ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸತತವಾಗಿ ಕಾನೂನಿನಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ ಒಬ್ಬನನ್ನು ಕೊನೆಗೂ ಉಳ್ಳಾಲ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಇಮ್ರಾನ್ ಸುರ್ಮೋ ಎಂದು ಗುರುತಿಸಲಾಗಿದ್ದು, ಈತ ಪೊಲೀಸರು ಹಾಗೂ ಕಾನೂನಿನ ಕಣ್ಣಿಗೆ ಮಣ್ಣೆರಚಲು ಬುರ್ಖಾ ಧರಿಸಿ ಓಡಾಡುತ್ತಿದ್ದ ಎನ್ನುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ನ್ಯಾಯಾಲಯದಿಂದ ಸರಣಿ ವಾರಂಟ್ಗಳು ಜಾರಿಯಾಗಿದ್ದರೂ ಈತ ವೇಷ ಮರೆಸಿಕೊಂಡು ತಿರುಗುತ್ತಿದ್ದನು.
ಬಂಧಿತ ಈ ಕುಖ್ಯಾತ ಅಪರಾಧಿ ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕೊಲೆ ಯತ್ನ, ದರೋಡೆ ಸೇರಿದಂತೆ ಒಟ್ಟು 23 ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಹಲವು ದಿನಗಳಿಂದ ಈತನಿಗಾಗಿ ಬಲೆ ಬೀಸಿದ್ದ ಪೊಲೀಸರು ಕರಾರುವಾಕ್ ಕಾರ್ಯಾಚರಣೆಯ ಮೂಲಕ ಈತನನ್ನು ಸೆರೆಹಿಡಿದು, ಸದ್ಯ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










