಬೇಕು ಎನ್ನುವ ಸಂಘಟನೆ ಬೇಡಿಕೆಗೆ […]
ಮಂಗಳೂರು: ಪಣಂಬೂರು ಸಮೀಪ ಸಂಭವಿಸಿದ ದೋಣಿ ದುರಂತದಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಸರಕಾರದ ವತಿಯಿಂದ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ. ಶನಿವಾರ ಹಳೆ ಬಂದರು ವಿನುಗಾರಿಕಾ ದಕ್ಕೆಯಲ್ಲಿ ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ತಲಾ 1 ಲ.ರೂ. ಹಾಗೂ ಗಾಯಾಳುಗಳಿಗೆ ತಲಾ 25,000 ರೂ. ಪರಿಹಾರ ನೀಡಲಿದೆ. ಈಗಾಗಲೇ ದೋಣಿ ದುರಂತದ ವಿವರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ಪರಿಹಾರ ನೀಡಲು ಅವರು ಒಪ್ಪಿಗೆ […]
ಮಂಗಳೂರು: ದ.ಕ. ಜಿಲ್ಲಾ ಪತ್ರಕರ್ತರ ಸಂಘ ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಚಿತ್ರ ನಿರ್ಮಾಪಕ, ರಂಗ ನಿರ್ದೇಶಕ ವಿಜಯುಕಮಾರ್ ಕೊಡಿಯಾಲ್‌ಬೈಲ್ ಮಾತನಾಡಿ ತುಳು ಚಿತ್ರರಂಗದ ಅಳಿವು ಉಳಿವಿನ ಬಗ್ಗೆ ವಿವರಿಸಿದರು. ತುಳು ನಿರ್ಮಾಪಕರು ಸಂಘಟನೆಯೊಂದನ್ನು ರೂಪಿಸುವ ಅಗತ್ಯವಿದ್ದು, ಕಡಿಮೆ ವೆಚ್ಚದಲ್ಲಿ ತುಳು ಚಿತ್ರ ನಿರ್ಮಾಣ ಮಾಡಲು ಸಂಘಟನೆಯ ಮುಲಕ್ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಫಿಲ್ಮ್ ಚೇಂಬರ್‌ಗೆ ನೊಂದಾಯಿತವಾಗುವಂತೆ ತುಳು ಚಿತ್ರರಂಗದ ಸಂಘಟನೆಯೊಂದನ್ನು ರಚಿಸಬೇಕು. ಆ ಮೂಲಕ ಹಲವಾರು ಸವಲತ್ತುಗಳನ್ನು ನಾವು ಪಡೆಯಲು ಸಾಧ್ಯ. […]
ಮಂಗಳೂರು: ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ 6 ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ಅರಬಿ ಸಮುದ್ರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ‘ಓಶಿಯನ್ ಫಿಶರೀಸ್- 2’ ಎಂಬ ಮೀನುಗಾರಿಕಾ ದೋಣಿಯಲ್ಲಿ 8 ದಿನಗಳ ಹಿಂದೆ 7 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಮೀನು ಹಿಡಿದು ಹಿಂದಿರುಗುತ್ತಿದ್ದಾಗ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ದುರ್ಘಟನೆ ಸಂಭವಿಸಿದೆ. ದೋಣಿಯಲ್ಲಿದ್ದ ೭ಜನರ ಪೈಕಿ ದೋಣಿಯ ಚಾಲಕ ಬಳ್ಳಾರಿ ಹೊಸಪೇಟೆಯ ಕಾಂಬ್ಲಿಪುರ ಕಂಟರ್‌ಬಿನ್ನೆಯ ಶ್ರೀಕಾಂತ್, ಕೊಪ್ಪಳದ ನಾರಾಯಣ, ಮಂಗಳೂರು ಪಂಜಿಮೊಗರಿನ […]
ಮಂಗಳೂರು: ಕಾವೂರಿನ ದೀಪಕ್ (25) ಎಂಬಾತ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಳ ಬಳಿಯ ಅಂಗಡಿಯೊಂದರ ಬಳಿ ಕಾಡು ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ವೇಳೆ ಬುಧವಾರ ಮಂಗಳೂರು ಅರಣ್ಯ ಸಂಚಾರಿ ದಳದ ವಿಶೇಷ ಪೊಲೀಸರು ಪತ್ತೆ ಹಚ್ಚಿ ಆತನ ಬಳಿ ಇದ್ದ ಹಸಿರು ಬಣ್ಣದ 13 ಕಾಡು ಗಿಳಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ದೀಪಕ್ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯನ್ವಯ ಕೇಸು ದಾಖಲಿಸಲಾಗಿದೆ. ಈ ಗಿಳಿಗಳನ್ನು ಕಾಸರಗೋಡಿನ ವ್ಯಕ್ತಿಯೊಬ್ಬರು ಪೂರೈಕೆ ಮಾಡಿರುವುದಾಗಿ ಆತ ವಿಚಾರಣೆಯ ವೇಳೆ […]