56 ಸಾಧಕರಿಗೆ ಮತ್ತು 20 ಸಂಸ್ಥೆಗಳಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Thursday, October 31st, 2024
DK Rajyotsava

ಮಂಗಳೂರು : ಈ ಬಾರಿ 56 ಸಾಧಕರಿಗೆ ಮತ್ತು 20 ಸಂಸ್ಥೆಗಳಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು. ನವಂಬರ್ 1ರಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಈ ಪ್ರಶಸ್ತಿಯನ್ನು ಪ್ರಧಾನಮಾಡಲಿದ್ದಾರೆ. ಮರ್ಸಿ ವೀಣಾ ಡಿಸೋಜ ಕದ್ರಿ (ಸಮಾಜ ಸೇವೆ), ಪಾಣಿಲ ಸತೀಶ್ಚಂದ್ರ ಸಾಲ್ಯಾನ್ (ಕಂಬಳ), ಡಾ. ಬಿ.ಎಸ್. ಸಚ್ಚಿದಾನಂದ ರೈ ಲೇಡಿಹಿಲ್ (ವೈದ್ಯಕೀಯ), ಪದ್ಮರಾಜ್ ಕೋಟ್ಯಾನ್ ಪಡುಬೊಂಡಂತಿಲ (ಕೃಷಿ), ಮುಹಮ್ಮದ್ ಹನೀಫ್ ಕೂಳೂರು (ಕ್ರೀಡೆ), […]

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

Thursday, October 31st, 2024
lakshmi-Hebbalkar

ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದರು. ಶಕ್ತಿ ಯೋಜನೆ […]

ವಕ್ಪ್ ಪ್ರೀತಿ ತೋರಿ,ರೈತರು ,ಜನರನ್ನು ಕಾಂಗ್ರೆಸ್ ಬೀದಿಗೆ ತಂದು‌ ನಿಲ್ಲಿಸಿದೆ : ಡಾ.ಭರತ್ ಶೆಟ್ಟಿ ವೈ ವಾಗ್ದಾಳಿ

Thursday, October 31st, 2024
bharath-shetty

ಕಾವೂರು: ಬ್ರಿಟೀಷರ ಕಾಲದಲ್ಲಿ ಆರಂಭವಾದ ವಕ್ಫ್ ಕಾಯಿದೆ ರದ್ದು ಮಾಡುವ ಬದಲು 1995ರ ವಕ್ಫ್‌ ಕಾಯಿದೆ ಮತ್ತು 2013 ರಲ್ಲಿ ಯುಪಿಎ ಸರ್ಕಾರ ಶಾಸನಾತ್ಮಕ ಅಧಿಕಾರ ನೀಡಿದ್ದರಿಂದ ಇಂದು ಜನರು,ರೈತರು ಬೀದಿಗೆ ಬೀಳುವಂತಾಗಿದೆ .ಲಕ್ಷ ಲಕ್ಷ ಎಕರೆ ಭೂಮಿಯನ್ನು ಲ್ಯಾಂಡ್ ಜಿಹಾದ್ ಮೂಲಕ ಕಬಳಿಸಲು ಕಾಂಗ್ರೆಸ್ ಕಾರಣ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವಾಗ್ದಾಳಿ ನಡೆಸಿದ್ದಾರೆ. ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ವಕ್ಫ್‌ ಮಂಡಳಿಗೆ ಹೆಚ್ಚಿನ ಅಧಿಕಾರ ಕೊಡುವ […]

