ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ರೆಡ್ ಅಲರ್ಟ್ ಘೋಷಣೆ

Thursday, October 24th, 2019
red-alert

ಮಂಗಳೂರು : ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ  ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಭಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಸೂಕ್ತ ಎಚ್ಚರಿಕೆ ವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ವಾಯುಭಾರ ಕುಸಿತ ಪ್ರಭಾವದಿಂದ ಕೇರಳ-ಕರ್ನಾಟಕ ಕರಾವಳಿ ಮತ್ತು […]

ವಿಟ್ಲ : ಗೋವುಗಳ ಅಕ್ರಮ ಸಾಗಾಟದ ಆರೋಪ; ಓರ್ವ ಬಂಧನ

Thursday, October 24th, 2019
govugalu

ವಿಟ್ಲ : ಗೋವುಗಳ ಅಕ್ರಮ ಸಾಗಾಟ ಆರೋಪದ ಮೇರೆಗೆ ವಾಹನ ಸಹಿತ ಓರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೊಳ್ನಾಡು ಗ್ರಾಮದ ಬಾರೆಬೆಟ್ಟು ಸಮೀಪದ ಮುಂಡತ್ತಜೆ ಎಂಬಲ್ಲಿ ಗುರುವಾರ ನಡೆದಿದೆ. ಸಾಲೆತ್ತೂರು ಕಟ್ಟೆ ನಿವಾಸಿ ಇಸ್ಮಾನ್ ಶಾಫಿ ಎಂಬಾತನನ್ನು ಹಾಗು ಎರಡು ದನಗಳು, ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗಾಟದ ವೇಳೆ ವಾಹನಕ್ಕೆ ಬೆಂಗವಲಾಗಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದೆ.    

ಡಿಕೆಶಿಗೆ ಜಾಮೀನು : ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ; ಸಚಿವ ಶ್ರೀನಿವಾಸ ಪೂಜಾರಿ

Thursday, October 24th, 2019
SKShi

ಉಡುಪಿ : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಲಭಿಸಿದ್ದು, ಆದರೆ ಅವರಿಗೆ ಜಾಮೀನು ಲಭಿಸುವುದರಿಂದ ಉಪಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನೂರು ವರ್ಷಕ್ಕೂ ಮೀರಿದ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ತನ್ನ ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ. ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದ್ದು, ಕಾಂಗ್ರೆಸ್ ಜವಾಬ್ದಾರಿ ರಹಿತ ನಡವಳಿಕೆ ತೋರಿಸುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದ […]

ಮಂಜೇಶ್ವರ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಗೆಲುವು

Thursday, October 24th, 2019
UDF

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ ಕುಂಟಾರು ಅವರನ್ನು 7,923 ಮತಗಳ ಅಂತರದಿಂದ ಸೋಲಿಸಿದ ಖಮರುದ್ದೀನ್, ಎಲ್‌ಡಿಎಫ್ ಅನ್ನು ಮತ್ತೊಮ್ಮೆ ತೃತೀಯ ಸ್ಥಾನಕ್ಕೆ ತಳ್ಳಿದ್ದಾರೆ. ಆರಂಭದಲ್ಲೇ ಮುನ್ನಡೆ ಸಾಧಿಸಿದ್ದ ಖಮರುದ್ದೀನ್ ಕೊನೆಯವರೆಗೂ ಅದನ್ನು ಕಾಯ್ದುಕೊಂಡರಲ್ಲದೇ, ಹಂತ ಹಂತವಾಗಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದರು. ಅಂತಿಮವಾಗಿ  7,923 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ […]

ಗುಜರಾತ್​ ಉಪಚುನಾವಣೆಯ ಮತ ಎಣಿಕೆ : ತಲಾ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್, ಬಿಜೆಪಿ

Thursday, October 24th, 2019
gujarat

ಅಹಮದಾಬಾದ್ : ಗುಜರಾತ್ನ ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಗುರುವಾರ ಪ್ರಕಟವಾಗುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ತಲಾ ಮೂರರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುನ್ನಡೆ ಕಾಯ್ದುಕೊಂಡಿವೆ. ಪಟನ್ ಜಿಲ್ಲೆಯ ರಾಧಾನ್ಪುರ ಕ್ಷೇತ್ರದಲ್ಲಿ ಒಬಿಸಿ ನಾಯಕ ಬಿಜೆಪಿ ಅಭ್ಯರ್ಥಿ ರಘು ದೇಸಾಯಿ ಕಾಂಗ್ರೆಸ್ನ ಅಲ್ಪೇಶ್ ಠಾಕೂರ್ ವಿರುದ್ಧ 3,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಅರಾವಳಿಯ ಬಯಾಡ್ನಲ್ಲಿ ಬಿಜೆಪಿ ಅಭ್ಯರ್ಥಿ ಧವಲಸಿಂಗ್ ಝಲಾ ಅವರು ಕಾಂಗ್ರೆಸ್ ಅಭ್ಯರ್ಥಿ […]

