‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಕೊರೋನಾ ಸೋಂಕಿನಿಂದ ನಿಧನ

Sunday, April 18th, 2021
MA Hegde

ಶಿರಸಿ : ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ (74) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಏಪ್ರಿಲ್ 13 ರಂದು ಕೊರೋನಾ ಸೋಂಕು ತಗುಲಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಎಂ.ಎ.ಹೆಗಡೆ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಎಂ.ಎ.ಹೆಗಡೆ ಅವರು ಸಿದ್ದಾಪುರ ತಾಲೂಕಿನ ಜೋಗಿಮನೆಯವರಾಗಿದ್ದು 1948ರಲ್ಲಿ ಜನಿಸಿದರು. ಇಲ್ಲಿನ ಹೆಗ್ಗರಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಹೆಗಡೆ ಅವರು ಶಿರಸಿಯಲ್ಲಿ ಪದವಿ ಪಡೆದು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬಳಿಕ ಪ್ರಾಧ್ಯಾಪಕರಾಗಿಯೂ ಅವರು ಕಾರ್ಯನಿರ್ವಹಿಸಿದರು. ಯಕ್ಷಗಾನ ಅವರ ಹವ್ಯಾಸವಾಗಿದ್ದು […]

ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ

Saturday, March 20th, 2021
Amzad

ಚಿಕ್ಕಬಳ್ಳಾಪುರ:  ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಶನಿವಾರ ನಡೆದಿದೆ. ಕೊಲೆಯಾದ ಕಾಂಗ್ರೆಸ್ ಮುಖಂಡ ಅಮಜದ್ (43) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಅಮಜದ್ ನನ್ನು ಒಮ್ನಿ ಕಾರಿನ ಮೂಲಕ ಹಿಂಬಾಲಿಸಿ ಬಂದ ಅಪರಿಚಿತರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಅಮಜದ್ ಮಿನಲ್ ಹಿನ್ನೆಲೆ ಹೊಂದಿದ್ದವನಾಗಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡನಾಗಿದ್ದ. ಶಿಡ್ಲಘಟ್ಟ ನಗರ ಪೊಲೀಸರು ಮೃತದೇಹವನ್ನ ಶವಾಗಾರಕ್ಕೆ ರವಾನಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೊಲೆಯ ಉದ್ದೇಶ ತಿಳಿದುಬಂದಿಲ್ಲ. ಹಾಡಹಗಲೇ […]

ತವರಿನಿಂದ ಹಣ ಹಾಗೂ ಬೈಕ್‍ ಕೊಡಿಸುವಂತೆ ಪೀಡಿಸುತ್ತಿದ್ದ ಪತಿ, ಮದ್ವೆಯಾಗಿ 8 ತಿಂಗಳಲ್ಲೇ ಪತ್ನಿಆತ್ಮಹತ್ಯೆ

Friday, March 19th, 2021
Hajira

ದಾವಣಗೆರೆ : ವ್ಯಾಪಾರ ಮಾಡಲು ತವರಿನಿಂದ ಹಣ ತರಲು ಪೀಡಿಸುತ್ತಿದ್ದ ಪತಿಯ ಕಾಟ ತಾಳಲಾರದೆ  ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಬಂಬೂ ಬಜಾರ್ ನ ಮನೆಯೊಂದರಲ್ಲಿ ನಡೆದಿದೆ. ಬಿಬೀ ಅಜೀರಾ (19) ಆತ್ಮಹತ್ಯೆಗೀಡಾದ ಗೃಹಿಣಿ. ಈಕೆ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಿಬೀ ಅಜಿರಾ-ಇಮ್ರಾನ್ ಮದುವೆಯಾಗಿ 8 ತಿಂಗಳಷ್ಟೆ ಕಳೆದಿತ್ತು. ಅಜಿರಾ ಕುಟುಂಬಸ್ಥರು 1ಲಕ್ಷ ರೂ ನಗದು, 3 ತೊಲೆ ಚಿನ್ನಾಭರಣ ಕೊಟ್ಟು ಮದುವೆ ಮಾಡಿ ಕೊಟ್ಟಿದ್ದರು. ಆದರೆ ಇತ್ತೀಚಿಗೆ ಪತಿ ಹಾಗೂ […]

ಕಾಲೇಜಿಗೆ ಹೋಗು ಎಂದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ

Thursday, March 18th, 2021
Divya

ಚಾಮರಾಜನಗರ: ಲಾಕ್‍ಡೌನ್ ಬಳಿಕ ಮನೆಯಲ್ಲೇ ಇದ್ದ ಮಗಳನ್ನು ಕಾಲೇಜಿಗೆ ಹೋಗು ಎಂದು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19) ಮೃತ ದುರ್ದೈವಿ. ಈಕೆ ಕಳೆದ ವರ್ಷ ಕೊರೊನಾ ಹಿನ್ನೆಲೆ ಲಾಕ್‍ಡೌನ್ ನಿಂದ ಕಾಲೇಜಿಗೆ ಹೋಗದೆ ಕೂಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಕಾಲೇಜು ಆರಂಭವಾದ ಬಳಿಕ ಓದಲು ಹೋಗು ಎಂದು ಪೋಷಕರು ಬಲವಂತ ಮಾಡಿ ಕಾಲೇಜಿಗೆ ಕಳುಹಿಸಿದ್ದರು. ಕಾಲೇಜಿಗೆ ಹೋಗಲು ಇಷ್ಟವಿಲ್ಲದ […]

ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್

Sunday, March 14th, 2021
Annamalai

ಚೆನ್ನೈ:  ತಮಿಳುನಾಡು ವಿಧಾನಸಭೆ ಚುನಾವಣೆಯ 20 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇದೀಗ ಒಟ್ಟೂ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಅಣ್ಣಾಮಲೈ ಅವರು ಅರವಕುರಿಚಿ ಕ್ಷೇತ್ರದಿಂದಲೂ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ. ಇನ್ನೊಂದೆಡೆ ಕಾರೈಕುಡಿ […]

ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ವಂಚಿಸಿದವನಿಗೆ ಬೆಲ್ಟ್ ನಿಂದ ಹಲ್ಲೆ

Thursday, March 4th, 2021
Jeetu Shetty

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಕೆಲವು ವ್ಯಕ್ತಿಗಳು  ಬೆಲ್ಟ್ ನಿಂದ ಮತ್ತು ಗುಂಪಾಗಿ ಸೇರಿ ಹಲ್ಲೆ ನಡೆಸಿರುವ ಘಟನೆ ಮುಲ್ಕಿ ಸಮೀಪ ನಡೆದಿದೆ. ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು ಮಂದಿಗೆ ನಂಬಿಸಿದ್ದಾನೆ. ಎಫ್ಬಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. […]

ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ : ಯೋಗಿ ಆದಿತ್ಯನಾಥ್

Tuesday, March 2nd, 2021
Adityanath

ಮಾಲ್ಡಾ: ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವುದಕ್ಕೆ ನಿರ್ಬಂಧ ಇದೆ. ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಓಲೈಕೆ ರಾಜಕಾರಣ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಕೆಲಸಗಳಲ್ಲಿ ತೊಡಗಿದ್ದಾರೆ ಎಂದು ಆದಿತ್ಯನಾಥ್  ಆರೋಪಿಸಿದ್ದಾರೆ. ವಿಧಾನಸಭೆ ಚುನಾವಣೆ ಪ್ರಚಾರದ ಅಂಗವಾಗಿ ಮಾ.02 ರಂದು ಮಾಲ್ಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಮಮತಾ ಬ್ಯಾನರ್ಜಿ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಕ್ರಮ ವಲಸಿಗರನ್ನು […]

ವಿಚ್ಛೇದನ ಸಮಸ್ಯೆಯಿಂದ ಪಾರಾಗಲು ಇಲ್ಲಿದೆ ಸರಳ ತಂತ್ರ

Tuesday, February 16th, 2021
Tambula

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ದಾಂಪತ್ಯದಲ್ಲಿ ಉದ್ಭವಿಸುವಂತಹ ಸಣ್ಣ ಪುಟ್ಟ ಜಗಳಗಳು ದೊಡ್ಡದಾಗುತ್ತದೆ. ಇಲ್ಲಿ ಅನಗತ್ಯ ಮಾತುಗಳು ಆಗದೇ ಇರುವಂತಹ ಜನಗಳ ದುಷ್ಟ ಬುದ್ಧಿಯಿಂದ ವಿಚ್ಛೇದನ ಹಂತಕ್ಕೆ ಈ ಸಮಸ್ಯೆ ತಲುಪಬಹುದು. ಪತಿ ಅಥವಾ ಪತ್ನಿ ಪರಸ್ಪರ ಒಪ್ಪಿಗೆ ಮೇರೆಗೆ ಆದರೆ ಅದು ವಿಚ್ಛೇದನ ಪರವಾಗಿಲ್ಲ. ಆದರೆ ಒಬ್ಬರಿಗೆ ಬಾಳುವ ಇಷ್ಟ ಇದ್ದರೂ ಸಹ ಅದನ್ನು ಅರಿಯದೆ ಮತ್ತೊಬ್ಬರು ಹಟ ಸಾಧನೆ ಮಾಡುತ್ತಾರೆ. ಇಂತಹ ಸಮಸ್ಯೆಯಿಂದ ನೀವು ನೊಂದಿದ್ದರೆ ಈ ಸರಳ […]

ಪಕ್ಕದ ಮನೆಯ ಮಹಿಳೆಯೊಂದಿಗೆ ಲವ್ ಅಪೈರ್. ವ್ಯಕ್ತಿಯ ಕೊಲೆ ಮಾಡಿದ ಆರು ಜನರ ಬಂಧನ

Tuesday, February 16th, 2021
brammavar Murder

ಬ್ರಹ್ಮಾವರ : ಪಕ್ಕದ ಮನೆಯ ಮಹಿಳೆಯೊಂದಿಗೆ ಲವ್ ಅಪೈರ್ ಇಟ್ಟುಕೊಂಡಿದ್ದ ಯುವಕನನ್ನು ಪಶ್ನಿಸಿದಕ್ಕೆ ಗೆಳೆಯರೊಂದಿಗೆ ಸೇರಿ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಭಂದಿಸಿದಂತೆ  ಅಪರಾಧ ಮಾಡಿದ 24 ಗಂಟೆಯೊಳಗೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗೌತಮ್ (27), ಮನೋಜ್ ಭಂಡಾರಿ (30), ಧನುಷ್ (27), ಚೇತನ್ ಕುಮಾರ್ (24), ತಿಲಕ್ ರಾಜ್ (36) ಮತ್ತು ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ್ ಹೊರತುಪಡಿಸಿ ಉಳಿದವರೆಲ್ಲರೂ ಮಲ್ಪೆ ನಿವಾಸಿಗಳಾಗಿದ್ದರೆಂದು ತಿಳಿದು ಬಂದಿದೆ. ಗುಡ್ಡೆಯಂಗಡಿ ಬಳಿಯ ಹೊಸೂರಿನಲ್ಲಿ ನವೀನ್‌‌ ನಾಯ್ಕ್  […]