ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರ ಜಾತ್ಯಾತೀತ ಜನತಾದಳದ ಅಧ್ಯಕ್ಷ ಸುದರ್ಶನ್ ಶೆಟ್ಟಿ.ಪೆರ್ಮಂಕಿ ಹಾಗುಇತರೆ ಸದಸ್ಯರು ಪಕ್ಷಕ್ಕೆ ರಾಜಿನಾಮೆ ನೀಡುತ್ತಾರೆ ಎಂಬ ಸುದ್ದಿಯ ಹಿನ್ನಲೆಯಲ್ಲಿ, ಇದಕ್ಕೆ ಉತ್ತರಿಸುವ ನಿಟ್ಟಿನಲ್ಲಿ ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಸುದರ್ಶನ್ ಶೆಟ್ಟಿ.ಪೆರ್ಮಂಕಿ ರವರ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು.
ಪತ್ರಿಕಾಘೋಷ್ಟಿಯಲ್ಲಿ ಮಾತನಾಡಿದ ಅವರು ಜೆಡಿಎಸ್ನಲ್ಲಿ ಏನೇ ಆಂತರಿಕ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿದ್ದರೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದಲ್ಲಿ ಯಾವುದೇ ಒಡಕು ಮೂಡಿಲ್ಲ ನಾವಾಗಲಿ, ಇತರೆ ಸದಸ್ಯರಾಗಲಿ ಪಕ್ಷ ಬಿಡುವ ಯೋಚನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪಕ್ಷದಲ್ಲಿ ಏನೇ ಆಂತರಿಕ ಕಚ್ಚಾಟಗಳಿದ್ದರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಯನ್ನು ಪಕ್ಷ ಆಯ್ಕೆ ಮಾಡಲಿದೆ ಹಾಗು ಪಕ್ಷದ ಕಾರ್ಯಕರ್ತರು ಚುನಾವಣೆಯನ್ನು ಒಮ್ಮತದಿಂದ ಎದುರಿಸಲಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹಕೀಂ ವಾಮಂಜೂರು, ತ್ಯಾಂಪಣ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English