ಮಂಗಳೂರು : ಒಂದೇ ಕುಟುಂಬದ ನಾಲ್ವರನ್ನು ಸಾಮೂಹಿಕ ಹತ್ಯೆ ಮಾಡಿದ್ದ ವಾಮಂಜೂರು ಪ್ರವೀಣನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕೃತಗೊಳಿಸಿದ್ದು ಈ ಮೂಲಕ ಸುಪ್ರೀಂಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ಖಾಯಂಗೊಂಡಿದೆ.
ಆರೋಪಿ ಪ್ರವೀಣ 1993 ರ ಫೆಬ್ರವರಿ 23 ರಂದು ಹಣಕ್ಕಾಗಿ ತನ್ನ ಅತ್ತೆ ಅಪ್ಪಿ ಶೇರಿಗಾರ್ತಿ, ಆಕೆಯ ಮಗ ಗೋವಿಂದ, ಮಗಳು ಶಕುಂತಳಾ ಹಾಗೂ ಶಕುಂತಳಾರ ಪುತ್ರಿ ದೀಪಿಕಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ.
ಈತನಿಗೆ ಮಂಗಳೂರಿನ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ನಂತರ ಹೈಕೋರ್ಟ್ ಈತನ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಆ ಬಳಿಕ 2003 ರಲ್ಲಿ ಸುಪ್ರೀಂಕೋರ್ಟ್ ಕೂಡಾ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿಯಿತು. ಇದನ್ನು ಪ್ರಶ್ನಿಸಿ ಈತ ರಾಷ್ಟ್ರಪತಿಯವರಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದು, ಇದೀಗ ಪ್ರವೀಣನ ಕ್ಷಮಾದಾನದ ಅರ್ಜಿರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕೃತಗೊಂಡಿದ್ದು ಗಲ್ಲುಶಿಕ್ಷೆ ಖಾಯಂಗೊಳ್ಳುವ ಮೂಲಕ ಅಪ್ಪಿ ಶೇರಿಗಾರ್ತಿ ಕುಟುಂಬಕ್ಕೆ ದೀರ್ಘಾವಧಿಯ ಬಳಿಕ ನ್ಯಾಯ ದೊರೆತಂತಾಗಿದೆ.
Click this button or press Ctrl+G to toggle between Kannada and English