ಸಮಾಜ ಸೇವಕ ಕೆ.ರವೀಂದ್ರ ಶೆಟ್ಟಿ ಗೆ ಆರ್ಯಭಟ ಪ್ರಶಸ್ತಿ

Saturday, June 22nd, 2024
Ravindra-Shetty

ಮಂಗಳೂರು : ಶಿಕ್ಷಣ, ಧಾರ್ಮಿಕ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 23ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ. ಕೆ.ರವೀಂದ್ರ ಶೆಟ್ಟಿ ಅವರು ದೇರಳಕಟ್ಟೆಯಲ್ಲಿ ತನ್ನ ತಾಯಿಯ ಹೆಸರಿನಲ್ಲಿ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ಸ್ಥಾಪಿಸಿ ಆರ್ಥಿಕವಾಗಿ ಹಿಂದುಳಿದ ಹಲವಾರು ಮಕ್ಕಳಿಗೆ ಶುಲ್ಕದಲ್ಲಿ ರಿಯಾಯಿತಿ ನೀಡುತ್ತಿರುವುದಲ್ಲದೆ, […]

ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Saturday, June 22nd, 2024
Kamala-Hampana

ಬೆಂಗಳೂರು : ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ […]

ಮಂಗಳೂರು ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಇಮೇಲ್‌ ಬೆದರಿಕೆ!

Saturday, June 22nd, 2024
Mangalore-Airport

ಮಂಗಳೂರು : ಜೂನ್‌ 18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್‌ ಐಡಿಗಳಿಗೆ ಅಪರಿಚಿತರು , ಏರ್‌ಪೋರ್ಟ್‌‌ನಲ್ಲಿ ಬಾಂಬ್‌ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್‌ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಜೂನ್‌ 18 ರಂದು ಸಂಜೆ ಬಜ್ಪೆ ರಾಣೆಗೆ ದೂರು ನೀಡಿದ್ದಾರೆ. exhumedyou888@gmail.com ಅಪರಿಚಿತನೊರ್ವ ವಿಮಾನ ನಿಲ್ದಾಣದ […]

ಯೋಗ ವಿಥ್ ಯೋಧ: ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ವಿಶ್ವ ಯೋಗ ದಿನಾಚರಣೆ

Friday, June 21st, 2024
Brijesh chowta

ಮಂಗಳೂರು : “ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು ಮಾಡಬೇಕು …ಇಡಿ ವಿಶ್ವವೇ ನಮ್ಮ ದಕ್ಷಿಣ ಕನ್ನಡದತ್ತ ನೋಡುವಂತೆ ಮಾಡಬೇಕು ಎಂಬ ಆಶಯದಿಂದ ಈಗಾಗಲೇ ಸಾಹಸ ಕ್ರೀಡೆಗಳ ಮೂಲಕ ಅಂತರ ರಾಷ್ಟ್ರೀಯ ಪ್ರವಾಸೋದ್ಯಮದ ನಕ್ಷೆಯಲ್ಲಿ ತನ್ನ ಸ್ಥಾನವನ್ನು ಕಲ್ಪಿಸಿದ ಸಸಿಹಿತ್ಲು ಕಡಲ […]

ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ : ವೇದವ್ಯಾಸ ಕಾಮತ್

Friday, June 21st, 2024
yoga-day

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ ಅತ್ಯಂತ ಪರಿಣಾಮಕಾರಿಯಾಗಿದೆ. ಇಂತಹ ಯೋಗಾಭ್ಯಾಸವು […]

“ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾ: ರಾಜೇಶ್ ನಾಯ್ಕ್

Friday, June 21st, 2024
Arata-film

ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ‌ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭಹಾರೈಸಿದರು. ಸಮಾರಂಭದಲ್ಲಿ ಶಿವಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ಆಳ್ವ, ವಿಜಯಕುಮಾರ್ ಕೊಡಿಯಾಲ್ […]

ಮಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಜೊತೆಯಾಗೋಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Thursday, June 20th, 2024
Brijesh-Felicitation

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಯುದ್ಧ ಸ್ಮಾರಕವನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿಪಡಿಸಲು ಮಂಗಳೂರಿನ ಪ್ರಥಮ ಪ್ರಜೆ‌ ಮತ್ತು ನಗರದ ಜನಪ್ರತಿನಿಧಿಗಳಿಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು. ಈ ಸಂದರ್ಭದಲ್ಲಿ ಮ.ನ.ಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪ್ರತಿಪಕ್ಷ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಮ.ನ.ಪಾ ಆಯುಕ್ತರಾದ ಆನಂದ್, […]

ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ, ಹತ್ತನೇ ತರಗತಿಯ ವಿದ್ಯಾರ್ಥಿ ಬಂಧನ

Wednesday, June 19th, 2024
Hemavathi

ಉಪ್ಪಿನಂಗಡಿ : ಮನೆಯ ಕೋಣೆಯಲ್ಲಿ ಮಲಗಿದ್ದ ವೇಳೆ ಮೃತಪಟ್ಟ ಮಹಿಳೆಯ ಸಾವಿನ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಕೃತ್ಯ ಎಸಗಿದ ಆರೋಪಿ ಅಪ್ರಾಪ್ತ ಬಾಲಕನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಮೃತ ಮಹಿಳೆ. ಅವರ ಅಕ್ಕನ ಮಗನೇ ಕೊಲೆ ಆರೋಪಿಯಾಗಿದ್ದಾನೆ. ಜೂನ್ 16ರ ತಡರಾತ್ರಿ ಹೇಮಾವತಿ ಅವರು ಮನೆಯ ಕೋಣೆಯಲ್ಲಿ ಮಲಗಿದ್ದ ವೇಳೆ ಅವರ ಅಕ್ಕನ ಮಗ, ಹತ್ತನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ […]

ಬಹುನಿರೀಕ್ಷಿತ “ಆರಾಟ” ಕನ್ನಡ ಚಿತ್ರ ಜೂನ್ 21ರಂದು ತೆರೆಗೆ!

Wednesday, June 19th, 2024
Arata

ಮಂಗಳೂರು: “ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ […]

ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅರೋಗ್ಯ ಅಧಿಕಾರಿ ಶವ ಪತ್ತೆ

Wednesday, June 19th, 2024
ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅರೋಗ್ಯ ಅಧಿಕಾರಿ ಶವ ಪತ್ತೆ

ಮಂಜೇಶ್ವರ : ಎರಡು ತಿಂಗಳ ಹಿಂದೆ ಮಂಜೇಶ್ವರದಲ್ಲಿ ಕರ್ತವ್ಯ ವಹಿಸಿಕೊಂಡಿದ್ದ ಅರೋಗ್ಯ ಅಧಿಕಾರಿಯೋರ್ವರು ತಮ್ಮ ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ. ಮೃತಪಟ್ಟವರು ಪತ್ತನಂತ್ತಿಟ್ಟದ ಮನೋಜ್ (45). ಅವರು ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದರು. ಮಂಜೇಶ್ವರ ಎಸ್ ಐ ಟಿ ಶಾಲಾ ಸಮೀಪದ ವಸತಿ ಗೃಹ ದಲ್ಲಿ ವಾಸವಾಗಿದ್ದರು ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಬ್ಬರು […]