ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿಗೆ ಇಂದು 37ನೇ ವರ್ಷದ ಹುಟ್ಟುಹಬ್ಬ..!

Saturday, July 7th, 2018
m-s-dhoni

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗ, ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಕ್ರಿಕೆಟ್ ಕಂಡಂತಹ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಧೋನಿ ಇಂದಿಗೆ ಸರಿಯಾಗಿ 37 ವರ್ಷಗಳ ಹಿಂದೆ ಅಂದರೆ ಜುಲೈ 7, 1981ರಲ್ಲಿ ರಾಂಚಿಯಲ್ಲಿ ಜನಿಸಿದವರು. ಧೋನಿ ಡಿಸೆಂಬರ್ 23, 2004ರಂದು ಬಾಂಗ್ಲಾದೇಶದ ವಿರುದ್ಧ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡುತ್ತಾರೆ. ಅದಾದ ಒಂದು ವರ್ಷದ ನಂತರ ಅಂದರೆ, ಡಿಸೆಂಬರ್ 2, 2005ರಲ್ಲಿ ಧೋನಿ […]

ಫಿಫಾ ವಿಶ್ವಕಪ್…ಬ್ರೆಜಿಲ್​ ತಂಡವನ್ನು 2-1ರ ಅಂತರದಲ್ಲಿ ಸೋಲಿಸಿದ ಬೆಲ್ಜಿಯಂ ಸೆಮೀಸ್​ಗೆ ಲಗ್ಗೆ!

Saturday, July 7th, 2018
belgium

ಮಾಸ್ಕೋ: ಫಿಫಾ ವಿಶ್ವಕಪ್ ಫುಟ್ಬಾಲ್ 2018 ರ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯ ರೋಚಕವಾಗಿ ಅಂತ್ಯವಾಗಿದೆ. ಬ್ರೆಜಿಲ್ ತಂಡವನ್ನು 2-1ರ ಅಂತರದಲ್ಲಿ ಸೋಲಿಸಿದ ಬೆಲ್ಜಿಯಂ ಸೆಮೀಸ್ಗೆ ಲಗ್ಗೆ ಇಟ್ಟಿದೆ. ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಎರಡನೇ ಕ್ವರ್ಟರ್ ಫೈನಲ್ ಪಂದ್ಯದಲ್ಲಿ ಆರಂಭದಿಂದಲೇ ಬೆಲ್ಜಿಯಂ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು. ಬೆಲ್ಜಿಯಂ ಪರ ಫೆರ್ನಾಂಡಿನ್ಹೋ 13ನೇ ನಿಮಿಷದಲ್ಲಿ ಗೋಲ್ ಗಳಿಸುವುದರ ಮೂಲಕ ಪಂದ್ಯದಲ್ಲಿ ತಂಡ ಮೇಲುಗೈ ಸಾಧಿಸುವಂತೆ ಮಾಡಿದರು. ಅನಂತರದಲ್ಲಿ ಅಂದರೆ 31 ನೇ ನಿಮಿಷದಲ್ಲಿ ಬೆಲ್ಜಿಯಂನ ಮತ್ತೊಬ್ಬ ಆಟಗಾರ […]

ಪ್ರಜ್ವಲ್ ಯುವಕ ಮಂಡಲಕ್ಕೆ ವಿಂಶತಿ ಸಂಭ್ರಮ

Friday, July 6th, 2018
Prajwal youth club

ಮಂಗಳೂರು  : ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾರಂಗದಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಪ್ರಜ್ವಲ್ ಯುವಕ ಮಂಡಲ (ರಿ) ಈಗ ಇಪ್ಪತ್ತು ವರ್ಷದ ಸಂಭ್ರಮದಲ್ಲಿದೆ. ಮಂಗಳೂರು ನಗರದ ಸೂಟರ್ ಪೇಟೆಯಲ್ಲಿ ಯುವಕರ ಸಂಘಟನೆ ಯೊಂದು ಇಪ್ಪತ್ತು ವರ್ಷಗಳ ಹಿಂದೆ ಸ್ಥಾಪನೆಗೊಂಡು ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಮಹಾನ್ ಸಾಧನೆಯೇ ಸರಿ. 1998ರ ಜೂನ್ -28ರಂದು ಉದ್ಘಾಟನೆಗೊಂಡ ಪ್ರಜ್ವಲ್ ಯುವಕ ಮಂಡಲ ತನ್ನ ಇಪ್ಪತ್ತು ವರ್ಷಗಳನ್ನು ಪೂರೈಸಿದ ವಿಂಶತಿ ಸಂಭ್ರಮವನ್ನು ಜುಲೈ-8ರಂದು ಆಚರಿಸುತ್ತಿದೆ. ಒಂದು ಅರ್ಥಪೂರ್ಣ ಕಾರ್ಯಕ್ರಮದ ಜೊತೆಗೆ […]

ಈ ಬಾರಿ ಲೋಕಸಭಾ ಚುನಾವಣೆಗೆ ಬಿ.ರಮಾನಾಥ್ ರೈ ಸ್ಪರ್ಧಿಸುತ್ತಾರಂತೆ !

Monday, July 2nd, 2018
Ramanatha Rai

ಮಂಗಳೂರು : ವಿಧಾನ ಸಭಾ ಚುನಾವಣೆಯಲ್ಲಿ ಸೋತ ಬಳಕ ಮಾಜಿ ಸಚಿವ ರಮಾನಾಥ್ ರೈ ಸ್ವಲ್ಪ ಸಮಯದ ಬಿಡುವಿನ ಬಳಿಕ ರಾಜಕೀಯವಾಗಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.  ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ. ಹಾಗಂತ ಅವರೇ ಕಾರ್ಯಕರ್ತರ ಬಳಿ ಪದೇ ಪದೇ ಹೇಳಿಕೊಳ್ಳುತ್ತಿದ್ದರಂತೆ. ಆ ಬಗ್ಗೆ ಮಾಧ್ಯಮದ ಪ್ರತಿನಿಧಿಗಳಲ್ಲಿಯೂ ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ಈಗಾಗಲೇ ನಳಿನ್ ಕುಮಾರ್ ವಿರುದ್ಧ ವಾಕ್ ಸಮರಕ್ಕೆ ಇಳಿದಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದ ಲೋಕ ಸಭೆ ಚುನಾವಣೆಯಲ್ಲಿ […]

ಗಾಂಜಾ ಮಾರಾಟದ ನಾಲ್ವರ ಬಂಧನ , 1.50 ಗ್ರಾಂ ಗಾಂಜಾ ವಶ

Monday, July 2nd, 2018
Ganja Seller

ಮಂಗಳೂರು : ನಗರದ ಉರ್ವ ಮಾರಿಗುಡಿ ಬಳಿ ಗಾಂಜಾ ಮಾರಾಟ ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿದ ಬಂಧಿಸಿದ ಘಟನೆ ಭಾನುವಾರ ನಡೆದಿದೆ. ಬಂಧಿತರನ್ನು ಉರ್ವದ ಮಾಡರ್ನ್ ರೈಸ್‌ಮಿಲ್ ಬಳಿ ಸಿಪಿಸಿ ಕಂಪೌಂಡ್ ನಿವಾಸಿ ಮಹೇಶ್ ಯಾನೆ ಮಾಚ (24), ಬೊಕ್ಕಪಟ್ಟಣ ರಸ್ತೆಯ ಮಠದಕಣಿಯ ರೀತೇಶ್ ಯಾನೆ ರೀತು (20), ಉರ್ವ ಲಾಂಗ್‌ಲೇನ್‌ ಬಳಿಯ ಸುದರ್ಶನ್ ಎಂ. ಯಾನೆ ಸುಧಾ (24), ಅಶೋಕ್‌ನಗರದ ಪಿ.ಕೆ. ಕಂಪೌಂಡ್ ಬಳಿಯ ರೀತೇಶ್ (21) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ […]

ರಾಜ್ಯದಲ್ಲಿ 10ಕೋಟಿ ಸಸಿಗಳನ್ನು ನೆಡಲು ಯೋಜನೆ : ಅರಣ್ಯ ಸಚಿವ ಆರ್.ಶಂಕರ್

Tuesday, June 26th, 2018
R shankar

ಸುಬ್ರಹ್ಮಣ್ಯ: ರಾಜ್ಯದಲ್ಲಿ 10ಕೋಟಿ ಸಸಿಗಳನ್ನು ನೆಡಲು ಯೋಜನೆ ರೂಪಿತವಾಗಿದೆ. ರಾಜ್ಯವನ್ನು ಹಸಿರು ಹೊದೆಕೆಯನ್ನಾಗಿಸಲು ಪ್ರಯತ್ನ ಮಾಡುತ್ತೇನೆ. ಈ ಯೋಜನೆ ಜಾರಿಗೊಂಡಲ್ಲಿ ಅರಣ್ಯ ಸಂರಕ್ಷಣೆಯಲ್ಲಿ ರಾಜ್ಯವು ದೇಶದಲ್ಲೇ ಮಾದರಿಯಾಗಲಿದೆ. ಅರಣ್ಯ ಇಲಾಖೆಗೆ ಬಜೆಟ್‌ನಲ್ಲಿ 1500 ಕೋಟಿ ದೊರಕುತ್ತಿತ್ತು. ಈ ಮೊತ್ತವು ಕಡಿಮೆಯಾಗುತ್ತದೆ. ಈ ಬಾರಿ ಬಜೆಟ್‌ನಲ್ಲಿ ಅರಣ್ಯ ಸಂರಕ್ಷಣೆಗೆ ೫೦೦ಕೋಟಿ ಹೆಚ್ಚುವರಿ ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಅರಣ್ಯ ಸಂರಕ್ಷಣೆಗೆ ಪ್ರಾಧಾನ ಆದ್ಯತೆ ನೀಡುವುದು ನನ್ನ ಧ್ಯೇಯ ಎಂದು ರಾಜ್ಯ ಅರಣ್ಯ ಸಚಿವ ಆರ್.ಶಂಕರ್ ಹೇಳಿದರು. ಕುಕ್ಕೆ […]

ಬಂಟರ ಸಂಘ ವಸಾಯಿ-ಡಹಾಣು ಪ್ರಾದೀಶಿಕ ಸಮಿತಿಯ ವತಿಯಿಂದ ಶೈಕ್ಷಣಿಕ ನೆರವು ವಿತರಣೆ

Saturday, June 23rd, 2018
Vasai-Bunts

ಮುಂಬಯಿ : ಬಂಟರ ಸಂಘ ವಸಾಯಿ-ಡಹಾಣು ಪ್ರಾದೀಶಿಕ ಸಮಿತಿಯ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭವು ಇತ್ತೀಚೆಗೆ ನಾಲಾಸೋಪಾರ ಪೂರ್ವದ ರೀಜೆನ್ಸಿ ಸಭಾಗೃಹದಲ್ಲಿ ಬಂಟರ ಸಂಘದ ಅಧ್ಯಕ್ಷರಾದ ಪದ್ಮನಾಭ ಎಸ್. ಪಯ್ಯಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಬಂಟರ ಸಂಘದ ಟ್ರಷ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಉಪಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಪ್ರಾದೇಶಿಕ ಸಮಿತಿಯ ಸಮನ್ವಯಕ ಡಾ. ಪ್ರಭಾಕರ ಶೆಟ್ಟಿ, ಶಿಕ್ಷಣ ಮತ್ತು […]

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ, ಮಹಾರಾಷ್ಟ್ರದ ಉಸ್ತುವಾರಿ ಆಗಿ ಖರ್ಗೆ ಅವರು ನೇಮಕ..!

Friday, June 22nd, 2018
mallikarjun-karge

ನವದೆಹಲಿ: ಕಾಂಗ್ರೆಸ್‌‌ನ ಹಿರಿಯ ಮುಖಂಡ, ಲೋಕಸಭೆಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಮಹಾರಾಷ್ಟ್ರದ ಉಸ್ತುವಾರಿ ಆಗಿ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತ ಅಧಿಕೃತ ಪ್ರಕಟಣೆಯನ್ನು ಪಕ್ಷದ ಟ್ವಿಟ್ಟರ್‌ ಖಾತೆಯಲ್ಲಿ ಹಾಕಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಖರ್ಗೆ ಮಹಾರಾಷ್ಟ್ರದ ಉಸ್ತುವಾರಿ ನೇಮಕಗೊಳಿಸಲಾಗಿದ್ದು, ಹಾಲಿ ಉಸ್ತುವಾರಿ […]

ಹಿಂದೂ ಮಹಿಳೆಯೊಬ್ಬರ ಅಂತಿಮ ಸಂಸ್ಕಾರವನ್ನು ಮಾಡಿದ ಮುಸ್ಲಿಂ ಬಾಂಧವರು

Saturday, June 16th, 2018
woman

ಪುತ್ತೂರು   : ವಿದ್ಯಾಪುರ ಜನವಸತಿ ಕಾಲೋನಿಯ ಮಹಿಳೆಯೊಬ್ಬರು  ಶನಿವಾರ  ಬೆಳಗ್ಗಿನ ಜಾವ ಹೃದಯಾಘಾತದಿಂದ ಮರಣ ಹೊಂದಿದ್ದು  ಅವರ ಅಂತಿಮ ಸಂಸ್ಕಾರವನ್ನು ಸಂಭಂದಿಕರ ಅನುಪಸ್ಥಿತಿಯಲ್ಲಿ ನೆರೆ ಹೊರೆಯ ಯುವಕರು ನೆರವೇರಿಸಿದರು. ಹುಟ್ಟುವಾಗ ಹಿಂದುವಾಗಿ ಹುಟ್ಟಿದ ಭವಾನಿ ಅವರ ಅಂತಿಮ ಸಂಸ್ಕಾರವನ್ನು ಮುಸ್ಲಿಂ ಬಾಂದವರು ಹಿಂದೂ ಸಂಪ್ರದಾಯದಂತೆ  ಪುತ್ತೂರಿನ ರುದ್ರ ಭೂಮಿಯಲ್ಲಿ ನೆರವೇರಿಸಿದರು . ಭವಾನಿಯವರ ಮೃತ ದೇಹವನ್ನು ಮಣ್ಣು ಮಾಡಲು ಸಂಭಂದಿಕರು ಮುಂದೆ ಬರದೇ ಇದ್ದ ಪರಿಸ್ಥಿತಿಯಲ್ಲಿ ಸ್ಥಳೀಯ ಅಂಗನವಾಡಿ ಟೀಚರ್ ರಾಜೇಶ್ವರಿ ಮತ್ತು ಇತರರು ಸೇರಿ ಸೇರಿ ಹಣ ಸಂಗ್ರಹಿಸಿ ಅಂತ್ಯ […]

ಒಂದು ವರ್ಷ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

Friday, June 15th, 2018
kumarswamy-2

ಬೆಂಗಳೂರು: ಒಂದು ವರ್ಷದವರೆಗೆ ನನ್ನನ್ನೂ ಯಾರೂ ಟಚ್ ಮಾಡಲು ಸಾಧ್ಯವಿಲ್ಲ. ಲೋಕಸಭೆ ಚುನಾವಣೆವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ. ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ 15 ನೇ ರಾಜ್ಯಮಟ್ಟದ ಲೆಕ್ಕಪರಿಶೋಧಕರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿಯು ನನ್ನ ಪರವಾಗಿದೆ. ರಾಜ್ಯದಲ್ಲಿ ಒಳ್ಳೆ ಮಳೆಯಾಗುತ್ತಿದೆ. ನಾನು ಕೆಲಸ ಮಾಡಬೇಕಾದರೆ ಬಹಳಷ್ಟು ಜನ ಕಾಲೆಳೆಯಲು ಇರುತ್ತಾರೆ ಎಂದು ಪರೋಕ್ಷವಾಗಿ ಪ್ರತಿಪಕ್ಷದ ನಾಯಕರಿಗೆ ತಿರುಗೇಟು ನೀಡಿದರು. […]