ಬೆಳ್ತಂಗಡಿ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಗಡಿ ಭಾಗವಾದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ರಾತ್ರಿ ವೇಳೆ ಚಿರತೆಯೊಂದು ಪ್ರತ್ಯಕ್ಷಗೊಂಡಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಘಾಟಿಯ 11 ನೇ ಹೇರ್ಪಿನ್ ತಿರುವಿನಲ್ಲಿ ರಸ್ತೆ ಬದಿಯಲ್ಲಿ ತಡೆಗೋಡೆಯ ಮೇಲ ಕುಳಿತಿದ್ದ ಚಿರತೆಯು, ಬಳಿಕ ರಸ್ತೆಯಂಚಿನಲ್ಲಿ ಮೆಲ್ಲನೆ ಹೆಜ್ಜೆ ಹಾಕುತ್ತಿರುವ ದೃಶ್ಯಗಳನ್ನು ಆ ಹಾದಿಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ.
ಕಳೆದ ತಿಂಗಳು ಕೂಡ ಈ ಸ್ಥಳದಿಂದ ಸುಮಾರು 6 ಕಿ.ಮೀ ದೂರದ ಚಿಕ್ಕಮಗಳೂರು ಗಡಿ ಭಾಗದ ಘಾಟ್ನಲ್ಲಿ ರಸ್ತೆ ತಡೆಗೋಡೆ ಮೇಲೆ ಚಿರತೆ ಕಂಡುಬಂದಿತ್ತು. ಅಲ್ಲದೆ, ಕಳೆದ ವಾರ ಚಾರ್ಮಾಡಿ ಬಳಿಯ ನೆರಿಯಾ ಪ್ರದೇಶದ ರಬ್ಬರ್ ತೋಟದಲ್ಲೂ ಚಿರತೆಯ ಚಲನವಲನ ಪತ್ತೆಯಾಗಿತ್ತು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವುದು ಪ್ರಯಾಣಿಕರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ, ಘಾಟ್ ರಸ್ತೆಯಲ್ಲಿ ಸಂಚರಿಸುವ ಚಾಲಕರು ಮತ್ತು ಪ್ರಯಾಣಿಕರು ಹೆದರದೆ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಹಾಗೂ ಕಾಡುಪ್ರಾಣಿಗಳಿಗೆ ಯಾವುದೇ ಕಿರಿಕಿರಿ ಉಂಟುಮಾಡಬಾರದು ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು










