ಮಹಿಳೆಯರು ಸ್ವಾಭಿಮಾನದಿಂದ ಬದುಕಲು ಸಹಕಾರಿ ಕ್ಷೇತ್ರ ಕಾರಣ“ -ಸ್ಪೀಕರ್ ಯು.ಟಿ.ಖಾದರ್

Saturday, November 16th, 2024
Sahakari Saptaha

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ […]

ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಅಂಗನವಾಡಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

Saturday, November 16th, 2024
Kudrebettu school

ಬಂಟ್ವಾಳ: ಬಾಳ್ತಿಲ ,ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದು ಅವರು ತಿಳಿಸಿದರು. ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿಯ ಹಾಗೂ ಗ್ರಾಮದ […]

ಜನ ಎಚ್ಚೆತ್ತುಕೊಳ್ಳದೆ ಹೋದಲ್ಲಿ ದಕ್ಷಿಣ ಭಾರತದ ಭಾಷೆಗಳೆಲ್ಲವೂ ನಶಿಸಲಿವೆ : ಡಾ.ಪುರುಷೋತ್ತಮ ಬಿಳಿಮಲೆ

Saturday, November 16th, 2024
Kannada-Abhibruddi

ಮಂಗಳೂರು : ಬಹುಭಾಷಿಕ ಹಾಗೂ ಬಹು ಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು. ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೇರಳ ಮತ್ತು ಗೋವಾ ರಾಜ್ಯದ 149 ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಭಿನ್ನ ಭಾಷಿಕರ ನಡುವೆ ವೈಮನಸ್ಯವನ್ನು ಮೂಡಿಸುವ ಕೆಲಸವನ್ನು ತಮ್ಮ ಉಳಿವಿಗಾಗಿ ರಾಜಕಾರಣಿಗಳು ಮುಂದುವರೆಸುತ್ತಲೇ ಇದ್ದು, ಇದು ಭಾಷೆಗಳ […]

ಸೈಬರ್ ವಂಚನೆ : ಮೂವರು ಆರೋಪಿಗಳ ಬಂಧನ

Saturday, November 16th, 2024
cyber-fraud

ಮಂಗಳೂರು: ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳ ಸಹಿತ ಪ್ರಮುಖ ಆರೋಪಿ ನಿಸಾರ್ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಬಂಧನ ನಡೆದಿದ್ದು, ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಿಬಿಐ ಅಧಿಕಾರಿಯಂತೆ ನಟಿಸಿ ಸಂತ್ರಸ್ತರಿಂದ ಸುಮಾರು 68 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಸೈಬರ್ ವಂಚನೆ ಪ್ರಕರಣದ ನಿಸಾರ್ ಹಲವರನ್ನು ವಂಚಿಸಿದ್ದ ಈತನ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 159/2024 ರ ಅಡಿಯಲ್ಲಿ ದಾಖಲಿಸಲಾಗಿದ್ದು, ಕಲಂ 66(2), 66(2)(2), 308(2), ಮತ್ತು […]

ಕದ್ರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಖರೀದಿಸಿ ನಿಲ್ಲಿಸಿದ್ದ ಕಾರಿಗೆ ಬೆಂಕಿ

Friday, November 15th, 2024
car-fire

ಮಂಗಳೂರು : ವ್ಯಕ್ತಿಯೊಬ್ಬರು ಖರೀದಿಸಿದ ಕಾರಿಗೆ ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗದ ಯುದ್ದ ಸ್ಮಾರಕದ ಬಳಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಾರನ್ನು ಸ್ಮಾರಕದ ಸಮೀಪ ಪಾರ್ಕ್ ಮಾಡಲಾಗಿದ್ದು, ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2.40 ಲಕ್ಷ ಕೊಟ್ಟು ಇವತ್ತು ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ. ಅಗ್ನಿಶಾಮಕದಳ, ಸ್ಥಳಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. […]

ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ನಿವೃತ್ತಿ, ಬೀಳ್ಕೊಡುಗೆ

Friday, November 15th, 2024
pro-dharma

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗಂಗೋತ್ರಿಯ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು. ಸಿಂಡಿಕೇಟ್ ನ ಸರ್ವ ಸದಸ್ಯರು, ಕುಲಸಚಿವರು, ಕುಲಸಚಿವ (ಪರೀಕ್ಷಾಂಗ), ಡೀನ್ ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

ಹಿರಿಯ ಸಹಕಾರಿ ವಿನಯಕುಮಾರ್‌ ಸೂರಿಂಜೆ ಮತ್ತು ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ

Friday, November 15th, 2024
Harish-Acharya-Award

ಮಂಗಳೂರು; ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್‌ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್‌ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ. ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಹಕಾರ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದ್ದು, ರಾಜ್ಯಾದ್ಯಂತ ಒಟ್ಟು 72 ಮಂದಿಗೆ ಪುರಸ್ಕಾರ ಘೋಷಿಸಲಾಗಿದೆ. ಕರಾವಳಿಯ ಉಭಯ […]

ಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಪ್ರಗತಿ ಸಾಧ್ಯ : ಸರಸ್ವತಿಶಂಕರಾಚಾರ್ಯ ಸ್ವಾಮೀಜಿ

Friday, November 15th, 2024
sarashwati-Shankaracharya

ಉಜಿರೆ: ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ ವಿಸ್ತೃತ ಭೋಜನಾಲಯವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಶುಭ ಹಾರೈಸಿದರು. ತಾಯಿ-ತಂದೆ, ಗುರುಗಳು ಮತ್ತು ಅತಿಥಿಗಳನ್ನು ನಾವು ದೇವರಂತೆ ಗೌರವಿಸಿ, ಸತ್ಕರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಆಗಿದೆ. ದೇಶಪ್ರೇಮದೊಂದಿಗೆ ಪ್ರಾಮಾಣಿಕತೆ, ಕಲೆ, ಸೌಂದರ್ಯವನ್ನು ಉಳಿಸಿ, ಬೆಳೆಸಬೇಕು. ಆಲಸ್ಯ, ಆಡಂಬರ, ಕಾಲಹರಣ […]

ಭತ್ತದ ಕೃಷಿ ತಾಕುಗಳಿಗೆ ವಿಜ್ಞಾನಿಗಳ ಬೇಟಿ

Friday, November 15th, 2024
pachaje

ಮಂಗಳೂರು : ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಪಚ್ಚಾಜೆಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆದಡಿ ಬೆಳೆಸಿದ ಸಹ್ಯಾದ್ರಿ ಕೆಂಪುಮುಕ್ತಿ ಭತ್ತದ ತಳಿಯ ಕೃಷಿ ಕ್ಷೇತ್ರಗಳಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಬೇಟಿ ನೀಡಿ ಭತ್ತದ ಬೆಳೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು. ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರತಜ್ಞರಾದ ಹರೀಶ ಶೆಣೈ ಬೆಳೆಯ ಬೆಳವಣಿಗೆ ಕುರಿತು ತೃಪ್ತಿ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಕೈಗೊಳಬೇಕಾದ ಬೇಸಾಯ ಕ್ರಮಗಳು ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ಕೈಗೊಂಡ ಕೃಷಿಕರಿಗೆ ಮಾಹಿತಿ ನೀಡಿದರು. ಈ […]

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” : ನಿರ್ಮಲಾ ಸೀತಾರಾಮನ್

Friday, November 15th, 2024
Nirmala-S

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ. ಇಂದು ದೇಶದಲ್ಲಿ ಕೃಷಿ ಕ್ಷೇತ್ರದ ಕ್ರಾಂತಿಯಾಗಿದೆ. ದೇಶದ ಜನರಿಗೆ ಸಾಕಾಗುವಷ್ಟು ಅಕ್ಕಿ, ಧವಸ ಧಾನ್ಯ […]