ಪೆಟ್ರೋಲ್ ದರ ಎತ್ತ ಸಾಗುತ್ತಿದೆ?

Monday, September 26th, 2011
Petrol prize

ಕಳೆದ 2009ರ ಜುಲೈ ತಿಂಗಳಲ್ಲಿ ಪೆಟ್ರೋಲ್ ದರ ನಿಯಂತ್ರಣವನ್ನು ಸರಕಾರವು ತೈಲ ಕಂಪನಿಗಳ ಸುಪರ್ದಿಗೆ ಒಪ್ಪಿಸಿದ ಬಳಿಕ ಎರಡು ವರ್ಷಗಳಲ್ಲಿ 12ನೇ ಬಾರಿ ಪೆಟ್ರೋಲ್ ದರ ಏರಿಸಲಾಗಿದೆ. ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಳಿಕೆಯಾಗುತ್ತಿದೆ, ಅದಕ್ಕೆ ಅನುಸಾರವಾಗಿ ಪ್ರತೀ ಹದಿನೈದು ದಿನಗಳಿಗೊಮ್ಮೆ ಬೆಲೆ ಪರಿಷ್ಕರಿಸಲಾಗುತ್ತದೆ ಎಂದು ಅಂದು ಘೋಷಿಸಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಹಲವಾರು ಬಾರಿ ಏರಿವೆ, ಇಳಿಕೆಯೂ ಆಗಿವೆ. ಆದರೆ ಭಾರತದಲ್ಲಿ ಮಾತ್ರ ಏರುತ್ತಲೇ ಇದೆ! ಜನರನ್ನು ಹೇಗೆ ಮೋಸಪಡಿಸುವುದು ಅಂತ ಇವರನ್ನು ನೋಡಿ […]

ಉಸಿರುಗಟ್ಟಿಸಿ ಬ್ಯಾಂಕ್ ಮ್ಯಾನೇಜರ್ ಕೊಲೆ

Monday, September 26th, 2011
BANK MANAGER

ಬೆಂಗಳೂರು : ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಅವರು ವಾಸವಾಗಿರುವ ಮನೆಯಲ್ಲೇ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಓರಿಯೆಂಟಲ್ ಬ್ಯಾಂಕ್ ನಲ್ಲಿ ಚೀಫ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪಡುಕೋಣೆ ಮೂಲದ ಶಂಕರ್ ಪೂಜಾರಿ (55) ಅವರ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ವೇಳೆಗೆ ಕೊಲೆ ನಡೆದಿರಬಹುದು ಎಂದು ಡೆಪ್ಯುಟಿ ಕಮಿಷನರ್ ಸೋನಿಯಾ ನಾರಂಗ್ ತಿಳಿಸಿದ್ದಾರೆ. ಕೊಲೆಯನ್ನು ಪೂಜಾರಿಗೆ ಬಲ್ಲವರೇ ಮಾಡಿರಬಹುದೆಂದು ಶಂಕಿಸಲಾಗಿದ್ದು. ಹೊರಬಾಗಿಲಿಗೆ ಒಳಗಿನಿಂದ […]

ಉದ್ಯೋಗ ಮೇಳ 88 ಮಂದಿ ಉದ್ದಿಮೆದಾರರು, 1,737 ಮಂದಿ ಉದ್ಯೋಗಾಂಕ್ಷಿಗಳು

Sunday, September 25th, 2011
Job fire

ಮಂಗಳೂರು: ಕೌಶಲ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಡಾ| ಟಿಎಂಎ ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶನಿವಾರ ಆರಂಭಗೊಂಡ 32ನೇ ಬೃಹತ್‌ ಕೌಶಲ ಅಭಿವೃದ್ಧಿ ಮತ್ತು ಉದ್ಯೋಗ ಮೇಳದ ಮೊದಲ ದಿನ 1,737 ಮಂದಿ ಉದ್ಯೋಗಾಂಕ್ಷಿ ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಉದ್ಯೋಗ ಮೇಳದಲ್ಲಿ 88 ಮಂದಿ ಉದ್ದಿಮೆದಾರರು ಭಾಗವಹಿಸಿದ್ದರು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಜೆಒಸಿ, ಐಟಿಐ, ಡಿಪ್ಲೊಮಾ, ಪದವಿ, ಅಂಗವಿಕಲ ಅಭ್ಯರ್ಥಿಗಳಲ್ಲಿ ಒಟ್ಟು […]

Mega Media News LIVE Streaming

Friday, September 23rd, 2011
Mega Media News LIVE Streaming

Live on Youtube                                             Live on Facebook

Suvarna News Live

Friday, September 23rd, 2011

Please Wait video is Loading……………………….

NDTV Live

Friday, September 23rd, 2011

Please Wait video is Loading……………………….

