ಮಂಗಳೂರು : ಕೂಳೂರಿನಲ್ಲಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕಂಟೈನರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿಯಾದ ಸದಾನಂದ ಶೆಟ್ಟಿಗಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಬಂಗ್ರಕೂಳೂರಿನ ವಿಆರ್ಎಲ್ ಕಚೇರಿ ಮುಂಭಾಗದಲ್ಲಿ ಸದಾನಂದ ಅವರು ತಮ್ಮ ಇವಿ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಂಟೈನರ್ ಲಾರಿಯೊಂದು ಇವರ ದ್ವಿಚಕ್ರ ವಾಹನಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸದಾನಂದ ಅವರು ರಸ್ತೆಗೆ ಬಿದ್ದಿದ್ದು, ಈ ಸಂದರ್ಭದಲ್ಲಿ ಕಂಟೈನರ್ನ ಬೃಹತ್ ಚಕ್ರಗಳು ಅವರ ಮೇಲೆಯೇ ಹರಿದು ಹೋಗಿವೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










