ಪಾಲಡ್ಕದಲ್ಲಿ ರಾಯೀರಾಜಕುಮಾರರಿಂದ ನಾಣ್ಯ ಸಂಗ್ರಹಣೆಯ ಮಾಹಿತಿಕಾರ್ಯಾಗಾರ

Friday, August 14th, 2015
coin collection

ಮೂಡುಬಿದಿರೆ: ಇಲ್ಲಿಗೆ ಸಮೀಪದ ಪಾಲಡ್ಕದ ಪೂಪಾಡಿಕಲ್ಲು ಶ್ರೀ ನಾರಾಯಣಗುರು ಸಭಾ ಭವನದಲ್ಲಿ ನಡೆಯುತ್ತಿರುವ ಮೂಡುಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್‌ಕಾಲೇಜಿನರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ದ್ವಿತೀಯ ದಿನವಾದ ಅಗೋಸ್ತು 12 ರಂದು ಶೈಕ್ಷಣಿಕಕಾರ್ಯಕ್ರಮದಲ್ಲಿ ಮೂಡುಬಿದಿರೆಜೈನ ಪ್ರೌಢಶಾಲೆಯ ಶಿಕ್ಷಕ, ಸಂಪನ್ಮೂಲ ವ್ಯಕ್ತಿರಾಯೀರಾಜಕುಮಾರರು ನಾಣ್ಯ ಸಂಗ್ರಹದ ಪ್ರಾತ್ಯಕ್ಷಿಕೆ-ಮಾಹಿತಿಕಾರ್ಯಾಗಾರವನ್ನು ನಡೆಸಿಕೊಟ್ಟರು. ತಮ್ಮ ೨೨೫ ನೇ ಕಾರ್ಯಾಗಾರದಲ್ಲಿಅವರು ವಿವಿಧ ಹವ್ಯಾಸಗಳ ಬಗೆಗೆ ತಿಳಿಸಿ ಕೆಟ್ಟ ಚಟಗಳಿಂದ ದೂರವಿಡುವಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಅಭಿವೃದ್ಧಿ ಪಡಿಸಿಕೊಳ್ಳುವದರೊಂದಿಗೆ ಜೀವನವನ್ನು ಮೇರು ಮಟ್ಟಕ್ಕೆಕೊಂಡೊಯ್ಯಬಹುದೆಂದರು.ನಮ್ಮದೇಶದ ಹಾಗೂ ವಿವಿಧ ದೇಶಗಳ […]

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Friday, August 14th, 2015
Rud Shed

ಉಜಿರೆ : ಗ್ರಾಮೀಣ ಪ್ರದೇಶದ ಆರ್ಥಿಕ ಪ್ರಗತಿಯಿಂದ ದೇಶದ ಆರ್ಥಿಕ ಪ್ರಗತಿ ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್‌ಸೆಟ್ ಸಂಸ್ಥೆಗಳ) ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್‌ನ ಆಡಳಿತ ನಿರ್ದೇಶಕ ಪಿ.ಎಸ್. ರಾವತ್ ಹೇಳಿದರು. ಧರ್ಮಸ್ಥಳದಲ್ಲ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಗುರುವಾರ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. […]

