ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

Wednesday, March 28th, 2012
World Theatre Day

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳವಾರ ಅಕಾಡೆಮಿ ಚಾವಡಿಯಲ್ಲಿ ನಡೆದ ವಿಶ್ವ ರಂಗಭೂಮಿ ದಿನಾಚರಣೆ-ತುಳು ರಂಗಭೂಮಿಯ ಬೆಳವಣಿಗೆ ಕುರಿತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್‌ ವಹಿಸಿದ್ದರು. ಕಲಾವಿದರು ರಾತ್ರಿಯಿಡೀ ನಿದ್ದೆಗೆಟ್ಟು ಪ್ರದರ್ಶನ ನೀಡಿ ಪ್ರೇಕ್ಷಕರನ್ನು ಮನರಂಜಿಸಿ ತಮ್ಮ ಪ್ರತಿಭೆಗೆ ಸರಿಯಾದ ಮಾನ್ಯತೆ ದೊರೆಯದ ಕಾಲವೊಂದಿತ್ತು. ಈಗ ಅದು ಬದಲಾಗಿದೆ ರಂಗಭೂಮಿಯಲ್ಲಿ ಹಲವಾರು ಬದಲಾವಣೆಗಳಾಗಿವೆ, ಕಲಾವಿದರಿಗೆ ಪ್ರತಿಭೆಗೆ ತಕ್ಕ ಪ್ರಾಧಾನ್ಯತೆ ಸಿಕ್ಕುತ್ತಿದೆ ಎಂದು ಅವರು […]

ದಕ್ಷಿಣ ಕನ್ನಡ ಜಿಲ್ಲೆಗೆ 2010 – 11ನೇ ಸಾಲಿನ ನಿರ್ಮಲ ಗ್ರಾಮ ಪ್ರಶಸ್ತಿ

Thursday, March 22nd, 2012
Nirmal Gram Puraskar

ಮಂಗಳೂರು: ದೇಶದ ಪ್ರತಿಷ್ಠೆಯ 2010 – 11ನೇ ಸಾಲಿನ ನಿರ್ಮಲ ಗ್ರಾಮ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಪಾತ್ರವಾಗಿದ್ದು, ಗುರುವಾರ ಹೊಸದಿಲ್ಲಿಯ ವಿಜ್ಞಾನ ಮಂದಿರದಲ್ಲಿ ಜರಗಿದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ದೇವಿ ಪಾಟೀಲ್‌ ಅವರಿಂದ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಭಟ್‌ ಕೆ.ಟಿ. ಪ್ರಶಸ್ತಿ ಸ್ವೀಕರಿಸಿದರು. ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕೆ.ಎನ್‌. ವಿಜಯ ಪ್ರಕಾಶ್‌, ಉಪಾಧ್ಯಕ್ಷೆ ಧನಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು. 2005, ಅ. 2ರಂದು ದ. ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸ್ವತ್ಛತಾ ಆಂದೋಲನಕ್ಕೆ […]

ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ಕೆ.ಜಯಪ್ರಕಾಶ್ ಹೆಗ್ಡೆ ಭಾರಿ ಅಂತರದ ಗೆಲುವು

Wednesday, March 21st, 2012
Jayaprakash Hegde Wins

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು 45,724 ಮತಗಳ ಭರ್ಜರಿ ಅಂತರದೊಂದಿಗೆ ಗೆಲುವು ಸಾಧಿಸುವ ಮೂಲಕ, ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರನ್ನು ಸೋಲಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರು 3,98,723 ಮತಗಳನ್ನು ಪಡೆದರೆ, ಬಿಜೆಪಿಯ ಸುನೀಲ್ ಕುಮಾರ್ 3,52,999 ಮತ ಗಳಿಸಿ ಪರಾಜಯಗೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಭೋಜೇಗೌಡ 72, 080 ಮತ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇಂದು ಬೆಳಿಗ್ಗೆ 8ಗಂಟೆಗೆ ಮತ ಎಣಿಕೆ ಆರಂಭಗೊಂಡಾಗ ಪ್ರಥಮ […]

ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ಶೇ.68.26 ಮತದಾನ

Monday, March 19th, 2012
Udupi Election

ಉಡುಪಿ / ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ರವಿವಾರ ನಡೆದ ಉಪ ಚುನಾವಣೆಯಲ್ಲಿ ಶೇ.68.26 ಮತ ಚಲಾವಣೆಯಾಗಿದೆ. ಕಳೆದ ಬಾರಿ ಇಲ್ಲಿ ಶೇ. 68.47 ಮತದಾನವಾಗಿತ್ತು. 2 ಜಿಲ್ಲೆಗಳ ಒಟ್ಟು 1,630 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆಯಿತು. ಇವುಗಳಲ್ಲಿ ನಕ್ಸಲ್‌ ಪೀಡಿತ ಪ್ರದೇಶವೂ ಸೇರಿದಂತೆ ಅತಿ ಸೂಕ್ಷ್ಮ ಮತಗಟ್ಟೆಗಳು 251, ಸೂಕ್ಷ್ಮ ಮತಗಟ್ಟೆಗಳು 751 ಇದ್ದು ಗಂಭೀರ ಪ್ರಮಾಣದ ಅಹಿತಕರ ಘಟನೆಗಳು ನಡೆದಿಲ್ಲ. ಉಡುಪಿ ಜಿಲ್ಲೆ-ಶೇ. 72.15, ಚಿಕ್ಕಮಗಳೂರು ಜಿಲ್ಲೆ- 64.36. ವಿಧಾನಸಭಾ ಕ್ಷೇತ್ರವಾರು ಮತದಾನ ವಿವರ […]

ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಿಗೆ ಕತ್ತಿಯಿಂದ ಕಡಿದು ಕೊಲೆಯತ್ನ

Friday, March 16th, 2012
Beary Sahitya Parishat New President Attacked

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ರಹೀಂ ಉಚ್ಚಿಲ ಅವರನ್ನು ನಾಲ್ವರು ಮುಸುಕುಧಾರಿಗಳ ತಂಡ ಗುರುವಾರ ಮಧ್ಯಾಹ್ನ ಬ್ಯಾರಿ ಅಕಾಡೆಮಿ ಕಚೇರಿಯಲ್ಲಿ ಕತ್ತಿಯಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ, ಬ್ಯಾರಿ ಅಕಾಡೆಮಿ ಕಚೇರಿಯಲ್ಲಿ ಮಧ್ಯಾಹ್ನ 1.30ರ ವೇಳೆಗೆ ಕಚೇರಿಯ ಚೇಂಬರ್‌ನಲ್ಲಿ ಒಬ್ಬರೇ ಕುಳಿತಿದ್ದ ಸಂದರ್ಭದಲ್ಲಿ ಎರಡು ಮೋಟಾರ್‌ ಸೈಕಲ್‌ಗ‌ಳಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಈ ಕೃತ್ಯ ಎಸಗಿದ್ದಾರೆ. ಈ ಸಂದರ್ಭದಲ್ಲಿ ಹೊರಗೆ ಕಚೇರಿ ಸಹಾಯಕ ಸತೀಶ್‌ ರೈ ಮಾತ್ರ ಇದ್ದರು. ಅಪರಿಚಿತರು […]