ಹಲ್ಲುಗಳ ಆರೋಗ್ಯ ಕಾಪಾಡಲು ಆರು ಟಿಪ್ಸ್

Wednesday, September 21st, 2011
Teeth

ನೀವು ನಕ್ಕಾಗ ಹೊಳೆಯುವ ದಂತಪಂಕ್ತಿಗಳು ನಿಮ್ಮ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತವೆ. ಸುಂದರ ನಗುವಿಗೆ ಕಾರಣವಾಗುತ್ತದೆ. ಕ್ಷಮಿಸಿ, ಇದು ಯಾವುದೇ ಟೂಥ್ ಪೇಸ್ಟ್ ಜಾಹೀರಾತಲ್ಲ. ಮಾರುಕಟ್ಟೆಯಲ್ಲಿಂದು ಸಾವಿರಾರು ಕೃತಕ ಡೆಂಟಲ್ ಕೇರ್ ಉತ್ಪನ್ನಗಳು ಬರುತ್ತಿವೆ. ಆದರೆ ನಾವು ಹೇಳಹೊರಟದ್ದು ನೀವು ಮನೆಯಲ್ಲಿಯೇ ಮಾಡಬಹುದಾದ ನೈಸರ್ಗಿಕ ಡೆಂಟಲ್ ಕೇರ್ ಬಗ್ಗೆ. ಹಲ್ಲು, ಒಸಡು, ಬಾಯಿಯ ಆರೈಕೆಗೆ ಇದಕ್ಕಿಂತ ಬೆಸ್ಟ್ ಉಪಾಯ ಯಾವುದಿದೆ? ಚಂದದ ನಗುವಿಗೆ ಇಲ್ಲಿದೆ ಟಿಪ್ಸ್ 1. ಲವಂಗ : ನಿಮ್ಮ ಬಾಯಿಯಲ್ಲಿರುವ ಬ್ಯಾಕ್ಟಿರಿಯಾ ಹೊಡೆದೊಡಿಸಿ ಹಲ್ಲನ್ನು […]

ಪುರಭವನದಲ್ಲಿ ದರ್ಜಿಗಳ ಜಿಲ್ಲಾ ಮಟ್ಟದ ಬೃಹತ್‌ ಸಮಾವೇಶ ಹಾಗೂ ಪಿಂಚಣಿ ಕಾರ್ಡು ವಿತರಣೆ

Wednesday, September 21st, 2011
Tailors Convention

ಮಂಗಳೂರು: ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಶನ್‌ ವತಿಯಿಂದ ನಗರದ ಪುರಭವನದಲ್ಲಿ ಮಂಗಳವಾರ ದರ್ಜಿಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್‌ ಸಮಾವೇಶ ಹಾಗೂ ಟೈಲರ್ಗಳ ಪಿಂಚಣಿ ಕಾರ್ಡು ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್‌ ಅವರು ಸಮಾವೇಶವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಹೊಸ ಪಿಂಚಣಿ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರಕಾರವು ಈಗ ನೀಡುತ್ತಿರುವ ಸಹಾಯಧನವನ್ನು ಮುಂದಿನ 10 ವರ್ಷಗಳಿಗೆ ವಿಸ್ತರಿಸಬೇಕು ಎನ್ನುವ ಸಂಘಟನೆ ಬೇಡಿಕೆಗೆ […]

ದೋಣಿ ದುರಂತ: ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 1 ಲ.ರೂ ಪರಿಹಾರ

Sunday, September 18th, 2011
Palemar

ಮಂಗಳೂರು: ಪಣಂಬೂರು ಸಮೀಪ ಸಂಭವಿಸಿದ ದೋಣಿ ದುರಂತದಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಸರಕಾರದ ವತಿಯಿಂದ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ತಿಳಿಸಿದ್ದಾರೆ. ಶನಿವಾರ ಹಳೆ ಬಂದರು ವಿನುಗಾರಿಕಾ ದಕ್ಕೆಯಲ್ಲಿ ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ತಲಾ 1 ಲ.ರೂ. ಹಾಗೂ ಗಾಯಾಳುಗಳಿಗೆ ತಲಾ 25,000 ರೂ. ಪರಿಹಾರ ನೀಡಲಿದೆ. ಈಗಾಗಲೇ ದೋಣಿ ದುರಂತದ ವಿವರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ಪರಿಹಾರ ನೀಡಲು ಅವರು ಒಪ್ಪಿಗೆ […]

ತುಳು ಚಿತ್ರ ನಿರ್ಮಾಪಕ ವಿಜಯುಕಮಾರ್‌ ಕೊಡಿಯಾಲ್‌ಬೈಲ್‌ ಜೊತೆ ಪತ್ರಿಕಾ ಸಂವಾದ

Friday, September 16th, 2011
Asal Film

ಮಂಗಳೂರು: ದ.ಕ. ಜಿಲ್ಲಾ ಪತ್ರಕರ್ತರ ಸಂಘ ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಚಿತ್ರ ನಿರ್ಮಾಪಕ, ರಂಗ ನಿರ್ದೇಶಕ ವಿಜಯುಕಮಾರ್‌ ಕೊಡಿಯಾಲ್‌ಬೈಲ್‌ ಮಾತನಾಡಿ ತುಳು ಚಿತ್ರರಂಗದ ಅಳಿವು ಉಳಿವಿನ ಬಗ್ಗೆ ವಿವರಿಸಿದರು. ತುಳು ನಿರ್ಮಾಪಕರು ಸಂಘಟನೆಯೊಂದನ್ನು ರೂಪಿಸುವ ಅಗತ್ಯವಿದ್ದು, ಕಡಿಮೆ ವೆಚ್ಚದಲ್ಲಿ ತುಳು ಚಿತ್ರ ನಿರ್ಮಾಣ ಮಾಡಲು ಸಂಘಟನೆಯ ಮುಲಕ್ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಫಿಲ್ಮ್ ಚೇಂಬರ್‌ಗೆ ನೊಂದಾಯಿತವಾಗುವಂತೆ ತುಳು ಚಿತ್ರರಂಗದ ಸಂಘಟನೆಯೊಂದನ್ನು ರಚಿಸಬೇಕು. ಆ ಮೂಲಕ ಹಲವಾರು ಸವಲತ್ತುಗಳನ್ನು ನಾವು ಪಡೆಯಲು ಸಾಧ್ಯ. […]