ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೆಬಲ್ ಮಾಲತೇಶ್ (ಎಚ್ಸಿ 404) ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ವಾರಂಟ್ ಬಂಧನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಯಲ್ಲಿ ಗಂಭೀರ ಸ್ವರೂಪದ ಲೋಪ ಎಸಗಿದ ಆರೋಪದ ಮೇಲೆ ಈ ಶಿಸ್ತು ಕ್ರಮ ಜರುಗಿಸಲಾಗಿದೆ.
ಪೊಲೀಸ್ ಇಲಾಖೆಯ ಮೂಲಗಳ ಪ್ರಕಾರ, ಆರೋಪಿಯನ್ನು ಬಂಧಿಸಿದ ಬಳಿಕ ಆತನನ್ನು ಕಾನೂನುಬದ್ಧವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಬದಲು, ಆತನ ವಿರುದ್ಧ ಜಾರಿಯಲ್ಲಿದ್ದ ವಾರಂಟ್ ಅನ್ನು ಕಾನೂನು ಬಾಹಿರವಾಗಿ ‘ರಿ-ಕಾಲ್’ (ರದ್ದು) ಮಾಡಿಸಿಕೊಳ್ಳಲು ಈ ಸಿಬ್ಬಂದಿ ಸಹಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಅಕ್ರಮ ಕೃತ್ಯವು ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ಪ್ರಾಥಮಿಕ ವರದಿಯಲ್ಲಿ ಕರ್ತವ್ಯ ಲೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ, ಇಲಾಖೆಯು ತಕ್ಷಣದಿಂದ ಜಾರಿಗೆ ಬರುವಂತೆ ಮಾಲತೇಶ್ ಅವರನ್ನು ಅಮಾನತುಗೊಳಿಸಿ, ಘಟನೆಯ ಕುರಿತು ಕೂಲಂಕಷ ವಿಚಾರಣೆಗೆ ಆದೇಶಿಸಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