ಮಹಾಲಕ್ಮೀ ಕೋ. ಆಪರೇಟಿವ್‌ ಬ್ಯಾಂಕ್‌ನಲ್ಲಿ 28.26 ಕೋಟಿ ರೂ. ಅವ್ಯವಹಾರ

Tuesday, October 29th, 2024
Mahalakshmi-Cooperative

ಉಡುಪಿ : ಮಹಾಲಕ್ಮೀ ಕೋ. ಆಪರೇಟಿವ್‌ ಬ್ಯಾಂಕ್‌ ಲಿ. ಇದರ ಮಲ್ಪೆ ಶಾಖೆಯಲ್ಲಿ ಸುಮಾರು 1413 ಮಂದಿ ಗ್ರಾಹಕರಿಗೆ ತಲಾ ರೂ. 20 ಸಾವಿರದಂತೆ ಸಾಲ ನೀಡಿ ನಕಲಿ ದಾಖಲೆ ಸೃಷ್ಟಿಸಿ ಅದನ್ನು ತಲಾ ರೂ. 2.00 ಲಕ್ಷ ಸಾಲ ನೀಡಿದಂತೆ ದಾಖಲಿಸಿ ಒಟ್ಟು ರೂ. 28.26 ಕೋಟಿ ಮೊತ್ತ ಪಡೆದು ಅಕ್ರಮ ನಡೆಸಿ ಸದರಿ ಮೊತ್ತದ ಪಾವತಿಗೆ ಬ್ಯಾಂಕ್ ನ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸಂತ್ರಸ್ತ ಗ್ರಾಹಕರು ದೂರು ನೀಡಿರುತ್ತಾರೆ. ಮಹಾಲಕ್ಷ್ಮೀ ಕೋ. ಆಪರೇಟಿವ್‌ […]

ಶಿಗ್ಗಾವಿ ಉಪಚುನಾವಣೆ ಉಸ್ತುವಾರಿಯಾಗಿ ಮಂಜುನಾಥ ಭಂಡಾರಿ ನೇಮಕ

Tuesday, October 29th, 2024
Manjunath-Bhandary

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ವಿನಯ್ ಕುಲ್ಕರ್ಣಿ ಮತ್ತು ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದ್ದು ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ HUDA ಅಧ್ಯಕ್ಷರಾದ ಶಾಕಿರ್ ಸನದಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮತ್ತಿಕಟ್ಟಿ ಅವರು ಹುಬ್ಬಳ್ಳಿಯಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಾಲರಾಜ್ ನಾಯ್ಕ್ […]

ರಾಷ್ಟ್ರೀಯ ಆಯುರ್ವೇದ ದಿನಾಚರಣೆ – “ಅಸಮರ್ಪಕ ಜೀವನ ಶೈಲಿಯಿಂದ ಆರೋಗ್ಯಕ್ಕೆ ಆಪತ್ತು”

Tuesday, October 29th, 2024
Ayurveda-Day

ಮಂಗಳೂರು : ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಯಿಗೆ ಚಪಲಕ್ಕೆ […]

ಗ್ರಾಮೀಣ ಜನರ ಸಮಸ್ಯೆನಿವಾರಣೆಗೆ ಮಾಧ್ಯಮ ರಂಗದ ನಿರಂತರ ಪ್ರಯತ್ನ ಇತರರಿಗೆ ಮಾದರಿ -ಮುಲ್ಲೈ ಮುಗಿಲನ್

Tuesday, October 29th, 2024
Kutluru

ಮಂಗಳೂರು : ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮವಾರ ಸಮವಸ್ತ್ರ […]

ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು

Sunday, October 27th, 2024
Twahiba

ಮಂಜೇಶ್ವರ: ಇಲ್ಲಿನ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಅಸೌಖ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ. ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಇಂದು ರಾತ್ರಿ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಆಕಾಲಿಕ ಮರಣಕ್ಕೆ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಾಚಾರ್ಯರಾದ ಮುಹಮ್ಮದ್ […]

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

Sunday, October 27th, 2024
cm-siddaramaiha

ಬೆಂಗಳೂರು : ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು. ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ತಿಳಿಸಿದರು.

ಆಸ್ಪತ್ರೆಯಿಂದ ಪರಾರಿಯಾಗಿದ್ದ ಕಳ್ಳತನ ಆರೋಪಿಯನ್ನು ಬಂಧಿಸಿದ ಪೊಲೀಸರು

Sunday, October 27th, 2024
Koli-charan

ಸುಳ್ಯ : ಕಳ್ಳತನ ಪ್ರಕರಣವೊಂದರಲ್ಲಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಬಂಧಿತ ಆರೋಪಿ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿಂದ ಬಂಧಿಸಿದ್ದರು.