ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿ

Sunday, September 29th, 2024
chaitra-kundapura

ಮಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಟಿಕೆಟ್ ಕೊಡಿಸುತ್ತೇವೆ ಎಂದು ಹೇಳಿ ತನ್ನ ಸಹವರ್ತಿಗಳೊಂದಿಗೆ ಕೋಟಿ ಕೋಟಿ ವಸೂಲಿ ಮಾಡಿದ್ದರು ಎಂಬ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಲಿದ್ದಾರಂತೆ. ಕರಾವಳಿಯಲ್ಲಿ ಕೇಳಿ ಬಂದ ಲವ್ ಜಿಹಾದ್ ಪ್ರಕರಣಗಳ ವಿರುದ್ಧ ಚೈತ್ರಾ ಕುಂದಾಪುರ ಹೋರಾಡಿದ್ದರು. ಚೈತ್ರಾ ಕುಂದಾಪುರ ಬರೆದ ‘ಪ್ರೇಮಪಾಶ’ ಕೃತಿ […]

ಗ್ಯಾರೇಜ್ ಗೆ ತೆರಳುತ್ತಿದ್ದಾಗಲೇ ಬಿಎಂಡಬ್ಲ್ಯು ಕಾರ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲು

Sunday, September 29th, 2024
BMW-car-fire

ಮಂಗಳೂರು : ಬಿಎಂಡಬ್ಲ್ಯು ಕಾರೊಂದು ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಬೆಂಕಿ ಅನಾಹುತಕ್ಕೆ ಗುರುದೀಪ್ ಎಂಬವರ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ […]

ಮಂಗಳೂರು ಕೋರ್ಟ್ ಆವರಣದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ

Saturday, September 28th, 2024
swachata e seva

ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ.. ಮಂಗಳೂರು ವತಿಯಿಂದ, ಜಿಲ್ಲಾ ನ್ಯಾಯಾಂಗ ಇಲಾಖೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಮಂಗಳೂರು ಹಾಗೂ ನ್ಯಾಯಾವಾಧಿಗಳ ಸಂಘ ಮಂಗಳೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದು ಸ್ವಚ್ಚತಾ ಹಿ ಸೇವಾ ಅಭಿಯಾನವನ್ನು” ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ., ಮಂಗಳೂರಿನ ಪ್ರಭಾರ ಅಧ್ಯಕ್ಷರು ಹಾಗೂ ಗೌರವಾನ್ವಿತ 1 ನೇ […]

ಮನೆಯಲ್ಲಿ ಧಾರ್ಮಿಕ ಸಂಸ್ಕಾರಕ್ಕೆ ಪೂರಕ ಭಜನೆ : ಹೇಮಾವತಿ ವೀ. ಹೆಗ್ಗಡೆ

Saturday, September 28th, 2024
Bhajana-Kammata

ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾಕಮ್ಮಟದ 7ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಮಕೃಷ್ಣ ಕಾಟುಕುಕ್ಕೆ, ಗಾಯಕರು ಕಾಸರಗೋಡು ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜನೀಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಡಿ. ಸುರೇಂದ್ರ ಕುಮಾರ್‌ರವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಮನೆಯಲ್ಲಿ ಧಾರ್ಮಿಕ ಸಂಸ್ಕಾರಕ್ಕೆ ಪೂರಕ ಭಜನೆ : ನಮ್ಮ ಆತ್ಮಸಾಕ್ಷಿಯೇ ನಮಗೆ ದೇವರಾಗಿದ್ದು ಆತ್ಮಸಾಕ್ಷಿಗೆ […]

ಸರಕಾರಿ ಶಾಲೆಯ ವಿದ್ಯಾರ್ಥಿನಿ ಮೃತದೇಹ ಬಾವಿಯಲ್ಲಿ ಪತ್ತೆ

Saturday, September 28th, 2024
Ashwati

ಕಾಸರಗೋಡು : ವಿದ್ಯಾರ್ಥಿನಿಯೋರ್ವಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕದಲ್ಲಿ ಗುರುವಾರ ಸಂಜೆ ನಡೆದಿದೆ. ಬೇಡಡ್ಕದ ಅಶ್ವತಿ ( 17) ಮೃತಪಟ್ಟವಳು. ಮನೆ ಸಮೀಪದ ಬಾವಿಯಲ್ಲಿ ಗುರುವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈಕೆ ಕುಂಡಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಗುರುವಾರ ಬೆಳಿಗ್ಗೆ ಶಾಲೆಗೆ ತೆರಳಿದ್ದ ಈಕೆ ನಾಪತ್ತೆಯಾಗಿದ್ದಳು . ಸಂಜೆ ಯಾದರೂ ಮನೆಗೆ ಬರದೆ ಇದ್ದುದರಿಂದ ಮನೆಯವರು ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಮನೆಯವರು ಶೋಧ ನಡೆಸಿದಾಗ ಮನೆ […]

‘ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ’ : ಡಾ. ಡಿ. ವೀರೇಂದ್ರ ಹೆಗ್ಗಡೆ

