ಮಂಗಳೂರು : ಮುಡಿಪು ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮುಖ್ಯ ರಸ್ತೆಯ ಬದಿಯಲ್ಲಿ ವೃದ್ಧರೊಬ್ಬರು ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದಾಗ, ಅತಿವೇಗವಾಗಿ ಬಂದ ಆಟೋರಿಕ್ಷಾವೊಂದು ಚಾಲಕನ ಹತೋಟಿ ತಪ್ಪಿ ನೇರವಾಗಿ ಅವರ ಮೇಲೆರಗಿದೆ. ಈ ದುರ್ಘಟನೆಯ ತೀವ್ರತೆಗೆ ನಡೆದುಕೊಂಡು ಹೋಗುತ್ತಿದ್ದ ಹಿರಿಯ ನಾಗರಿಕರು ರಸ್ತೆಗೆ ಬಿದ್ದು ತೀವ್ರ ರಕ್ತಸ್ರಾವದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದೇ ವೇಳೆ ಡಿಕ್ಕಿಯ ರಭಸಕ್ಕೆ ಆಟೋರಿಕ್ಷಾ ಸಹ ರಸ್ತೆಗೆ ಉರುಳಿಬಿದ್ದಿದ್ದು, ಅದರಲ್ಲಿದ್ದ ರಿಕ್ಷಾ ಚಾಲಕನಿಗೂ ಸಹ ಬಲವಾದ ಪೆಟ್ಟು ಬಿದ್ದಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸುತ್ತಮುತ್ತಲಿನ ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಗಾಯಾಳುಗಳಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಮಿತಿಮೀರಿದ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಈ ದುರ್ಘಟನೆಗೆ ಮುಖ್ಯ ಕಾರಣ ಎನ್ನಲಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










