ಮಂಗಳೂರು : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಮಾನಸೋಲ್ಲಾಸ ಸಭಾಂಗಣದಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಉಜಿರೆಯ ಎಸ್ ಡಿಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗವು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯ ವಿಭಾಗವು ಎಪ್ರಿಲ್ 5, 6 ರಂದು ಏರ್ಪಡಿಸಿದ್ದ ಒಟ್ಟು 10 ಸ್ಪರ್ಧೆಗಳಲ್ಲಿ 7 ಸ್ಪರ್ಧೆಗಳಲ್ಲಿ ಗೆಲ್ಲುವ ಮೂಲಕ ಎಸ್ ಡಿಎಂ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಡಾಕ್ಯುಮೆಂಟರಿ, ವಾಕ್ ತ್ರೂ, ಸೋಷಿಯಲ್ ಅಡ್ವರ್ಟೈಸ್ಮೆಂಟ್, ರೇಡಿಯೋ ಉದ್ಘೋಷಣೆ, ಮತ್ತು ವರದಿಗಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದರು. ಮೀಡಿಯಾ ಕ್ವಿಝ್, ನ್ಯೂಸ್ ಕಾಸ್ಟಿಂಗ್ (ಆ್ಯಂಕರಿಂಗ್)ನಲ್ಲಿ ದ್ವಿತೀಯ ಸ್ಥಾನ ತಮ್ಮದಾಸಿಕೊಂಡು ಸಮಗ್ರ ಪ್ರಶಸ್ತಿ ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಯಶೋವರ್ಮ, ವಿಭಾಗ ಮುಖ್ಯಸ್ಥ ಭಾಸ್ಕರ ಹೆಗಡೆ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.
Click this button or press Ctrl+G to toggle between Kannada and English