ಮಂಗಳೂರು : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಆದೇಶದಂತೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ 12 ಜಿಲ್ಲಾಧಿಕಾರಿಗಳು ಸೇರಿದಂತೆ 20 ಮಂದಿ ಐ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಕೂಡ ಸೇರಿದ್ದಾರೆ.
ಎನ್. ಪ್ರಕಾಶ್ ಜಾಗಕ್ಕೆ ನೂತನ ಜಿಲ್ಲಾಧಿಕಾರಿ ಹರ್ಷ ಗುಪ್ತ ನೇಮಕಗೊಳ್ಳುವ ಸಾಧ್ಯತೆ ಇದೆ. ಮೂಲತಃ ದೆಹಲಿಯವರಾಗಿರುವ ಹರ್ಷ 1997ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ದೆಹಲಿಯಲ್ಲಿ ಸೇವೆ ಸಲ್ಲಿಸಿದ್ದ ಇವರು ಬಳಿಕ ಕರ್ನಾಟಕದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸಿದ್ದಾರೆ.
ವರ್ಗಾವಣೆಗೆ ಸಂಬಂಧಿಸಿದಂತೆ ಇಂದು ಸಂಜೆಯ ವೇಳೆಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ ಇದೆ.
Click this button or press Ctrl+G to toggle between Kannada and English
March 7th, 2014 at 11:54:27
fine &clear newss