Friday, September 27th, 2024
Veerendra-Hegde

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆಯು ಶ್ರೀಕ್ಷೇತ್ರದ ವಸಂತ ಮಹಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ಶ್ರೀ ವೀರೇಂದ್ರ ಹೆಗ್ಗಡೆಯವರು ಮಾತನಾಡಿ ‘ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ’ ಎಂದು ಹೇಳಿದರು. ಮಕ್ಕಳಿಗೆ ಭಜನಾ ಸಂಸ್ಕಾರ ಕಲಿಸಿಕೊಡಲಾಗುತ್ತದೆ. ಭಜನೆಯ ಜೊತೆಗೆ ಶ್ಲೋಕಗಳು, ವಚನಗಳನ್ನು ಮುಂದಿನ ತಲೆಮಾರಿಗೆ ಕಲಿಸಬೇಕಾಗಿದೆ. ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸÀಬೇಕಾಗಿದೆ. ಮದುವೆಯ ಮುಂಚಿನ ದಿನ ಭಜನಾ […]

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೇ ಪರೀಕ್ಷಾ ಕೇಂದ್ರಗಳ ಸಮೀಪ ನಿಷೇಧಾಜ್ಞೆ

Friday, September 27th, 2024
Prohibition order

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 29ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕನ್ನಡ ಭಾಷೆ ಪರೀಕ್ಷೆ-2024ರ ಪರೀಕ್ಷೆಗಳು ನಡೆಯಲಿರುವ 22 ಪರೀಕ್ಷಾ ಕೆಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ 22 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ, ಉಪ ಪೊಲೀಸು ಆಯುಕ್ತ ಮತ್ತು ವಿಶೇಷ ಕಾರ್ಯ […]

ಪಿಸಿಯೋಥೆರಪಿ ಚಿಕಿತ್ಸೆಗೆ ತಂತ್ರಜ್ಞಾನದ ಕೊಡುಗೆ ಗಮನಾರ್ಹ” : ತೆಲಂಗಾಣ ಸಚಿವ ಡಿ. ಶ್ರೀಧರ್ ಬಾಬು

Friday, September 27th, 2024
AJ-Hospital

ಮಂಗಳೂರು: “ಎಜೆ ಆಸ್ಪತ್ರೆಯ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್ ”ಕಾನ್ಫ್ಲುಯೆನ್ಸ್-2024“ ಅನ್ನು ತೆಲಂಗಾಣ ಕೈಗಾರಿಕಾ ಹಾಗೂ ವಾಣಿಜ್ಯ ಸಚಿವ ಡಿ.ಶ್ರೀಧರ್ ಬಾಬು ಅವರು ಶುಕ್ರವಾರ ಉದ್ಘಾಟಿಸಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಅವರು, “ಎಜೆ ಪಿಸಿಯೋಥೆರಪಿ ಕೇಂದ್ರವು 30 ವರ್ಷಗಳ ಸಾರ್ಥಕ ಸೇವೆಯನ್ನು ಸಮಾಜಕ್ಕೆ ನೀಡುತ್ತಾ ಬಂದಿದೆ. ಇದಕ್ಕಾಗಿ ಸ್ಥಾಪಕರಾದ ಎ.ಜೆ. ಶೆಟ್ಟಿ ಅವರನ್ನು ಅಭಿನಂದಿಸುತ್ತೇನೆ. ದೇಶದ ಬೇರೆ ಬೇರೆ ಭಾಗಗಳಿಂದ […]

ಕಾರ್ಕಳ ಮತ್ತು ಹೆಬ್ರಿ ತಾಲೂಕಿನ 7911 ಪಡಿತರ ಚೀಟಿ ರದ್ದತಿ : ಬಡ ಜನರಿಗೆ ಕಾಂಗ್ರೆಸ್‌ ಸರ್ಕಾರ ದ್ರೋಹ

Thursday, September 26th, 2024
BPL-card

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿನಿಂದ ಒಂದಲ್ಲ ಒಂದು ರೀತಿಯಲ್ಲಿ ವಿವಾದವನ್ನೇ ಮಾಡಿಕೊಂಡು ಬರುತಿದ್ದು, ಇದೀಗ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡುವ ಮೂಲಕ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿರುವುದು ವಿಷಾದನೀಯ. ಸರ್ಕಾರವು ಕಾರ್ಕಳ ಮತ್ತು ಹೆಬ್ರಿ ತಾಲೂಕಿನ 7911 ಪಡಿತರ ಚೀಟಿ ರದ್ದತಿಗೆ ಮುಂದಾಗಿದ್ದು, ಕಾರ್ಕಳ ಭಾರತೀಯ ಜನತಾ ಪಾರ್ಟಿಯು, ಬಡವರಿಗೆ ಅನ್ಯಾಯ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿಲುವನ್ನು ಖಡಾ ಖಂಡಿತವಾಗಿ ಖಂಡಿಸುತ್ತದೆ. ಒಂದು ಕಡೆಯಿಂದ ರಾಜ್ಯದ ಜನತೆಗೆ ಸರಿಯಾಗಿ […]

ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ : ಜಿಲ್ಲಾಧಿಕಾರಿ

Thursday, September 26th, 2024
Dasara-sports

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಮಂಗಳ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು […]