ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶ

Thursday, October 6th, 2011
Matturu

ಬೆಂಗಳೂರು : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದಲ್ಲಿ 1929 ಆಗಸ್ಟ್ 8ರಂದು ಜನಿಸಿದ್ದ ಕೃಷ್ಣಮೂರ್ತಿ ಅವರ ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕುಮಾರ ಪರ್ವ, ದ್ರೌಪದಿ ಸ್ವಯಂವರ, ಮಹಾಭಾರ ಉದ್ಯೋಗ ಪರ್ವ ಸೇರಿದಂತೆ ಭಾರತೀಯ ಹಬ್ಬಗಳ ಕುರಿತು ನಿರ್ದೇಶನ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಮತ್ತೂರಿನಲ್ಲಿ ರಾಮಕೃಷ್ಣಯ್ಯ ಮತ್ತು […]

ಅಕ್ಟೋಬರ್ 11ರಿಂದ ಹೊರಡಲಿರುವ ಅಡ್ವಾಣಿಯವರ ‘ಜನಚೇತನ ಯಾತ್ರೆ’

Wednesday, October 5th, 2011
LK ADWANI

ಬೆಂಗಳೂರು : ಭ್ರಷ್ಟಚಾರ ವಿರುದ್ಧ ಎಲ್. ಕೆ. ಅಡ್ವಾಣಿ ಕೈಗೊಳ್ಳಲಿರುವ ‘ಜನಚೇತನ ಯಾತ್ರೆ’ಯು ಅಕ್ಟೋಬರ್ 11ರಿಂದ ಜಯಪ್ರಕಾಶ್ ನಾರಾಯಣ್ ಅವರ ಹುಟ್ಟೂರಾದ ಸಿತಾಬ್ದಿಯಾರಾದಿಂದ ಆರಂಭವಾಗಲಿದೆ ರಥಯಾತ್ರೆಗೆ ಬಿಹಾರ ಮುಖಮಂತ್ರಿ ನಿತೀಶ್ ಕುಮಾರ್ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಎಚ್. ಅನಂತ್ ಕುಮಾರ್ ತಿಳಿಸಿದ್ದಾರೆ. ಜನಚೇತನ ಯಾತ್ರೆಯ ದೇಶದ 23 ರಾಜ್ಯಗಳಲ್ಲಾಗಿ ಒಟ್ಟು 7,600 ಕೀ. ಮೀ. ಸಂಚರಿಸಲಿದೆ ಎಂದು ಬುಧವಾರ ಬಿಜೆಪಿ ಸಂಸದ ಅನಂತ್ ಕುಮಾರ್ ತಿಳಿಸಿದ್ದಾರೆ, ಇದರ ಮುಖ್ಯ ಉದ್ದೇಶ ಉತ್ತಮ […]

ಭಕ್ತಿ ಭಾವೈಕತೆಯ ಆಯುಧ ಪೂಜೆ

Wednesday, October 5th, 2011
Viajaya Dashami

ದಸರಾ ಹಬ್ಬದ ಕೊನೆಯ ದಿನ ವಿಜಯದಶಮಿಯಾದರೆ. ಒಂಭತ್ತನೆ ದಿನ ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮವನ್ನು ಆಚರಿಸಲಾಗುತ್ತದೆ, ಎಲ್ಲೆಡೆ ವಾಹನಗಳಿಗೆ ಹಾಗೂ ಆಯುಧಗಳಿಗೆ ಪೂಜೆ ನಡೆಸಲಾಗುತ್ತದೆ ಅಂಗಡಿ, ಕಚೇರಿ, ಮಳಿಗೆಗಳಲ್ಲಿ ವಾಹನ ಸೇರಿದಂತೆ ಉಪಯೋಗಿಸುವ ಎಲ್ಲಾ ಆಯುಧಗಳನ್ನು ಹೂ ತೋರಣಗಳಿಂದ ಶೃಂಗಾರಗೊಳಿಸಿ ಭಕ್ತಿ ಭಾವೈಕತೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ. ಜಾತಿ ಭೇಧವಿಲ್ಲದೆ ಆಯುಧ ಪೂಜೆಯನ್ನು ನಾಡಿನೆಲ್ಲೆಡೆ ಆಚರಿಸುತ್ತಾರೆ. ವಾಹನಗಳಿಗೆ ಪೂಜೆ ಸಲ್ಲಿಸುವುದರಿಂದ ದೀರ್ಘ ಬಾಳ್ವಿಕೆ ಸಹಿತ ಅಪಘಾತವನ್ನು ತಪ್ಪಿಸಬಹುದಾಗಿದೆ ಎಂಬುದು ನಂಬಿಕೆಯಾಗಿದೆ. ಇದರಂತೆ ತಮ್ಮ ತಮ್ಮ ಊರುಗಳಲ್ಲಿ ದೇವಾಲಯಗಳಿಗೆ ತೆರಳಿ […]

ರಾಜ್ಯದ ಶ್ರೀಮಂತ ಮಹಿಳೆ ಅನಿತಾ ಕುಮಾರಸ್ವಾಮಿ

Tuesday, October 4th, 2011
Anita Kumaraswamy

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿಯವರು 2010-11ನೇ ಸಾಲಿಗೆ ಆಸ್ತಿ ವಿವರಗಳ ಅಫಡವಿಟ್ ಸಲ್ಲಿಸಿರುವ ಪ್ರಕಾರ ಒಟ್ಟು ಅಧಿಕೃತ ಆಸ್ತಿ ಮೊತ್ತ 160 ಕೋಟಿ ರುಪಾಯಿ. ಶಾಸಕಿಯಾಗಿ ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರ ದಾಖಲೆಗಳನ್ನು ಪರಿಶೀಲಿಸಿದಾಗ ಈ ಅಂಶ ದೃಢಪಟ್ಟಿದೆ. ಇಲ್ಲಿ ಒಂದು ಅಂಶ ಸ್ಪಷ್ಟಪಡಿಸುವುದಾದರೆ ಬಳ್ಳಾರಿಯ ಜನಾರ್ಧನ ರೆಡ್ಡಿ ಅಧಿಕೃತ ಆಸ್ತಿ ಲೋಕಾಯಯುಕ್ತ ದಾಖಲೆಗಳ ಪ್ರಕಾರ ಕೇವಲ 144 ಕೋಟಿ ರು. 2009-10ರಲ್ಲಿ ಶಾಸಕಿ ಅನಿತಾರ ಆಸ್ತಿ ಮೊತ್ತ 51.22 ಕೋಟಿ […]

ಪತಿಯನ್ನು ಕಳೆದುಕೊಂಡ ಮಹಿಳೆಯರಿಂದ ಹೋಮದ ಪೂರ್ಣಾಹುತಿ

Tuesday, October 4th, 2011
Janardhana-poojary

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ, ಮಂಗಳೂರು ದಸರಾ ಸಂಭ್ರಮದಲ್ಲಿ ಸೋಮವಾರ ಪತಿಯನ್ನು ಕಳೆದುಕೊಂಡ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಸಮಾಜದಲ್ಲಿ ನೆಲೆಯೂರಿರುವ ಅನಿಷ್ಟ ಪದ್ಧತಿಯೆನಿಸಿ ಕೊಂಡ ವಿಧವಾ ಪದ್ದತಿಯನ್ನು ಧಿಕ್ಕರಿಸಲು ಪತಿಯನ್ನು ಕಳೆದುಕೊಂಡ ಸುಮಾರು 2,500 ಮಹಿಳೆಯರ ಪಾಲ್ಗೊಳ್ಳುವಿಕೆಯೊಂದಿಗೆ ಚಂಡಿಕಾಹೋಮ, ಬೆಳ್ಳಿ ರಥೋತ್ಸವ ನಡೆಸಿ ವಿಧವೆಯರಿಗೆ ಸೀರೆ, ಕುಂಕುಮ, ಹೂವು, ಬಳೆಯನ್ನು ಪ್ರಸಾದ ರೂಪದಲ್ಲಿ ನೀಡಲಾಯಿತು. ಬಿ. ಜನಾರ್ದನ ಪೂಜಾರಿ ಅವರು, ಹೋಮದ ಸಂಕಲ್ಪ ವಿಧಿಯನ್ನು ನೆರವೇರಿಸಿದ ಬಲಿಕ ಮಾತನಾಡಿ ಭಾರತದಲ್ಲಿ […]

