ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

Wednesday, September 15th, 2021
ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದ್ದು, ಅಂದಾಜು ರೂಪಾಯಿ 34.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿರುವ ಈ ಕಾಮಗಾರಿಗೆ ಅನುಮೋದನೆ ನೀಡಿದ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು […]

ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ

Sunday, September 12th, 2021
Angara

ಪುತ್ತೂರು  : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಆಯಾಯ ತಾಲೂಕುಗಳಲ್ಲೇ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಮತ್ತು ಜಲಸಾರಿಗೆ ಸಚಿವ ಎಸ್.ಅಂಗಾರ ಮಾಹಿತಿ ನೀಡಿದರು. ಪುತ್ತೂರಿನಲ್ಲಿ ನಡೆದ ಕೊರಗ ಸಮುದಾಯದ ಮುಖಂಡರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಈ ಮಾಹಿತಿ ನೀಡಿದರು. ಕೊರಗ ಸಮುದಾಯಗಳು ಜಮೀನು ಹಕ್ಕು ಪತ್ರ, […]

ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ

Saturday, September 11th, 2021
R ashoka

ಬೆಂಗಳೂರು  : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು […]

ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಬಂದಿಲ್ಲ, ಬಲಿಷ್ಟ ಭಾರತದ ನಿರ್ಮಾಣಕ್ಕಾಗಿಯೇ ಬಿಜೆಪಿ : ಶಾಸಕ ರಾಜೇಶ್ ನಾಯ್ಕ್

Thursday, September 9th, 2021
Rajesh Naik

ಬಂಟ್ವಾಳ  : ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ, ಭಾರತೀಯ ಜೀವನ ಮೌಲ್ಯವನ್ನು , ಸಾರ್ವಭೌಮತ್ವ ವನ್ನು , ರಾಷ್ಟ್ರೀಯ ವಿಚಾರಗಳನ್ನು ಉಳಿಸುವ ಬೆಳೆಸುವ ಮೂಲಕ ಬಲಿಷ್ಟ ಭಾರತದ ನಿರ್ಮಾಣ ಕಾರ್ಯ ವೇ ಬಿಜೆಪಿ ಪಕ್ಷದ ತತ್ವವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ನೆಟ್ಲಮುಡ್ನೂರು ಗ್ರಾ.ಪಂ.ವ್ಯಾಪ್ತಿಯ 2 ಬೂತ್ ಗಳ ಅಧ್ಯಕ್ಷ ರುಗಳ ಮನೆಗೆ ಬೇಟಿ ನೀಡಿ ನಾಮಫಲಕ ಅನಾವರಣ ಮಾಡಿದ 6 ನೇ ದಿನದ ಕಾರ್ಯಕ್ರಮ ದಲ್ಲಿ ಅವರು […]

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದ ನೀರಜ್ ಚೋಪ್ರಾ

Saturday, August 7th, 2021
neeraj Chopra

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಡೆದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಹೆಮ್ಮೆಯ ಅಥ್ಲೀಟ್ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಒಲಿಂಪಿಕ್ಸ್ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಹಿರಿಮೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ಹಾಗೆಯೇ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಬಳಿಕ ಒಲಿಂಪಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ತಮ್ಮ ಎರಡನೇ ಯತ್ನದಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದ […]

ಕುಸ್ತಿ ಫೈನಲ್‌ನಲ್ಲಿ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾಗೆ ಬೆಳ್ಳಿ ಪದಕ

Thursday, August 5th, 2021
Ravi Kumar

ಟೋಕಿಯೊ:  ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಕುಸ್ತಿ ಫೈನಲ್‌ನಲ್ಲಿ ಭಾರತದ ಯುವ ಕುಸ್ತಿಪಟು ರವಿಕುಮಾರ್ ದಹಿಯಾ ಅವರು ಎರಡು ಬಾರಿಯ ವಿಶ್ವ ಚಾಂಪಿಯನ್ ರಶ್ಯದ ಝಾವೂರ್ ಉಗೆವ್ ವಿರುದ್ಧ 4-7 ಅಂತರದಿಂದ ಸೋತಿದ್ದಾರೆ. ಈ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ. ರವಿ ಕುಮಾರ್ ಒಲಿಂಪಿಕ್ಸ್ ನಲ್ಲಿ ಕುಸ್ತಿ […]

ರವಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಹೆಚ್ಚು 410 ಕೊರೊನಾ ಸೋಂಕು ಪತ್ತೆ, 6 ಮಂದಿ ಸಾವು, ಉಡುಪಿ ಜಿಲ್ಲೆ 162

Sunday, August 1st, 2021
corona virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ರವಿವಾರ ಪತ್ತೆಯಾದ ಕೇಸುಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆಯಲ್ಲಿ ಅತಿಹೆಚ್ಚು (410) ಪಾಸಿಟಿವ್ ಪ್ರಕರಣ ವರದಿಯಾಗಿವೆ. ದ.ಕ. ಜಿಲ್ಲೆಯಲ್ಲಿ ರವಿವಾರ 410 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದೇ ವೇಳೆ 6 ಮಂದಿ ಸಾವನ್ನಪ್ಪಿದ್ದು, 264 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,943 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,00,780 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1,430 ಮಂದಿ ಸಾವನ್ನಪ್ಪಿದ್ದಾರೆ. 96,407 ಮಂದಿ ಗುಣಮುಖ ರಾಗಿದ್ದಾರೆ. ಒಟ್ಟು […]

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಲ್ಲಿದೆ ನೋಡಿ

Friday, July 30th, 2021
cbse-result

ಬೆಂಗಳೂರು  : ಸರಕಾರ  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಿದೆ. ಜುಲೈ 30ರಂದು ಮಧ್ಯಾಹ್ನ ಪ್ರಕಟಗೊಂಡಿರುವ CBSE 12ನೇ ತರಗತಿ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ ನೋಡಬಹುದು. ಅಲ್ಲದೇ ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶ ಪಡೆಯಬಹುದು. 2021ರ […]

ಅಲೆತ್ತೂರು: ಹಡಿಲು ಗದ್ದೆಗೆ ಕಾಯಕಲ್ಪ ನೇಜಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ರೈ ಚಾಲನೆ

Wednesday, July 21st, 2021
Ramanatha-Rai

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜ್ಯೋತಿ ಸಂಘದ ವತಿಯಿಂದ ಅಲೆತ್ತೂರು ಲೋಕೇಶ್ ಸುವರ್ಣ ಇವರ ಹಡಿಲು ಗದ್ದೆಯಲ್ಲಿ ನೇಜಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಬುಧವಾರ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಶಾಂತ ಕುಲಾಲ್, ಕಾಮರ್ಿಕ ಘಟಕ ಅಧ್ಯಕ್ಷ […]

ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ ನಿಧನ, ಗಣ್ಯರ ಶೋಕ

Saturday, July 17th, 2021
G Made gowda

ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ ಶನಿವಾರ ಭಾರತೀನಗರದ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಿ.ಮಾದೇಗೌಡರು 94 ವರ್ಷ ವಯಸ್ಸಾಗಿತ್ತು,  ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ಬಂದರು. 1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು. 1980–83ರವರೆಗೆ […]