ಸಿಐಎಸ್‍ಎಫ್ ಸಿಬ್ಬಂದಿ ಗುಂಡು ಹಾರಿಸಿ ಆತ್ಮಹತ್ಯೆ

Monday, February 24th, 2014
Sandeep-Sarkate

ಸುರತ್ಕಲ್ : ಸಿಐಎಸ್‍ಎಫ್ ಸಿಬ್ಬಂದಿಯೊಬ್ಬ ತನ್ನ ಸರ್ವಿಸ್ ರೈಫಲ್‍ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ಪಣಂಬೂರು ಸಿಐಎಸ್‍ಎಫ್ ಕ್ಯಾಂಪ್‍ನಲ್ಲಿ ಸಂಭವಿಸಿದೆ. ಮಹಾರಾಷ್ಟ್ರ ನಿವಾಸಿ ಸಂದೀಪ್ ಸರ್ಕಟೆ (26) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಕೇವಲ ಎರಡು ವರುಷದ ಹಿಂದೆಯಷ್ಟೇ ಸಿಐಎಸ್‍ಎಫ್‍ಗೆ ಸೇರ್ಪಡೆಗೊಂಡಿದ್ದ ಸಂದೀಪ್ ಆರಂಭದಿಂದಲೂ ಪಣಂಬೂರು ವಿಭಾಗದಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ ಇವರು ರಾತ್ರಿ ಪಾಳಿಯ ಕೆಲಸವನ್ನು ನಿರ್ವಹಿಸುತ್ತಿದ್ದು ತಡರಾತ್ರಿ 1.20ರ ಸುಮಾರಿಗೆ ತಮ್ಮ ಕಚೇರಿಯ ಹಿಂಭಾಗಕ್ಕೆ ತೆರಳಿ ಸರ್ವಿಸ್ ರೈಫಲ್‍ನಿಂದ ತಲೆಗೆ ಗುಂಡು […]

ಅಂಬಿ ಚನ್ನಾಗಿದ್ದಾರೆ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ: ಸುಮಲತ

Monday, February 24th, 2014
ಅಂಬಿ ಚನ್ನಾಗಿದ್ದಾರೆ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ: ಸುಮಲತ

ಬೆಂಗಳೂರು: ಅಂಬರೀಶ್ ಅವರು ಚನ್ನಾಗಿದ್ದಾರೆ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅಂಬಿ ಧರ್ಮಪತ್ನಿ ಸುಮಲತ ಅಂಬರೀಶ್ ಅವರು ಭಾನುವಾರ ತಿಳಿಸಿದ್ದಾರೆ. ಅಂಬರೀಶ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಅಂಬಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಅಲ್ಲದೆ ಅಂಬಿ ಅವರ ಆರೋಗ್ಯ  ಕುರಿತಾಗಿ ನಿಖರ ಮಾಹಿತಿ ಸಿಗದೇ ಅಭಿಮಾನಿಗಳು ಕಂಗಾಲಾಗಿದ್ದರು. ಈ ಹಿನ್ನೆಲೆಯಲ್ಲಿ ಸುಮಲತ ಅವರು ಸುದ್ದಿಗೋಷ್ಠಿ ನಡೆಸಿ, ಅಂಬರೀಶ್ ಅವರು ಚನ್ನಾಗಿದ್ದಾರೆ. ಅವರಿಗೆ ಯಾವುದೇ ತೊಂದರೆ ಇಲ್ಲ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. […]

ಲೋಕಾ ವ್ಯಾಪ್ತಿಗೆ ಮುಖ್ಯಮಂತ್ರಿ ಸಂಪುಟ ಸದಸ್ಯರು

Saturday, February 22nd, 2014
Siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೋಕಪಾಲ ಕಾಯಿದೆ ಹಿನ್ನೆಲೆಯಲ್ಲಿ ರಾಜ್ಯದ ಲೋಕಾಯುಕ್ತ ಕಾಯ್ದೆಯನ್ನು ಬಲಪಡಿಸುವ ವಿಧೇಯಕವನ್ನು ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಮಹತ್ವದ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಹೊಸ ಕಾನೂನಿನ ಪ್ರಕಾರ ಮುಖ್ಯಮಂತ್ರಿ ಕಚೇರಿಯನ್ನೂ ಲೋಕಾಯುಕ್ತ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ, ಸಂಪುಟದ ಇತರೆ ಎಲ್ಲ ಸದಸ್ಯರು, ಮುಖ್ಯ ಕಾರ್ಯದರ್ಶಿಯನ್ನು […]