ವಿಪತ್ತು ನಿರ್ವಹಣೆಗೆ ಸಜ್ಜಾಗಿ- ಅಮರ್ ನಾರಾಯಣ್

Tuesday, March 13th, 2012
DC-ofice-Coastal

ಮಂಗಳೂರು: ವಿಪತ್ತು ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರೀಯ ಚಂಡಮಾರುತ ಅಪಾಯ ಕಡಿಮೆಗೊಳಿಸುವ ಯೋಜನೆಯಡಿ ಮೂರು ಕರಾವಳಿ ತೀರದ ದಕ್ಷಿಣ ಕನ್ನಡ,ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳನ್ನು ಸೇರಿಸಲಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಕಾರ್ಯದs ಶ್ರೀ ಅಮರ್ ನಾರಾಯಣ್ ಹೇಳಿದರು. ಪರಿಣಾಮಕಾರಿ ಯೋಜನೆಯನ್ನು ತಳಮಟ್ಟದಿಂದ ರೂಪಿಸಬೇಕೆಂಬ ಸದುದ್ದೇಶದಿಂದ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯನ್ನು ಇಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸ ಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿಗಳು, ಮೂರು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಆಯಾಯ […]

ಮಂಗಳೂರು ಪಾಲಿಕೆ : ವಿರೋಧ ಪಕ್ಷಕ್ಕೆ ಮೇಯರ್, ಆಡಳಿತ ಪಕ್ಷಕ್ಕೆ ಉಪಮೇಯರ್

Thursday, March 8th, 2012
Mayor GulZar

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 5ನೇ ಅವಧಿಯ ಕೊನೆಯ ಮೇಯರ್‌ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಗುಲ್ಜಾರ್‌ ಬಾನು ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ, ಪಾಲಿಕೆಯಲ್ಲಿ ಬಹುಮತವಿರುವ ಬಿಜೆಪಿ ಅಭ್ಯರ್ಥಿ ಇದ್ದರೂ ವಿರೋಧ ಪಕ್ಷದ ಅಭ್ಯರ್ಥಿಯೊಬ್ಬರು ಮೇಯರ್ ಆಗಿರುವುದು ಅಚ್ಚರಿ ಮೂಡಿಸಿತು. ರೂಪಾ ಡಿ. ಬಂಗೇರ ಅವರು ಆಡಳಿತ ಪಕ್ಷ ಬಿಜೆಪಿಯ ಮೇಯರ್ ಅಭ್ಯರ್ಥಿಯಾಗಿದ್ದರು. ಅವರು ಮೀಸಲಾತಿಗೆ ಸಂಬಂಧಿಸಿದ ಜಾತಿ ಪ್ರಮಾಣ ಪತ್ರವನ್ನು ಸರಿಯಾಗಿ ಹಾಜರು ಪಡಿಸಿಲ್ಲ ಎಂಬ ನೆಪಯೊಡ್ಡಿ ಅವರ ನಾಮ ಪತ್ರವನ್ನು ತಿರಷ್ಕರಿಸಲಾಯಿತು. ಆಡಳಿತ […]

ಮುಖ್ಯಮಂತ್ರಿಗಳಿಂದ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌ ಪರ ಪ್ರಚಾರ

Tuesday, March 6th, 2012
Cm Udupi

ಉಡುಪಿ: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು  ಜಿಲ್ಲೆಯ ವಿವಿಧೆಡೆ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌  ಪರ ಪ್ರಚಾರ ನಡೆಸಿದರು. ಕಾರ್ಕಳ ಹೊಸ್ಮಾರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಕಾರ್ಕಳ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.  ಮುಖ್ಯಮಂತ್ರಿಗಳೊಂದಿಗೆ ವಿಧಾನಸಭಾ ಡೆಪ್ಯುಟಿ ಸ್ಪೀಕರ್‌ ಯೋಗೀಶ ಭಟ್‌, ಅಭ್ಯರ್ಥಿ ಸುನೀಲ್‌ಕುಮಾರ್‌, ಜಿಲ್ಲಾಧ್ಯಕ್ಷ ಕೆ.ಉದಯಕುಮಾರ ಶೆಟ್ಟಿ, ಶಾಸಕರಾದ ಕೆ.ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕೋಟ ಶ್ರೀನಿವಾಸ ಪೂಜಾರಿ, ನಗರಸಭಾಧ್ಯಕ್ಷ ಕಿರಣ್‌ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ತಾಲೂಕಿನಲ್ಲಿ ಪ್ರವಾಸ ಪೆರ್ಡೂರು ಶ್ರೀಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ […]