ಆಗಸ್ಟ್ 14ರಂದು ಸೂಪರ್ ಮರ್ಮಯೆ ತೆರೆಗೆ

Thursday, August 13th, 2015
super marmaye

ಮಂಗಳೂರು: ಆನಂದ್ ಫಿಲಂಸ್ ಲಾಂಛನದಲ್ಲಿ ಅಡ್ಯಾರ್ ಮಾಧವ ನಾಯ್ಕ್ ನಿರ್ಮಿಸುತ್ತಿರುವ ರಾಮ್‌ಶೆಟ್ಟಿ ನಿರ್ಮಾಣ ನಿರ್ದೇಶನದಲ್ಲಿ ತಯಾರಾದ ಸೂಪರ್ ಮರ್ಮಯೆ ತುಳುಚಲನ ಚಿತ್ರ ಆಗೋಸ್ಟ್ 14ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ 10ಥಿಯೇಟರ್‌ಗಳಲ್ಲಿ ತೆರೆಕಾಣಲಿದೆ. ಮಂಗಳೂರಿನಲ್ಲಿ ಜ್ಯೋತಿ, ಬಿಗ್ ಸಿನೆಮಾಸ್, ಸಿನಿಪೊಲಿಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ, ಮೂಡಬಿದರೆಯಲ್ಲಿ ಅಮರ ಶ್ರೀ, ಕಾರ್ಕಳದಲ್ಲಿ ರಾಧಿಕಾ, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್ ಹಾಗೂ ಬಿ.ಸಿ.ರೋಡ್‌ನಲ್ಲಿ ನಕ್ಷತ್ರದಲ್ಲಿ ಬಿಡುಗಡೆಗೊಳ್ಳಲಿದೆ. ತುಳುವರು ಏನಿದ್ದರೂ ಹಾಸ್ಯದ ಆಟ್ರಾಕ್ಷನ್ ಎಂಬುದು ಮನದಟ್ಟಾಗಿರುವುದರಿಂದ ಸೂಪರ್ ಮರ್ಮಯೆ ಎಂಬ ಹೆಸರಿನಲ್ಲಿ […]

ರೈತರ ಸಾಲ ಮರುಪಾವತಿ -ಅವಧಿ ವಿಸ್ತರಣೆಗೆ ಮನವಿ ಸಲ್ಲಿಸಿ: ಎ.ಬಿ.ಇಬ್ರಾಹಿಂ

Thursday, August 13th, 2015
Farmers Meeting

ಮಂಗಳೂರು : ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲ ಮರುಪಾವತಿ ಅವಧಿ ಮುಗಿದಿದ್ದರೆ ಅಂತಹ ರೈತರು ತಮ್ಮ ಸಾಲದ ಅವಧಿಯನ್ನು ವಿಸ್ತರಿಸುವಂತೆ/ಸಾಲ ಮರುಹೊಂದಾಣಿಕೆ ಮಾಡಿಕೊಳ್ಳಲು ಸಂಬಂಧಿಸಿದ ಬ್ಯಾಂಕುಗಳಿಗೆ /ಸಹಕಾರ ಸಂಘಗಳಿಗೆ ಕೋರಿಕೆ ಪತ್ರಗಳನ್ನು ಸಲ್ಲಿಸಿದಲ್ಲಿ ಸಂಬಂಧಿಸಿದ ಹಣಕಾಸು ಸಂಸ್ಥೆಗಳು ಸಾಲಮರುಪಾವತಿಗೆ ರೈತರಿಗೆ ನೋಟೀಸ್‌ಗಳನ್ನು ನೀಡದಂತೆ ಬಲವಂತದ ಸಾಲ ವಸೂಲಿಗೆ ಮುಂದಾಗದಂತೆ ತಡೆಯಬಹುದೆಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ರೈತರಿಗೆ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಚೇರಿಯಲ್ಲಿ ರೈತ ಮುಖಂಡರೊಂದಿಗೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು. […]

ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

Thursday, August 13th, 2015
Besant

ಮಂಗಳೂರು : ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ ಅಗೋಸ್ಟ್ 5 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಾನಸಿಕ ಆರೋಗ್ಯ ವಿಭಾಗದ ಡಾ.ಸುಪ್ರಿಯಾ ಹೆಗ್ಡೆ ಅರೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸಭೆಯಲ್ಲಿ ಭಾಗವಹಿಸಿದ ಪೋಷಕರನ್ನು ಹಾಗೂ ರಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಮಕ್ಕಳು ತಂದೆ ತಾಯಿಯರಲ್ಲಿ ಏನಾದರೂ ವಿಷಯವನ್ನು ಹಂಚಿಕೊಳ್ಳಲು ಬಯಸಿದಾಗ ಅವರು ಕಿವಿಗೊಡುವುದೇ ಅಲ್ಲದೆ ದಿನ ನಿತ್ಯದ ಕೆಲಸಗಳನ್ನು ಮಾಡುವಾಗ ತಮ್ಮೊಂದಿಗೆ ಮಕ್ಕಳನ್ನು ಸೇರಿಸಿಕೊಳ್ಳುವುದರಿಂದ ವಿಶ್ವಾಸ ವೃದ್ಧಿಗೊಳ್ಳುವುದು […]

