ಮಂಗಳೂರು : ನೀಟ್ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹಾಗೂ ಸಾಮಾಜಿಕ ಸೌಹಾರ್ದತೆಗೆ ಭಂಗ ತರುವಂತ ಅವಹೇಳನಕಾರಿ ಬರಹವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ನಿವಾಸಿ ಭರತ್ (36) ಎಂದು ಗುರುತಿಸಲಾಗಿದೆ. ಜುಲೈ 23 ರಂದು ‘KFC KHANDIGA’ ಎಂಬ ವಾಟ್ಸಾಪ್ ಗ್ರೂಪ್ನಲ್ಲಿ ಬಂದಿದ್ದ ಸ್ಕ್ರೀನ್ಶಾಟ್ ಒಂದನ್ನು ಪರಿಶೀಲಿಸಿದಾಗ, ಎರಡು ಕೋಮುಗಳ ನಡುವೆ ದ್ವೇಷ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ತರುವಂತಹ ಬರಹ ಇರುವುದು ಬೆಳಕಿಗೆ ಬಂದಿತ್ತು. ಈ ಬರಹವನ್ನು ಆರೋಪಿ ಭರತ್ ತನ್ನ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ನಲ್ಲಿ ಹಂಚಿಕೊಂಡಿದ್ದನು ಎಂದು ತಿಳಿದುಬಂದಿದೆ.
ಈ ಕುರಿತು ಸಲ್ಲಿಕೆಯಾದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಕ್ರೈಮ್ ನಂಬರ್ 160/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023 ರ ವಿವಿಧ ಕಠಿಣ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ಕಾಯ್ದಿರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