ರಥಬೀದಿಯಲ್ಲಿ ರಾಮ ಮೂರ್ತಿಯ ಚಿನ್ನದ ಸರ ಕದ್ದ ಕಳ್ಳರು

Tuesday, October 4th, 2011
Rama-Mandira

ಮಂಗಳೂರು: ಮಂಗಳೂರು ರಥಬೀದಿಯ ಟೆಂಪಲ್‌ ಸ್ಕೇರ್ ನಲ್ಲಿರುವ ಶ್ರೀರಾಮ ಮಂದಿರ ದ ಕಿಟಿಕಿಯ ಸರಳುಗಳನ್ನು ಮುರಿದು ಒಳ ನುಗ್ಗಿದ ಕಳ್ಳರು ರಾಮ ಮೂರ್ತಿಯ ಮೇಲಿದ್ದ ಒಂದುವರೆ ಪವನು ತೂಕದ ಬಂಗಾರದ ಸರವನ್ನು ಅಪಹರಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ. ಚಿನ್ನದ ಸರದ ಬೆಲೆ ಸುಮಾರು 24,500 ರೂ ಎಂದು ಅಂದಾಜಿಸಲಾಗಿದೆ. ಸೋಮವಾರ ಬೆಳಗ್ಗೆ ಮಂದಿರದ ಬಾಗಿಲನ್ನು ತೆರೆದಾಗ ಈ ಪ್ರಕರಣ ಬೆಳಕಿಗೆ ಬಂತು. ಮೆನೇಜರ್ ಮಂಗಲ್‌ದಾಸ್‌ ಗುಲ್ವಾಡಿ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಬಂದರು ಪೊಲೀಸರು ಕೇಸು […]

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಸೇವಾ ಕೌಂಟರ್‌ ಪುನರಾರಂಭ

Monday, October 3rd, 2011
Auto Pre Paid counter

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ ಮತ್ತು ಬಿಜೈ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ಗಳನ್ನು ರವಿವಾರ ಆರಂಭಿಸಲಾಯಿತು. ದ.ಕ. ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಹಕಾರದಲ್ಲಿ ಎಸೋಸಿಯೇಶನ್‌ ಆಫ್‌ ಟ್ರಾವಲ್‌ ಏಜಂಟ್ಸ್‌ ಈ ಕೌಂಟರ್‌ಗಳನ್ನು ನಿರ್ವಹಣೆ ಮಾಡಲಿದೆ. ರೈಲು ನಿಲ್ದಾಣದಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ನ್ನು ಜಿಲ್ಲಾಧಿಕಾರಿ ಡಾ| ಎನ್‌. ಎಸ್‌. ಚನ್ನಪ್ಪ ಗೌಡ ಅವರು ಉದ್ಘಾಟಿಸಿದರು. ಬಳಿಕ ಮಾತನಾದಿದ ಅವರು ಪ್ರೀಪೇಯ್ಡ ಕೌಂಟರ್‌ನಲ್ಲಿ ಕೌಂಟರ್‌ ನಿರ್ವಹಣೆಗಾಗಿ 1 ರೂ.ವನ್ನು […]

