ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು
Saturday, March 8th, 2014ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ಸಿನ ಘೋಷಿತ ಅಭ್ಯರ್ಥಿ ನಂದನ್ ನಿಲೇಕಣಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಸದ್ಯಕ್ಕೆ ‘ಆಧಾರ್’ ಯೋಜನೆಯ ಅಧ್ಯಕ್ಷರಾಗಿರುವ ನಂದನ್ ನಿಲೇಕಣಿ ಅವರು ತಮ್ಮ ಅಧಿಕಾರ ಸ್ಥಾನವನ್ನು ದುರುಪಯೋಗ ಮಾಡಿಕೊಂಡು ಕೇಂದ್ರದ ಆಧಾರ್ ಸರಕಾರಿ ಯೋಜನೆಯನ್ನು ತಮ್ಮ ಸ್ವಂತ ಕಾರ್ಯಕ್ರಮದಂತೆ ಕ್ಷೇತ್ರದಾದ್ಯಂತ ಬಿಂಬಿಸಿಕೊಳ್ಳುತ್ತಿದ್ದಾರೆ. ಇದರಿಂದ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ದೂರಿನಲ್ಲಿ ಬಿಜೆಪಿ ಗಮನ ಸೆಳೆದಿದೆ. ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು ಮಾರ್ಚ್ 5ರಿಂದ ದೇಶಾದ್ಯಂತ […]