ರೋಟರಿಯವರಿಂದ ಅಭಿನಂದನಾರ್ಹ ಸೇವೆ ಶ್ರೀ. ಯೋಗೀಶ್ ಭಟ್

Thursday, August 13th, 2015
Rotary Bejai

ಮಂಗಳೂರು : ದ.ಕ.ಜಿ.ಪಂ. ಹಿ.ಪ್ರಾ ಶಾಲೆ ಕಾಪಿಕಾಡು ಶಾಲೆಗೆ ಸಂಪೂರ್ಣ ಸುಣ್ಣ ಬಣ್ಣ ಬಳಿದು (ಪೈಂಟಿಂಗ್) ಶಾಲೆಯ ಸುತ್ತಮುತ್ತ ಬೆಳೆದಂತಹ ಹುಲ್ಲು ಮತ್ತು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿ ಶಾಲೆಯ ಅಂದವನ್ನು ಹೆಚ್ಚಿಸುವಲ್ಲಿ ಸುಮಾರು ರೂ. 1,50,000.00 ವರೆಗೆ ವೆಚ್ಛ ಮಾಡಿದ ಕುರಿತು ಸೇವೆಯನ್ನು ಗುರುತಿಸಿ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರಿಂದ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್‌ನ ಅಧ್ಯಕ್ಷರಾದ ಶ್ರೀ. ಇಲಿಯಾಸ್ ಸಾಂಟಿಸ್ ಇವರನ್ನು ಅಭಿನಂದಿಸಲಾಯಿತು. ಸಭೆಯ ಮುಖ್ಯ ಅತಿಥಿಯಾಗಿ ಮಾಜಿ ಶಾಸಕರಾದ ಶ್ರೀ. ಎನ್. […]

ಉತ್ತಮ ಪುಸ್ತಕಗಳನ್ನು ಓದುವುದರಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ

Thursday, August 13th, 2015
Bansal

ಧರ್ಮಸ್ಥಳ : ಬಿಂದುವಿನಲ್ಲಿ ಸಿಂಧುವನ್ನು ತುಂಬಿರುವ ನೈತಿಕ ಪುಸ್ತಕಗಳು ಆದರ್ಶ ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರೇರಣೆ ಮತ್ತು ಮಾರ್ಗದರ್ಶನ ನೀಡುತ್ತವೆ. ಇಂತಹ ಉತ್ತಮ ಪುಸ್ತಕಗಳನ್ನು ಓದಿ ಅದರಲ್ಲಿರುವ ನೀತಿ-ನಿಯಮಗಳನ್ನು ಜೀವನದಲ್ಲಿ ಅನುಸರಿಸುವುದರಿಂದ ನಮ್ಮ ಉಜ್ವಲ ಭವವಿಷ್ಯವನ್ನು ರೂಪಿಸಿಕೊಳ್ಳಬಹುದು. ಉತ್ತಮ ಪುಸ್ತಕಗಳನ್ನು ಓದುವುದರಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಕಾರ್ಪೋರೇಶನ್ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರಾದ ಎಸ್.ಆರ್, ಬನ್ಸಾಲ್ ಹೇಳಿದರು. ಧರ್ಮಸ್ಥಳದಲ್ಲಿ ಬುಧವಾರ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಲಾದ ಜ್ಞಾನ ಸಿಂಧು […]

‘ಚಾಲಿಪೋಲಿಲು’ ಉತ್ತಮ ಸಂದೇಶ ಸಾರುವ ಚಿತ್ರ: ಡಾ. ಡಿ. ವೀರೇಂದ್ರ ಹೆಗ್ಗಡೆ

Wednesday, August 12th, 2015
v.heggade chali polilu

ಮಂಗಳೂರು: ’ಚಾಲಿಪೋಲಿಲು’ ಉತ್ತಮ ಸಂದೇಶ ಸಾರುವ ಚಿತ್ರವಾಗಿದ್ದು ಮನೋರಂಜನೆಯ ಜೊತೆಗೆ ಸಾಕಷ್ಟು ಕುತೂಹಲ ಮೂಡಿಸುತ್ತದೆ. ಉತ್ತಮ ಕಥಾ ಹಂದರವನ್ನೊಳಗೊಂಡ ಈ ಚಿತ್ರ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವಾದ ಅಂಶಗಳನ್ನು ಒಳಗೊಂಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಿಸಿದ್ದಾರೆ. ಅವರು ನಗರದ ಪಾಂಡೇಶ್ವರದ ಫಾರಂ ಫಿಜ್ಜಾ ಮಾಲ್‌ನಲ್ಲಿರುವ ಪಿವಿಆರ್ ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರದಲ್ಲಿ ಚಾಲಿಪೋಲಿಲು ತುಳು ಚಿತ್ರವನ್ನು ತನ್ನ ಕುಟುಂಬಿಕರ ಜೊತೆಯಲ್ಲಿ ವೀಕ್ಷಿಸಿ ತನ್ನ ಅಭಿಪ್ರಾಯವನ್ನು ಮಾಧ್ಯಮದ ಮುಂದೆ ಹಂಚಿಕೊಂಡರು. ಸಾಮಾನ್ಯವಾಗಿ ಬಹುತೇಕ ಸಿನಿಮಾಗಳಲ್ಲಿ […]

ಜನಪರ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಜಿ.ಪಂ. ಅಧ್ಯಕ್ಷರ ಸೂಚನೆ

Wednesday, August 12th, 2015
KDP

ಮಂಗಳೂರು :-ಸಮಾಜದಲ್ಲಿನ ಅಸಮಾನತೆ ಮೇಲು ಕೀಳು ಭಾವನೆಗಳನ್ನು ಹೊಗಲಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಸಂಬಂಧಿಸಿದ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮುತುವರ್ಜಿ ವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ ಸಭೆ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲಿಸಿದರು. ಜನಪ್ರತಿನಿಧಿಗಳು ಇಂದು ಒಬ್ಬರು ನಾಳೆ ಮತ್ತೊಬ್ಬರು ಬರುತ್ತಾರೆ. ಆದರೆ ಅಧಿಕಾರಿಗಳು ಎಲ್ಲಾ […]

ಮಂಗಳೂರು ಪ್ರೆಸ್ ಕ್ಲಬ್ಬಿಗೆ ನೂತನ ಸಮಿತಿ

Wednesday, August 12th, 2015
Ronald Balepuni

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‌ನ 2015-18 ನೇ ಸಾಲಿನ ನೂತನ ಅಧ್ಯಕ್ಷರಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಚುನಾಯಿತರಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಕಾರ್ಯದರ್ಶಿಯಾಗಿ ಆಗ್ನೆಲ್ ರೋಡ್ರಿಗಸ್,ಕೋಶಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ರಾವ್ ಮತ್ತು ಆಂತರಿಕ ಲೆಕ್ಕ ಪರಿಶೋಧಕರಾಗಿ ಸುರೇಶ್ ಬೆಳಗಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಮಕೃಷ್ಣ ಆರ್, ಕಿರಣ್ ಯು ಸಿರ್ಸಿಕರ್, ಮುಹಮ್ಮದ್ ಆರೀಫ್, ಇಬ್ರಾಹಿಂ ಅಡ್ಕಸ್ಥಳ, ಆತ್ಮ ಭೂಷಣ್, ರಾಜೇಶ್ ಶೆಟ್ಟಿ […]