ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ ಅಧಿಕಾರ ಸ್ವೀಕಾರ

Friday, March 1st, 2024
sadashiva-ullal

ಮಂಗಳೂರು: ನಾಲ್ಕೂವರೆ ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಸದಾಶಿವ ಉಳ್ಳಾಲ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಸದಾಶಿವ ಉಳ್ಳಾಲ್ ಮಾತನಾಡಿ ‘ಪಕ್ಷ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವೆ. ಪಕ್ಷಕ್ಕೆ ಯಾವ ಬಗೆಯಲ್ಲೂ ಮುಜುಗರ ಆಗದಂತೆ ಬಡವರಿಗೆ ಸೂರು ನಿರ್ಮಿಸಿಕೊಳ್ಳಲು ಜಾಗ ಸಿಗುವಂತೆ ಮಾಡಲು ಪ್ರಯತ್ನಿಸುವೆ’ ಎಂದು ಹೇಳಿದ್ದಾರೆ. ವಕೀಲರಾಗಿರುವ ಸದಾಶಿವ ಉಳ್ಳಾಲ್ ಅವರು ಉಳ್ಳಾಲ ತಾಲ್ಲೂಕಿನ ಕೊಲ್ಯ ನಿವಾಸಿ. ಗ್ರಾಮ ಪಂಚಾಯಿತಿ ಮತ್ತು ಬೂತ್ ಮಟ್ಟದ ಕಾರ್ಯಕರ್ತರಾಗಿ ರಾಜಕೀಯ ಜೀವನ […]

ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

Friday, March 1st, 2024
jobs

ಮಂಗಳೂರು : ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆಯಡಿ ಮಂಗಳೂರು, ಮುಲ್ಕಿ, ಉಳ್ಳಾಲ ಹಾಗೂ ಮೂಡಬಿದ್ರೆ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣ/ಅನುತ್ತಿರ್ಣರಾದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಆರ್.ಡ್ಲ್ಯೂ) ನೇಮಕ ಮಾಡಲು ಅವಕಾಶವಿದ್ದು 18 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ ಗೌರವಧನ ರೂ.9000 ನೀಡಲಾಗುತ್ತದೆ. ಖಾಲಿ ಇರುವ ಪುನರ್ವಸತಿ ಕೇಂದ್ರಗಳು: ಮಂಗಳೂರು […]

ಪತ್ರಕರ್ತ, ಕವಿ ಮನೋಹರ ಪ್ರಸಾದ್ ಇನ್ನಿಲ್ಲ

Friday, March 1st, 2024
manohar-prasad

ಮಂಗಳೂರು : ಪತ್ರಕರ್ತ, ಕಾರ್ಯಕ್ರಮ ನಿರೂಪಕ, ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ […]

ಲೋಕಸಭೆಗೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತ

Thursday, February 29th, 2024
Arun-Puttila

ಪುತ್ತೂರು : ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿಗೆ ಬಂಡಾಯವಾಗಿ ಹಿಂದೂ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ. ಇನ್ನು ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಬಂಡಾಯವಾಗಿ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ […]

ರೈಲ್ವೇ ಸೇತುವೆಯ ಕೆಳಗೆ ಈಜಲು ಬಂದಿದ್ದ ನಾಲ್ಕು ಮಕ್ಕಳು ಮೃತ್ಯು

Wednesday, February 28th, 2024
4 students

ಮಂಗಳೂರು : ಕೊಪ್ಪಳ ಆಣೆಕಟ್ಟ ರೈಲ್ವೇ ಸೇತುವೆಯ ಕೆಳಗೆ ಈಜಲು ಬಂದಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು, ತಡರಾತ್ರಿ ಬೆಳಕಿಗೆ ಬಂದಿದೆ. ಮೃತ ಪಟ್ಟ ಮಕ್ಕಳೆಲ್ಲರೂ ಸುರತ್ಕಲ್ ಖಾಸಗಿ ಶಾಲೆಯೊಂದರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಎಲ್ಲರ ಮೃತದೇಹಗಳನ್ನು ಸ್ಥಳೀಯರ ಸಹಕಾರದೊಂದಿಗೆ ಸುರತ್ಕಲ್ ಮತ್ತು ಮುಲ್ಕಿ ಪೊಲೀಸರು ಮೇಲೆತ್ತಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಮಗ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ […]

ಮನೆಯಿಂದ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ

Wednesday, February 28th, 2024
ಮನೆಯಿಂದ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ

ಕಾರ್ಕಳ : ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು […]

ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗನಿಂದ ಪಾಕ್ ಪರ ಘೋಷಣೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರತಿಭಟನೆ

Wednesday, February 28th, 2024
BJP-gherao

ಮಂಗಳೂರು : ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟದ ಸಂದರ್ಭ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿಯ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು […]

ಕೃಷ್ಣ ಜೆ ಪಾಲೆಮಾರ್, ಡಾ. ಎಂ ಎನ್ ರಾಜೇಂದ್ರ ಕುಮಾರ್ ಸಹಿತ ಏಳು ಮಂದಿಗೆ ಜಾನಪದ ಕಡಲೋತ್ಸವ ಗೌರವ ಪ್ರಶಸ್ತಿ

Monday, February 26th, 2024
ಕೃಷ್ಣ ಜೆ ಪಾಲೆಮಾರ್, ಡಾ. ಎಂ ಎನ್ ರಾಜೇಂದ್ರ ಕುಮಾರ್ ಸಹಿತ ಏಳು ಮಂದಿಗೆ ಜಾನಪದ ಕಡಲೋತ್ಸವ ಗೌರವ ಪ್ರಶಸ್ತಿ

ಮಂಗಳೂರು : ಮಾರ್ಚ್ 1 ರಿಂದ 3ರವರೆಗೆ ಪಣಂಬೂರು ಬೀಚಿನಲ್ಲಿ ನಡೆಯುವ ನಡೆಯುವ ಜಾನಪದ ಕಡಲು ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಅಧಾನಿ ಗ್ರೂಪ್‌ನ ಅಧ್ಯಕ್ಷರಾದ ಕಿಶೋರ್ ಆಳ್ವ, ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬಯಿಯ ಅಧ್ಯಕ್ಷರಾದ ಶ್ರೀ ಸದಾಶಿವ ಶೆಟ್ಟಿ ಕನ್ಯಾನ, ರೋಹನ್ ಕಾರ್ಪೊರೇಶನ್ ಸಂಸ್ಥಾಪಕರಾದ ರೋಹನ್ ಮೊಂತೆರೋ, ದಿವ್ಯರೂಪ ಕನ್ಸ್ಟ್ರಕ್ಷನ್ ಮಾಲಕರಾದ ಯಾದವ ಕೋಟ್ಯಾನ್ ಪೆರ್ಮುದೆ. ದೈವ ನರ್ತಕರಾದ ಮುಖೇಶ್ […]

ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯ : ಶಾಸಕ ವೇದವ್ಯಾಸ್ ಕಾಮತ್

Monday, February 26th, 2024
Vedavyas-kamath

ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ ಸಂದೇಹವುಂಟಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಶಾಲೆಗಳ ಪ್ರವೇಶ ದ್ವಾರದಲ್ಲಿದ್ದ ರಾಷ್ಟ್ರಕವಿ ಕುವೆಂಪು ಅವರ “ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ” ಎಂಬ ಸಾಲುಗಳನ್ನು “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು” ಎಂದು ಬದಲಾವಣೆ ಮಾಡಿದ್ದನ್ನು ರಾಜ್ಯದ ಜನರೇ […]

ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

Monday, February 26th, 2024
ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

ಮಂಗಳೂರು : ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಬಿಳಿಮಲೆಯವರು ಅಭಿಪ್ರಾಯಪಟ್ಟಿದ್ದಾರೆ. ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ […]