ಡಾ. ಸಾಂಬಯ್ಯ ಅವರಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ

Friday, November 17th, 2017
Alvas danvantari

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ವಿದ್ಯಾಗಿರಿಯಲ್ಲಿ ಗುರುವಾರ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ ಸಮಾರಂಭ ನಡೆಯಿತು. ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ , ಆಯುರ್ವೇದ ಚಿಕಿತ್ಸಕ ಡಾ. ಸಾಂಬಯ್ಯ ಅವರಿಗೆ `ಆಳ್ವಾಸ್ ಧನ್ವಂತರಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‍ನ ಟ್ರಸ್ಟಿ ವಿವೇಕ ಆಳ್ವ ಅಧ್ಯಕ್ಷತೆವಹಿಸಿದ್ದರು. ಮಂಗಳೂರು ಆಯುಷ್ ಫೌಂಡೇಶನ್ ಅಧ್ಯಕ್ಷೆ […]

ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು : ವೀರೇಂದ್ರ ಹೆಗ್ಗಡೆ

Wednesday, November 15th, 2017
deepotsava

ಉಜಿರೆ: ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಆಚಾರ-ವಿಚಾರ, ಸಾತ್ವಿಕತೆ, ಪ್ರೀತಿ-ವಿಶ್ವಾಸ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆದು ಸಜ್ಜನರಾಗಿ ಸಾರ್ಥಕ ಬದುಕನ್ನು ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪ್ರಾರಂಭದ ದಿನವಾದ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾಭವನದಲ್ಲಿ ಅವರು ಮಾತನಾಡಿದರು. ಸುಂದರ ಪ್ರಕೃತಿ-ಪರಿಸರ ಮತ್ತು ಭೂಮಿಯನ್ನು ರಕ್ಷಣೆ ಮಾಡಿ ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ […]

ಸಸ್ಪೆನ್ಸ್, ಥ್ರಿಲ್ಲರ್‌ ಸಿನಿಮಾ ‘ನಿಶ್ಯಬ್ದ 2’

Saturday, November 4th, 2017
nishyabda

ಮಂಗಳೂರು: ರಾಕಿಗೆ ಅಪ್ಪನ ಮೇಲೆ ಪ್ರೀತಿ. ಅಪ್ಪನಿಗೆ ಕಿಡ್ನಿ ವೈಫಲ್ಯ. ಚಿಕಿತ್ಸೆ ಕೊಡಿಸಲು ಅವನ ಬಳಿ ದುಡ್ಡಿಲ್ಲ. ಹಣಕ್ಕಾಗಿ ಕಳ್ಳತನಕ್ಕೆ ಇಳಿಯುತ್ತಾನೆ. ಆತನೊಂದಿಗೆ ಕೈಜೋಡಿಸುವ ಪೆಟ್ರೋಲ್ ಪ್ರಸನ್ನನದ್ದೂ ಇದೇ ವೃತ್ತಿ. ಶ್ರದ್ಧಾಳಿಗೆ ಸಾಲಗಾರರ ಕಾಟ. ಮನೆ ಉಳಿಸಿಕೊಳ್ಳಲು ಹೆಣಗಾಡುವ ಆಕೆಗೂ ಹಣ ಬೇಕು. ಹಣ ದೋಚಲು ಹೋಗುವ ಈ ಮೂವರು ಅಚಾನಕ್‌ ಆಗಿ ಮಿಲಿಟರಿಯ ಮಾಜಿ ಅಧಿಕಾರಿಯ ಮನೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ದುಡ್ಡಿನ ಹಿಂದೆ ಬಿದ್ದ ಈ ಮೂವರ ಬದುಕಿನ ತವಕ, ತಲ್ಲಣ ಇಟ್ಟುಕೊಂಡು ‘ನಿಶ್ಯಬ್ದ 2’ ಸಿನಿಮಾ […]

ರಂಗ್‌ರಂಗ್‌ದ ದಿಬ್ಬಣ ಕರಾವಳಿಯಾದ್ಯಂತ ತೆರೆಗೆ; ಕರಾವಳಿಯ ಪ್ರತಿಭಾವಂತರೇ ನಿರ್ಮಿಸಿದ ಸಿನಿಮಾ

Saturday, November 4th, 2017
rang rangda dibbana

ಮಂಗಳೂರು: ವಾರಿನ್ ಕಂಬೈನ್ಸ್ ಲಾಂಛನದಲ್ಲಿ ತಯಾರಾಗಿರುವ ಶರತ್ ಕೋಟ್ಯಾನ್ ನಿರ್ಮಾಣದ ಕೃಷ್ಣಪ್ರಸಾದ್ ಉಪ್ಪಿನಕೋಟೆ ನಿರ್ದೇಶನದ ರಂಗ್ ರಂಗ್‌ದ ದಿಬ್ಬಣ ನವಂಬರ್ 3ರಂದು ಮಂಗಳೂರಿನ ಜ್ಯೋತಿ ಮಂದಿರದಲ್ಲಿ ಬಿಡುಗಡೆಗೊಂಡಿತು. ಜೆಪ್ಪಿನಮೊಗರು ವನದುರ್ಗೆ ಮಂತ್ರ ಮೂರ್ತಿ ದೈವಸ್ಥಾನದ ಮೊಕ್ತೇಸರರಾದ ಯೋಗೀಶ್ ಭಟ್ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ‘ರಂಗ್ ರಂಗ್‌ದ ದಿಬ್ಬಣ’ ತುಳು ಸಿನಿಮಾ ನೂರು ದಿನಗಳ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಶುಭ ಹಾರೈಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ತುಳು […]

ಚಾರಿತ್ರಿಕ ಮಹತ್ವಕ್ಕಾಗಿ ಉಪವಾಸ ಕಾರ್ಯಕ್ರಮ

Thursday, October 26th, 2017
pv mohan

ಮಂಗಳೂರು: ಇಂದು ದೇಶದಲ್ಲಿ ಉದ್ದಗಲಗಳಲ್ಲಿ, ರಾಜ್ಯದಲ್ಲಿ ವಿಶೇಷವಾಗಿ ಕರಾವಳಿ ಕರ್ನಾಟಕವೆನ್ನುವ ನಮ್ಮ ಪ್ರದೇಶದಲ್ಲಿ ಉದ್ವಿಗ್ನತೆಯ, ಸಂವಿಧಾನಿಕ ವ್ಯವಸ್ಥೆ ಬಗ್ಗೆ, ಧಿಕ್ಕಾರವನ್ನು ನಾವು ಕಾಣುತ್ತಿದ್ದೇವೆ. ಕಾನೂನು ಕಟ್ಟಳೆಗಳನ್ನು ಅಣಕ ಮಾಡುವ ರೀತಿಯಲ್ಲಿ ಘಟನೆಗಳು ನಡೆಯುತ್ತಿವೆ. ಜನರ ವೈಯಕ್ತಿಕ ಬದುಕಿನ ಮೇಲೆ ಹಿಂಸಾತ್ಮಕ ದಾಳಿ ಮಾಡುವ ಅನಾಗರಿಕ ಆಚಾರವು ಅಲ್ಲಲ್ಲಿ ನೋಡುತ್ತಿದ್ದೇವೆ. ಜಾತೀಯವಾದಿ ಸಂಕುಚಿತತೆ, ಧಾರ್ಮಿಕ ಅಸಹಿಷ್ಣುತೆ ಮತ್ತು ರಾಜಕಾರಣದಲ್ಲಿ ಸೈದ್ಧಾಂತಿಕತೆಯ ರಾಜಕೀಯ ಸಂಪೂರ್ಣ ಗೈರು ಹಾಜರಿ ನಮ್ಮೆಲ್ಲರನ್ನು ಕಂಗೆಡಿಸಿದೆ. ವಿಭಿನ್ನ ಬಗೆಯ ಕೋಮುವಾದಿ ಮನೋಭಾವಗಳು, ವಿಭಜನೆಯ ಚಿಂತನೆಗಳು ನಮ್ಮೆಲ್ಲರ […]

ಕಾಪು: ಅಶಕ್ತ, ಅನಾಥ ಮಕ್ಕಳೊಂದಿಗೆ ಕಾಂಗ್ರೆಸ್ ದೀಪಾವಳಿ ಆಚರಣೆ

Thursday, October 19th, 2017
Diwali celebration

ಮಂಗಳೂರು:  ಕಾಪು ಕಾಂಗ್ರೆಸ್ ಹಿಂದುಳಿದ ವರ್ಗ ಕಟಪಾಡಿ ಬಳಿಯ ಶಂಕರ ಪುರ ವಿಶ್ವಾಸದ ಮನೆಯಲ್ಲಿ ಅಶಕ್ತ, ಅನಾಥ ಮಕ್ಕಳೊಂದಿಗೆ ಹಾಗೂ ವಯೋ ವೃದ್ಧರೊಂದಿಗೆ ದೀಪಾವಳಿ ಸಂಭ್ರವನ್ನು ಆಚರಿಸಿತು. ಇಲ್ಲಿಯ ಮಕ್ಕಳಿಗೆ ವಯೋವೃದ್ಧರಿಗೆ ಸಿಹಿ ತಿಂಡಿ ಹಾಗೂ ಬಟ್ಟೆ ಬರೆಗಳನ್ನು ಈ ಸಂದರ್ಭ ವಿತರಿಸಲಾಯಿತು. ಕಾಪು ಶಾಸಕ ವಿನಂ ಕುಮಾರ್ ಸೊರಕೆ ಮಾತನಾಡಿ, ದೀಪಾವಳಿ ಹಬ್ಬದ ಪ್ರಥಮ ದಿನವನ್ನು ಶಂಕರಪುರದ ಅನಾಥರ ವಿಶ್ವಾಸದ ಮನೆಯಲ್ಲಿ ಕಾಪು ಕಾಂಗ್ರೆಸ್ ಆಚರಿಸುತ್ತಿರುವುದು ಅತ್ಯಂತ ಸಂತಸ ತಂದಿದೆ. ವಿಶ್ವಾಸದ ಮನೆಗೆ ನಮ್ಮ ರಾಜ್ಯಕ್ಕೆ […]

ನಕಲಿ ಗೋರಕ್ಷಕರು ಎಂಬ ಹೇಳಿಕೆ ಸುಳ್ಳು :ಜಗದೀಶ್ ಶೇಣವ

Wednesday, October 18th, 2017
vishva hindu parishath

ಮಂಗಳೂರು: ಗೋವುಗಳ ರಕ್ಷಣೆಗೆ ಮುಂದಾಗುವವರೆಲ್ಲ ಪ್ರಧಾನಿ ನರೇಂದ್ರ ಮೋದಿಯವರ ನಕಲಿ ಗೋರಕ್ಷಕರು ಎಂಬ ಹೇಳಿಕೆಯನ್ನು ವಿರೋಧಿಸುವುದಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ನಮ್ಮ ಅನಿಸಿಕೆ ಪ್ರಕಾರ ದೇಶದಲ್ಲಿ ಯಾರೂ ನಕಲಿ ಗೋರಕ್ಷಕರಿಲ್ಲ. ಇರುವವರೆಲ್ಲ ಗೋವುಗಳನ್ನು ಪ್ರೀತಿಸುವವರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಕಲಿ ಗೋ ರಕ್ಷಕರು ಎಂಬ ಹೇಳಿಕೆಯನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಅಕ್ರಮ ಕಸಾಯಿಖಾನೆ ಕುರಿತು ಮಾಹಿತಿ ನೀಡಿದ ಸಾಫ್ಟ್‌‌ವೇರ್ […]

`ಐ ಆ್ಯಮ್ ಮೋದಿ’ ಅಭಿಯಾನ :ಸೂಲಿಬೆಲೆ

Saturday, October 14th, 2017
Chakravarthi sulibele

ಮಂಗಳೂರು: ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಷನ್ ಬೇಗ್ ತೀರ ಕೆಳಮಟ್ಟದ ಭಾಷೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡಿರುವುದು ಸಹಿಸಲಸಾಧ್ಯ. ಇದರ ವಿರುದ್ಧ ಸಾಮೂಹಿಕವಾಗಿ ಜನಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಾದ್ಯಂತ `ಐ ಆ್ಯಮ್ ಮೋದಿ’ ಎಂಬ ಅಭಿಯಾನ ನಡೆಸಲಾಗುವುದು ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟೀಕಿಸಲು ಹಕ್ಕಿದೆ. ಹಾಗಂತ ಕೀಳು ಭಾಷೆ ಬಳಸುವುದಲ್ಲ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕೂಡ ನನ್ನ […]

ಬಾಳೆಹಣ್ಣು ಆವಕಾಡೊ(ಬೆಣ್ಣೆ ಹಣ್ಣು) ತಿನ್ನುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ದೂರ

Thursday, October 12th, 2017
banana-avakado

ನ್ಯೂಯಾರ್ಕ್: ಬಾಳೆಹಣ್ಣು ಹಾಗೂ ಅವಕಾಡೋ(ಬೆಣ್ಣೆ ಹಣ್ಣು) ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡಲು ಸಹಕಾರಿ ಎಂಬುದು ಹೊಸ ಸಂಶೋಧನೆ ಮೂಲಕ ತಿಳಿದುಬಂದಿದೆ. ಈ ಎರಡೂ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಅಂಶ ಹೆಚ್ಚಿದ್ದು ಹೃದಯ ನಾಳಗಳಷ್ಟೇ ಅಲ್ಲದೇ ಕಿಡ್ನಿ ಸಮಸ್ಯೆಗಳಿಗೂ ಉತ್ತಮ ಪರಿಹಾರ ಎಂದು ಸಂಶೋಧಕರು ಹೇಳಿದ್ದಾರೆ. ರಕ್ತನಾಳಗಳಲ್ಲಿ ಕ್ಯಾಲ್ಶಿಯಂ ಪ್ರಮಾಣ ಅಧಿಕವಾದಾಗ ಕ್ಯಾಲ್ಸಿಫಿಕೇಶನ್ ಉಂಟಾಗಿ ದೇಹದ ನೈಸರ್ಗಿಕ ಪ್ರಕ್ರಿಯೆಗಳಿಗೆ ಹಾನಿ ಉಂಟಾಗುತ್ತದೆ. ಆದ್ದರಿಂದ ಹೆಚ್ಚಿನ ಪೊಟ್ಯಾಸಿಯಮ್ ಅಂಶ ಇರುವ ಪದಾರ್ಥಗಳನ್ನು ಸೇವಿಸಿದರೆ ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡಲು ಸಹಕಾರಿಯಾಗುತ್ತದೆ ಎಂದು […]

ಶರಣ್ ಅಭಿನಯದ ‘ಸತ್ಯ ಹರಿಶ್ಚಂದ್ರ’ ಚಿತ್ರದ ಟ್ರೈಲರ್ ಬಿಡುಗಡೆ

Thursday, October 12th, 2017
sathya harischandra

ಬೆಂಗಳೂರು: ಸ್ಯಾಂಡಲ್ವುಡ್ ನಟ ಶರಣ್ ಹಾಗೂ ಚಿಕ್ಕಣ್ಣ ಅಭಿನಯದ ಸತ್ಯ ಹರಿಶ್ಚಂದ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶರಣ್ ಗೆ ಜೋಡಿಯಾಗಿ ಸಂಚಿತಾ ಪಡುಕೋಣೆ ನಟಿಸಿದ್ದಾರೆ. ಚಿತ್ರವನ್ನು ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.