ಪಾವೂರು ಮರಳುಗಾರಿಕೆಯನ್ನು ನಿಯಂತ್ರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿ
Thursday, December 10th, 2015ಮಂಗಳೂರು : ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನಾ ಧರಣಿಯನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಜಿಲ್ಲಾಡಳಿತದ ನಿಯಮಗಳನ್ನು ಗಾಳಿಗೆ ತೂರಿ ಮರಳುಗಾರಿಕೆ ನಡೆಯುತ್ತಿದ್ದು ಇದನ್ನು ಕಡಿವಾಣ ಹಾಕಲು ಜಿಲ್ಲಾಡಳಿತಕ್ಕೆ ಏಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದರು. ಜಿಲ್ಲೆಯ ಜನಪ್ರತಿನಿಧಿಗಳ ಹಿಂಬಾಲಕರು ಮರಳುಗಾರಿಕೆಯನ್ನು ನಡೆಸುತ್ತಿದ್ದು […]