ವಿಭಜನೆ ಜತೆಗೆ ಆಂಧ್ರಕ್ಕೆ ಕೇಂದ್ರಾಡಳಿತದ ನೆರಳು

Saturday, February 22nd, 2014
Jairam-Ramesh

ನವದೆಹಲಿ: ಒಂದು ಕಡೆ ಆಂಧ್ರ ವಿಭಜನೆ ಪ್ರಕ್ರಿಯೆ ಆರಂಭವಾಗಿದ್ದರೆ, ಇನ್ನೊಂದೆಡೆ  ರಾಷ್ಟ್ರಪತಿ ಆಳ್ವಿಕೆಗೆ ಕ್ಷಣಗಣನೆ ಆರಂಭವಾಗಿದೆ. ತೆಲಂಗಾಣ ಮಸೂದೆಗೆ ರಾಜ್ಯಸಭೆಯಿಂದಲೂ ಅನುಮೋದನೆ ಸಿಕ್ಕ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಂಧ್ರವಿಭಜನೆ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದೆ. ನಾಗರಿಕ ಸೇವಾ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಹಂಚಿಕೆಗೆ ಸಂಬಂಧಿಸಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ. ಇವುಗಳಲ್ಲಿ ಒಂದು ಸಮಿತಿ ಅಖಿಲ ಭಾರತ ಸೇವೆಗಳ ಅಡಿ ಬರುವ ಅಧಿಕಾರಿಗಳನ್ನು ಹಂಚಿಕೆ ಮಾಡಿದರೆ ಇನ್ನೊಂದು ಸಮಿತಿ ರಾಜ್ಯಮಟ್ಟದ […]

ಇಂದು-ನಾಳೆ ಬೀಚ್, ಆಹಾರ ಉತ್ಸವ

Saturday, February 22nd, 2014
AB-Ibrahim

ಮಂಗಳೂರು: ಕರಾವಳಿ ಉತ್ಸವ ಅಂಗವಾಗಿ ಫೆ.22, 23ರಂದು ಪಣಂಬೂರ್‌ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಈ ಸಂದರ್ಭ ಆಹಾರೋತ್ಸವ, ಗಾಳಿ ಪಟ ಉತ್ಸವ, ಆಟೋಟ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಫೆ.22ರಂದು ಸಂಜೆ 3 ಗಂಟೆಯಿಂದ ಬೀಚ್ ಮತ್ತು ಆಹಾರೋತ್ಸವ, ಟೀಮ್ ಮಂಗಳೂರು ವತಿಯಿಂದ ಗಾಳಿಪಟ ಪ್ರದರ್ಶನ, ಸಂಜೆ. 3.30ರಿಂದ ಮೂರು ವರ್ಷ ಒಳಗಿನ ಮಕ್ಕಳಿಗೆ ಬೀಚ್ ಪ್ರಿನ್ಸ್ ಮತ್ತು ಪ್ರಿನ್ಸೆಸ್ ಪ್ರದರ್ಶನ ನಡೆಯಲಿದೆ. ಫೆ.23ರಂದು ಬೀಚ್ ವಾಲಿಬಾಲ್ ಪಂದ್ಯಾಟಗಳು, […]

ಫೆ.25ಕ್ಕೆ ವಾರ್ಷಕ ಕಲಾ ಪ್ರದರ್ಶನ-2014

Saturday, February 22nd, 2014
Karnataka-painting

ಬೆಂಗಳೂರು: ಚಿತ್ರಕಲಾ ಮಹಾವಿದ್ಯಾಲಯ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್‌ನ ಸಹಯೋಗದಲ್ಲಿ ಇದೇ ಫೆಬ್ರುವರಿ 25ರಿಂದ ಮಾರ್ಚ್ 1ರವರೆಗೆ ಒಂದು ವಾರಗಳ ಕಾಲ ವಾರ್ಷಿಕ ಕಲಾ ಪ್ರದರ್ಶನ-2014 ನಡೆಯಲಿದೆ. ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಫೆ.25ರಂದು ನಡೆಯುವ ವಾರ್ಷಿಕ ಕಲಾಪ್ರದರ್ಶನಕ್ಕೆ ಕಲಾ ವಿಮರ್ಶಕ ಸುರೇಶ್ ಜಯರಾಮ್ ಅವರು ಚಾಲನೆ ನೀಡಲಿದ್ದಾರೆ. ಡಾ.ಬಿ.ಎಲ್.ಶಂಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾ ಪ್ರದರ್ಶನದಲ್ಲಿ ಬಿವಿಎ, ಎಂವಿಎ ಮತ್ತು ಪಿಜಿಡಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ ಕಲೆ ಮತ್ತು ಅನ್ವಯ […]

ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

Saturday, February 22nd, 2014
CRPF-jawan

ಮಂಗಳೂರು: ಹೊಟ್ಟೆಗೆ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಎನ್‌ಎಂಪಿಟಿಯಲ್ಲಿ ಶನಿವಾರ ನಡೆದಿದೆ. ಇಂದು ಬೆಳಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ 38 ವರ್ಷದ ಕೆ.ಟಿ ಸಂದೀಪ್ ಸರ್ಕಟೆ ಎಂದು ಗುರುತಿಸಲಾಗಿದೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪಣಂಬೂರ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂಬರೀಷ್ ಆರೋಗ್ಯ ಸ್ಥಿರ

Saturday, February 22nd, 2014
Ambarish

ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಚಿಕಿತ್ಸೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಸತೀಶ್ ನಾಯಕ್ ಅವರು, ಸದ್ಯ ಅಂಬರೀಷ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇನ್ನು ಎರಡು, ಮೂರು ದಿನದಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಅಂಬರೀಷ್ ಅವರಿಗೆ ಈಗ ವೆಂಟಿಲೇಟರ್ ಅಳವಡಿಸಲಾಗಿದ್ದು, ವೆಂಟಿಲೇಟರ್ ಮೂಲಕವೇ […]

ಲೋಕಸಮರ: ಬಿಹಾರ, ಉ.ಪ್ರದೇಶದಲ್ಲಿ ಬಿಜೆಪಿಗೆ ಶೇ.50ರಷ್ಟು ಸ್ಥಾನ

Saturday, February 22nd, 2014
Narendra-Modi

ನವದೆಹಲಿ: ದೇಶಾದ್ಯಂತ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಲೆಯಲ್ಲಿ ತೇಲುತ್ತಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶೇ.50ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖಾಸಗಿ ಸುದ್ದಿ ವಾಹಿನಿ ನಡೆಸಿದ ಚುನಾವಣಾ ಸಮೀಕ್ಷೆ ಹೇಳಿದೆ. ಎಲ್ಲೆಡೆ ಯುಪಿಎ ವಿರೋಧಿ ಮತ್ತು ಮೋದಿ ಪರ ಅಲೆ ಇರುವುದರಿಂದ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಒಟ್ಟು 61 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 40 ಕಡೆ ಗೆಲವು […]

ಲೋಕಸಮರದತ್ತ ನಂದನ್ ಚಿತ್ತ, ‘ಆಧಾರ್‌’ಗೆ ರಾಜಿನಾಮೆ

Friday, February 21st, 2014
Nandan-Nilekani

ನವದೆಹಲಿ: ವಿಶಿಷ್ಟ ಗುರುತಿನ ಪತ್ರ ಪ್ರಾಧಿಕಾರ(ಆಧಾರ್)ದ ಅಧ್ಯಕ್ಷ ಸ್ಥಾನಕ್ಕೆ ನಂದನ್ ನಿಲೇಕಣಿ ಅವರು ರಾಜಿನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದ ನಂದನ್ ನಿಲೇಕಣಿ ಅವರು ಯುಐಡಿಐ (ಆಧಾರ್) ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕರಾಗಿದ್ದ ನಂದನ್ ನಿಲೇಕಣಿ ಅವರನ್ನು 2009ರಲ್ಲಿ ಕೇಂದ್ರದ ಯುಪಿಎ ಸರ್ಕಾರ ‘ಆಧಾರ್‌’ ಯೋಜನೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ನಂತರ ಅವರು ತಮ್ಮ ಇನ್ಫೋಸಿಸ್ ಸಂಸ್ಥೆಯನ್ನು ತೊರೆದಿದ್ದರು. ದೇಶದ ಅತಿದೋಡ್ಡ ಗುರುತಿನ ಚೀಟಿ ಯೋಜನೆಯಾಗಿರುವ ‘ಆಧಾರ್‌’ ಯೋಜನೆ, […]