ಉಳ್ಳಾಲದಲ್ಲಿ ದಡಕ್ಕೆ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳು

Thursday, October 24th, 2019
Ullal

ಮಂಗಳೂರು : ವಾಯುಭಾರ ಕುಸಿತ ಹಿನ್ನೆಲೆ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಜೋರಾಗಿ ಬೀಸುತ್ತಿರುವ ಗಾಳಿಯ ಪರಿಣಾಮವಾಗಿ ಕಡಲ್ಕೊರೆತ ಉಂಟಾಗಿ ಅಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ತಡೆಗೋಡೆ ಸಮುದ್ರಪಾಲಾಗುತ್ತಿದೆ. ಉಚ್ಚಿಲ, ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಸೋಮೇಶ್ವರ ದೇವಸ್ಥಾನ ಬಳಿಯ ಮೋಹನ್ ಅವರ ಮನೆಗೆ ಅಲೆಗಳು ಅಪ್ಪಳಿಸುತ್ತಿದೆ. ಉಚ್ಚಿಲದ ಬಟ್ಟಂಪ್ಪಾಡಿ ಸಮೀಪ ನಾಲ್ಕುತೆಂಗಿನ ಮರಗಳು ಧರಾಶಾಯಿಯಾಗಿದೆ.  

ನೆಟ್ಟಣ : ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಬಂಧನ

Thursday, October 24th, 2019
mangu

ಕಡಬ : ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಹಾಗೂ ಆತನ ಜೊತೆಗಿದ್ದ ಎನ್ನಲಾದ ಮತ್ತೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣವೇ […]

ಪರಿಸರ ಸ್ನೇಹಿ ದೀಪಾವಳಿ ಆಂದೋಲನ : ಹಸಿರು ದೀಪಾವಳಿ ಆಚರಿಸಿ, ಪರಿಸರ ಸಂರಕ್ಷಿಸಿ; ನೂರುನ್ನಿಸಾ ಕರೆ

Thursday, October 24th, 2019
deepavali

ಮಡಿಕೇರಿ : ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಪಟಾಕಿಯನ್ನು ತ್ಯಜಿಸಿ, ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ […]

ಬಿಜೆಪಿಗೆ ಗೆಲುವಿನ ಭರವಸೆ : ಮಹಾರಾಷ್ಟ್ರದಲ್ಲಿ ಸಂಭ್ರಮಾಚರಣೆಗೆ ಸಿದ್ಧವಾಗಿದೆ 5000 ಲಾಡುಗಳು

Thursday, October 24th, 2019
BJP

ಮುಂಬೈ : ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿಗಂತೂ ಗೆಲುವು ತಮ್ಮದೇ ಎಂಬ ಭರವಸೆ ಬಲವಾಗಿಯೇ ಇದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೆಲುವು ಸಂಭ್ರಮಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಬೈನ ಬಿಜೆಪಿ ಮುಖ್ಯಕಚೇರಿಯಲ್ಲಿ ವಿಜಯೋತ್ಸವದ ತಯಾರಿ ಭರ್ಜರಿಯಾಗಿಯೇ ನಡೆಯುತ್ತಿದೆ. ಮತ ಎಣಿಕೆಯ ಪ್ರಕ್ರಿಯೆಯನ್ನು ನೇರ ಪ್ರಸಾರದಲ್ಲಿ ನೋಡಲು ದೊಡ್ಡ ಟಿವಿ ಪರದೆಗಳನ್ನು ಹಾಕಿರುವ ಬಿಜೆಪಿ ಮುಖಂಡರು, ಕಾರ್ಯಕರ್ತರು, ಗೆದ್ದ ಬಳಿಕ ಸಂಭ್ರಮಾಚರಣೆ […]

ಮಂಜೇಶ್ವರ : ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭ

Thursday, October 24th, 2019
Manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ. ಆದರೆ ಪ್ರಥಮ ಸುತ್ತು ಮುಗಿಯುತ್ತಿದ್ದಂತೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಸುತ್ತಿನ ಮತ ಎಣಿಕೆಯನ್ನು ಮರು ಎಣಿಕೆ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ಎಣಿಕೆ ಮಾಡಲಾಗಿದ್ದ ಮತಗಳ ಮರು ಎಣಿಕೆ ಮಾಡಲಾಗುತ್ತಿದೆ. ಈ ವೇಳೆ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರು ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.