ನ್ಯಾಯವಾದಿಗಳೇ ಕಾನೂನನ್ನು ಕೈಗೆತ್ತಿಕ್ಕೊಂಡ ಅನಾಗರಿಕ ಘಟನೆ

Saturday, March 3rd, 2012
Journalist Bangalore

ಬೆಂಗಳೂರು : ಮಾಜಿ ಸಚಿವ ಜನಾರ್ಧನರೆಡ್ಡಿ ಅವರನ್ನು ನ್ಯಾಯಾಲಯಕ್ಕೆ ಕರೆತರುವುದನ್ನು ಚಿತ್ರೀಕರಣ ಮಾಡಲು ಹೋಗಿದ್ದ ಮಾಧ್ಯಮ ಸಿಬ್ಬಂದಿ ಮೇಲೆ ವಕೀಲರು ಬೇಕಾಬಿಟ್ಟಿ ಹಲ್ಲೆ ಮಾಡಿ ಅನಾಗರಿಕ ವರ್ತನೆ ತೋರಿಸಿದ್ದಾರೆ. ತಡೆಯಲು ಹೋದ ಪೊಲೀಸರ ಮೇಲೂ ಮುಗಿಬಿದ್ದಿದ್ದಾರೆ. ಜನಸಾಮಾನ್ಯರಿಗೆ ನ್ಯಾಯ ನೀಡಬೇಕಾದ ನ್ಯಾಯವಾದಿಗಳೇ ಕಾನೂನನ್ನು ಕೈಗೆತ್ತಿ ಗೂಂಡಾವೃತ್ತಿ ತೋರಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಜನಾರ್ದನ ರೆಡ್ಡಿ ಅವರನ್ನು ಸಿವಿಲ್ ಕೋರ್ಟ್ ಕಾಂಪೆಕ್ಸ್ ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆತರಲಾಯಿತು. ಈ ಸಮಯಕ್ಕೆ ಸರಿಯಾಗಿ ಕೋರ್ಟ್ ಕಾಂಪೆಕ್ಸ್ ಪಾರ್ಕಿಂಗ್ ಸ್ಥಳದಲ್ಲಿ ಇಬ್ಬರು […]

ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ ಮಂಗಳೂರು ಉಡುಪಿ ಬಹುತೇಕ ಯಶಸ್ವೀ

Wednesday, February 29th, 2012
Trade Strike

ಮಂಗಳೂರು : ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ದೇಶವ್ಯಾಪಿ ಕಾರ್ಮಿಕರ ಸಾರ್ವತ್ರಿಕ ಮುಷ್ಕರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ. ಮುಂಜಾನೆ ಕೆಲವು ಸರಕಾರಿ ಹಾಗೂ ಖಾಸಗಿ ಬಸ್‌ಗಳು ಸಂಚಾರ ಆರಂಭಿಸಿದ ವೇಳೆ ಅವುಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗಳು ಸಂಭವಿಸಿದೆ. ಲಾಲ್‌ಬಾಗ್‌, ಕರಂಗಲ್ಪಾಡಿ, ಅಡ್ಯಾರ್‌, ಕಣ್ಣೂರು, ಪಡೀಲ್‌ಗ‌ಳಲ್ಲಿ ಸರಕಾರಿ ಬಸ್‌ಗಳ ಮೇಲೆ ನಡೆದ ಕಲ್ಲು ತೂರಾಟದಲ್ಲಿ ಗಾಜುಗಳಿಗೆ ಹಾನಿಯಾಗಿದೆ. ಲಾಲ್‌ಬಾಗ್‌, ಪಿವಿಎಸ್‌ ವೃತ್ತ,, ಫಳ್ನೀರ್‌ ಮುಂತಾದ ಕಡೆಗಳಲ್ಲಿ ಕಲ್ಲುತೂರಾಟದಿಂದ ಕೆಲವು ಖಾಸಗಿ […]