ಮಂಗಳೂರು ದಸರಾಕ್ಕೆ ಸಚಿವ ವಯಲಾರ್‌ ರವಿ ಅವರಿಂದ ವಿದ್ಯುಕ್ತ ಚಾಲನೆ

Monday, October 3rd, 2011
Vayalar Ravi

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಖ್ಯಾತ ಮಂಗಳೂರು ದಸರಾಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಹಾಗೂ ಸಾಗರೋತ್ತರ ಭಾರತೀಯರ ವ್ಯವಹಾರಗಳ ಸಚಿವ ವಯಲಾರ್‌ ರವಿ ಅವರು ರವಿವಾರ ಚಾಲನೆ ನೀಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಸಾರಿ ಸಾರಿರುವ ಸಂದೇಶ ವಿಶ್ವಮಾನ್ಯವಾಗಿದೆ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬುದಾಗಿ ಏಕತೆಯ ಸಂದೇಶ ನಮ್ಮೆಲ್ಲರ ಶಕ್ತಿ. ನಾನು ಬಾಲ್ಯದಿಂದಲೂಅವರ ಸಂದೇಶ ನನ್ನ ಚಿಂತನೆಗಳನ್ನು ಕೇಳುತ್ತಿದ್ದೆ. ಚಿಕ್ಕಂದಿನಲ್ಲಿ ವರ್ಕಳ ಶಿವಗಿರಿ ಮಠಕ್ಕೆ ಹೋಗುತ್ತಿದ್ದ ಪ್ರವಚನಗಳು ಇಂದಿಗೂ ನನ್ನ ಮೇಲೆ […]

ಬಾಪೂಜಿಯವರ 142ನೇ ಜನ್ಮದಿನ

Sunday, October 2nd, 2011
Mahatma Gandhi

ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 142ನೇ ಜನ್ಮದಿನವನ್ನು ದೇಶದೆಲ್ಲೆಡೆ ಸಂಭ್ರಮ ಸಡಗರದಿಂದ ಅಕ್ಟೋಬರ್ 2 ರಂದು ಆಚರಿಸಲಾಗುತ್ತಿದೆ. ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನವದಹಲಿಯಲ್ಲಿರುವ ಗಾಂಧಿ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೋನಿಯಾ ಗಾಂಧಿ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಬಿಜೆಪಿ ಹಿರಿಯ ನಾಯಕ ಎಲ್. ಕೆ. ಆಡ್ವಾಣಿ, ದಹೆಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಹಿತ ಹಲವು ಗಣ್ಯರು ಸಹ ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಪುಷ್ಪಾರ್ಪಣೆ ಸಲ್ಲಿಸಿ ನಮನ ಸಲ್ಲಿಸಿದರು. […]

ಉರ್ವಸ್ಟೋರ್‌ನಲ್ಲಿ ‘ತುಳು ಭವನ’ ನಿರ್ಮಾಣಕ್ಕೆ ಶಿಲಾನ್ಯಾಸ

Sunday, October 2nd, 2011
Foundation laying ceremony for the Tulu Bhavana

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಉರ್ವಸ್ಟೋರ್‌ನಲ್ಲಿ ಸುಮಾರು 5 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಕಾಡೆಮಿ  ಕಟ್ಟಡ ‘ತುಳು ಭವನ’ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್‌ ಜಿಲ್ಲಾ ಉಸ್ತುವಾರಿ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು. ಮೂರು ಮಹಡಿಗಳನ್ನು ಒಳಗೊಂಡಿರುವ ‘ತುಳು ಭವನ’ ಮೊದಲ ಮಹಡಿಯಲ್ಲಿ ಕಾರು ಪಾರ್ಕಿಂಗ್‌ ಹಾಗೂ ಕಚೇರಿ. ಎರಡನೇ ಮಹಡಿಯಲ್ಲಿ ಸಭಾಂಗಣ. ಮೂರನೇ ಮಹಡಿಯಲ್ಲಿ ಮ್ಯೂಸಿಯಂ, ಅತಿಥಿಗೃಹ, ದಾಸ್ತಾನು ಕೊಠಡಿಯನ್ನು ಹೊಂದಿದೆ. ‘ತುಳು […]