ಮಂಗಳೂರು : ಚುನಾವಣೆಯ ಸಂದರ್ಭಗಳಲ್ಲಿ ನಡೆಸುವ ವಿವಿಧ ಕಾರ್ಯಕ್ರಮಗಳಿಗೆ ಪರವಾನಗಿ ಪಡೆಯಲು ವಿವಿಧ ಇಲಾಖೆಗಳಿಗೆ ತೆರಳಿ ಅನುಮತಿಯನ್ನು ಪಡೆಯಬೇಕಾಗಿದ್ದು ಇದರಿಂದ ಸಮಾರಂಭಗಳು ವಿಳಂಭವಾಗುತ್ತವೆ ಎಂಬ ದೂರುಗಳು ಕೇಳಿಬರುತ್ತಿದ್ದ ಇದನ್ನು ತಪ್ಪಿಸಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹರ್ಷ ಗುಪ್ತಾ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ವಿಚಾರವನ್ನು ತಿಳಿಸಿದರು. ಏಕಗವಾಕ್ಷಿ ವ್ಯವಸ್ಥೆ ಯಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಲಾಗುವುದಾಗಿ ಮತ್ತು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಆರ್‌ಒ (ಕಂದಾಯ ಇಲಾಖೆ) ಕಚೇರಿಯಲ್ಲಿ ಏಕಗವಾಕ್ಷಿ ಕೇಂದ್ರ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಈ ವೇಳೆ ಯಾವುದೇ ಚುನಾವಣಾ ಸಂಬಂಧಿ ಕಾರ್ಯಕ್ರಮ ನಡೆಸುವಾಗ ಮಾದರಿ ನೀತಿಸಂಹಿತೆ ಪಾಲನೆ ಕಡ್ಡಾಯವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
Click this button or press Ctrl+G to toggle between Kannada and English